ಕೊನೆಗೂ ಬಿಡುಗಡೆಗೊಂಡ ನಿಗಮ, ಮಂಡಳಿ ಪಟ್ಟಿ: 34 ಶಾಸಕರಿಗೆ ಮಣೆ

Date:

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಪಡೆಯುವ ನಿಟ್ಟಿನಲ್ಲಿ ಕರ್ನಾಟಕ ಕಾಂಗ್ರೆಸ್‌ ಭರ್ಜರಿ ತಯಾರಿ ನಡೆಸಿದೆ. ಸರ್ಕಾರ ಬಂದು ಎಂಟು ತಿಂಗಳು ಕಳೆದರೂ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಕಾರ್ಯಕರ್ತರಿಗೆ ಹುದ್ದೆಗಳನ್ನು ಕೊಟ್ಟಿಲ್ಲ ಎಂಬ ಅಸಮಾಧಾನ ಕಾಂಗ್ರೆಸ್‌ ಪಾಳಯದಲ್ಲಿ ಭುಗಿಲೆದ್ದ ಮಧ್ಯೆಯೇ ಕೊನೆಗೂ ನಿಗಮ, ಮಂಡಳಿ ಪಟ್ಟಿಯು ಬಿಡುಗಡೆಗೊಂಡಿದೆ. ಈ ಪಟ್ಟಿಯಲ್ಲಿ ಒಟ್ಟು 34 ಶಾಸಕರಿಗೆ ಮಣೆ ಹಾಕಲಾಗಿದೆ. 34 ಶಾಸಕರನ್ನು ವಿವಿಧ ಮಂಡಳಿಗಳ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಅಧಿಕೃತ ಸುತ್ತೋಲೆಯನ್ನು ಸಿಎಂ ಕಚೇರಿ ಜ.26ರ ಸಂಜೆ ಹೊರಡಿಸಿದೆ.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ಸೇರಿದ ಬಳಿಕ ವಿಧಾನ ಪರಿಷತ್ ಸ್ಥಾನ ಪಡೆದುಕೊಂಡಿದ್ದ ಜಗದೀಶ್ ಶೆಟ್ಟರ್ ಅವರು, ನಿನ್ನೆ(ಜ.25) ಮತ್ತೆ ಬಿಜೆಪಿ ಸೇರಿದ ನಡುವೆಯೇ ಇಂದು ನಿಗಮ, ಮಂಡಳಿ ಪಟ್ಟಿಯಾಗಿದೆ.

“ವಿಧಾನಸಭಾ ಸದಸ್ಯರುಗಳನ್ನು ಅವರ ಹೆಸರಿನ ಮುಂದೆ ನಮೂದಿಸಿರುವ ನಿಗಮ, ಮಂಡಳಿಗಳಿಗೆ ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಸಚಿವ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲ ಸೌಲಭ್ಯಗಳೊಂದಿಗೆ ಹಾಗೂ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಮುಂದಿನ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಲಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಟ್ಟಿಯಲ್ಲಿಲ್ಲ ವಿಧಾನ ಪರಿಷತ್ ಹಾಗೂ ಹೊಸ ಶಾಸಕರು!

ಈಗ ಅಧಿಕೃತವಾಗಿ ಬಿಡುಗಡೆಗೊಂಡಿರುವ ಪಟ್ಟಿಯಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರಿಗೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಸ್ಥಾನ ನೀಡಿಲ್ಲ. ಅಂದಾಜು 4-5 ವಿಧಾನ ಪರಿಷತ್ ಸದಸ್ಯರಿಗೆ ಸ್ಥಾನ ಲಭಿಸುವ ಸೂಚನೆ ಇತ್ತಾದರೂ, ಅಂತಿಮ ಪಟ್ಟಿಯಲ್ಲಿ ಹೆಸರು ಕಂಡುಬಂದಿಲ್ಲ.

ಪಟ್ಟಿ ಹೀಗಿದೆ.

PATTI 1 PATTI 2

ಪಟ್ಟಿ 3

 

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...