ಬಡವರಿಗೆ ಆರ್ಥಿಕ ಶಕ್ತಿ ತುಂಬಿದ ಗ್ಯಾರಂಟಿ ಯೋಜನೆಗಳು: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬಕ್ಕೆ 4 ರಿಂದ 5 ಸಾವಿರ ರೂ.ಗಳು ಸೇರುತ್ತಿದ್ದು, ವರ್ಷಕ್ಕೆ 48 ರಿಂದ 50 ಸಾವಿರ ರೂ.ಗಳು ಸೇರುತ್ತದೆ. ಇದು ಬಡಜನರಿಗೆ ಸೌಲಭ್ಯ ನೀಡುತ್ತದೆ. ಬೆಲೆಯೇರಿಕೆ, ನಿರುದ್ಯೋಗ ಹೆಚ್ಚಾಗಿದ್ದು, ಬಡವರಿಗೆ ಕೊಂಡುಕೊಳ್ಳುವ ಶಕ್ತಿಯನ್ನು ಈ ಯೋಜನೆಗಳು ಹೆಚ್ಚಿಸುತ್ತವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ಬರುವಂತಾಗಬೇಕೆಂಬ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯದ ತತ್ವದಂತೆ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡಿದೆ” ಎಂದರು.

“1.18 ಕೋಟಿ ಮಹಿಳಾ ಯಜಮಾನಿಗೆ ತಿಂಗಳಿಗೆ 2,000 ನೀಡುತ್ತಿರುವುದು ಸತ್ಯವಲ್ಲವೇ? ಇದುವರೆಗೆ ಯಾವುದೇ ಜಾತಿ ಧರ್ಮ ಭಾಷೆ ಭೇದವಿಲ್ಲದೇ 130 ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಮೂಲಕ ಉಚಿತವಾಗಿ ಪ್ರಯಾಣಿಸಿರುವುದು ಸುಳ್ಳಾಗುವುದು ಸಾಧ್ಯವೇ? 200 ಯೂನಿಟ್ ವರೆಗೆ ಉಚಿತ ವಿದ್ಯುತ್ 1.51 ಕೋಟಿ ಜನರಿಗೆ ನೀಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ 170 ರೂ. ಫಲಾನುಭವಿಗಳಿಗೆ ತಲುಪುತ್ತಿದೆ. ಈ ಎಲ್ಲ ಸತ್ಯಗಳನ್ನು ಪರಿಶೀಲನೆ ನಡೆಸಿ ಮಾಧ್ಯಮದವರು ಸತ್ಯವಾದುದನ್ನು ಬರೆಯಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಲ್ದೀವ್ಸ್  ಮೋದಿ ನಿಂದನೆ ಖಂಡನೀಯ; ನಮ್ಮ ನಡವಳಿಕೆ ಶೋಚನೀಯ

ಯುವನಿಧಿ ಯೋಜನೆಗೆ ಇಂದು ಚಾಲನೆ

“ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿಯನ್ನು ಇಂದು ಜಾರಿಗೊಳಿಸಲಾಗುತ್ತಿದೆ. ಪದವಿ ಪಡೆದ ನಿರುದ್ಯೋಗಿಗಳಿಗೆ 3,000 ರೂ. ಹಾಗೂ ಡಿಪ್ಲೋಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ. ಭತ್ಯೆಯನ್ನು 2 ವರ್ಷಗಳ ಕಾಲ ನೀಡುವ ಯೋಜನೆಯಾಗಿದೆ. ಈ ಅವಧಿಯಲ್ಲಿ ಭತ್ಯೆಯ ಜೊತೆಗೆ ಉದ್ಯೋಗ ಲಭಿಸಲು ಬೇಕಾದಂತಹ ಕೌಶಲ್ಯವನ್ನು ಅಭಿವೃದ್ಧಿಗೊಳಿಸಲು ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ಈ ಎರಡು ವರ್ಷದೊಳಗೆ ಸರ್ಕಾರಿ, ಖಾಸಗಿ ಅಥವಾ ಸ್ವಯಂ ಉದ್ಯೋಗ ದೊರೆತಲ್ಲಿ ಯುವನಿಧಿ ಭತ್ಯೆಯನ್ನು ನೀಡಲಾಗುವುದಿಲ್ಲ. ಕೈಗಾರಿಕೆಗಳಲ್ಲಿ ಬೇಡಿಕೆಯಿರುವ ಕೌಶಲ್ಯದ ತರಬೇತಿಯನ್ನು ನೀಡಲಾಗುತ್ತಿದ್ದು, ತರಬೇತಿಯ ಅವಧಿಯನ್ನು ಸಂಬಂಧಪಟ್ಟ ಇಲಾಖೆ ನಿರ್ಧರಿಸಲಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...