ಮಹಿಳಾ ದೌರ್ಜನ್ಯ ಪ್ರಕರಣಗಳಲ್ಲಿ 151 ಸಂಸದರು, ಶಾಸಕರ ವಿರುದ್ಧ ಎಫ್‌ಐಆರ್; ಬಿಜೆಪಿಗರೇ ಹೆಚ್ಚು

Date:

ಭಾರತದ ಎಲ್ಲ ರಾಜ್ಯಗಳು ಮತ್ತು ಸಂಸತ್ತಿನ 151 ಮಂದಿ ಶಾಸಕರು ಮತ್ತು ಸಂಸದರು ಮಹಿಳಾ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅವರ ವಿರುದ್ಧ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಆರೋಪಗಳ ಮೇಲೆ ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಸ್ (ಎಡಿಆರ್‌) ಹೇಳಿದೆ.

ಶಾಸಕರು ಮತ್ತು ಸಂಸದರು ಚುನಾವಣೆಯ ಸಮಯದಲ್ಲಿ ಸಲ್ಲಿಸಿದ ನಾಮಪತ್ರಗಳಲ್ಲಿ ತಾವು ಎದುರಿಸುತ್ತಿರುವ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಆರೋಪಿಗಳಾಗಿರುವ ಶಾಸಕರು ಮತ್ತು ಸಂಸದರಲ್ಲಿ ಬಿಜೆಪಿಯವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ವರದಿ ಹೇಳಿದೆ.

2019ರಿಂದ 2024ರವರೆಗೆ ನಡೆದ ಎಲ್ಲ ಚುನಾವಣೆಗಳ ಸಮಯದಲ್ಲಿ ರಾಜಕಾರಣಿಗಳು ಸಲ್ಲಿಸಿರುವ ನಾಮಪತ್ರಗಳನ್ನು ಎಡಿಆರ್‌ ಪರಿಶೀಲಿಸಿದೆ. ಅವುಗಳಲ್ಲಿ ಗೆದ್ದು ಶಾಸಕರು, ಸಂಸದರಾಗಿ ಆಯ್ಕೆಯಾಗಿರುವ 4,809 ಮಂದಿಯ ಅಫಿಡವಿಟ್‌ಗಳ ಪೈಕಿ, 4,693 ನಾಮಪತ್ರಗಳನ್ನು ಪರಿಶೀಲಿಸಿ, ಎಡಿಆರ್ ವರದಿ ತಯಾರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

543 ಸಂಸದರ ಪೈಕಿ 16 ಮಂದಿ ಮತ್ತು ದೇಶದ 4,215 ಶಾಸಕರ ಪೈಕಿ 135 ಮಂದಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ. ಅವರಲ್ಲಿ, ಹೆಚ್ಚಿನ ಪಾಲು ಪಶ್ಚಿಮ ಬಂಗಾಳದ್ದಾಗಿದ್ದು, ಬಂಗಾಳದ 25 ಮಂದಿ ಹಾಲಿ ಸಂಸದರು – ಶಾಸಕರಿದ್ದಾರೆ ಎಂದು ವರದಿ ವಿವರಿಸಿದೆ.

ಇನ್ನು, ಮಹಿಳಾ ದೌರ್ಜನ್ಯದ ಆರೋಪಿತ ಜನಪ್ರತಿನಿಧಿಗಳಲ್ಲಿ 54 ಮಂದಿ ಸಂಸದ-ಶಾಸಕರು ಬಿಜೆಪಿಯವರಾಗಿದ್ದಾರೆ. ಕಾಂಗ್ರೆಸ್‌ನ 23 ಮತ್ತು ಟಿಡಿಪಿ 17 ಮಂದಿ ಕೂಡ ಮಹಿಳೆಯರ ಮೇಲಿನ ಅಪರಾಧಗಳಲ್ಲಿ ಆರೋಪಿಗಳಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...