ಎಡಿಜಿಪಿ ಚಂದ್ರಶೇಖರ್ ದೂರು ಆಧರಿಸಿ ಕುಮಾರಸ್ವಾಮಿ, ನಿಖಿಲ್, ಸುರೇಶ್ ಬಾಬು‌ ವಿರುದ್ಧ ಎಫ್‌ಐಆರ್‌

Date:

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ ಲೋಕಾಯಕ್ತ ಎಸ್‌ಐಟಿ ವಿಭಾಗದ ಮುಖ್ಯಸ್ಥ, ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರು ಆಧರಿಸಿ
ಸಂಜಯನಗರ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಎಡಿಜಿಪಿ ಚಂದ್ರಶೇಖರ್ ನೀಡಿದ ದೂರು ಆಧರಿಸಿ ಎನ್‌ಸಿಆ‌ರ್ ದಾಖಲಿಸಿಕೊಂಡಿದ್ದ ಪೊಲೀಸರು, 42ನೇ ಎಸಿಎಂಎಂ ನ್ಯಾಯಾಲಯದ ಆದೇಶದ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಬೆದರಿಕೆ ಹಾಗೂ ಸುಳ್ಳು ಆರೋಪಕ್ಕೆ ಸಂಬಂಧಿಸಿ ಎಸ್‌ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ಅವರು ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸುರೇಶ್ ಬಾಬು ವಿರುದ್ಧ ತಿಂಗಳ ಹಿಂದೆ ಸಂಜಯ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಮಾರಸ್ವಾಮಿ ಅವರು ಈ ಹಿಂದೆ ಪತ್ರಿಕಾಗೋಷ್ಠಿ ನಡೆಸಿ ನನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪ ಮಾಡಿದ್ದರು. ಬೆದರಿಕೆ ಹಾಕಿದ್ದರು. ಕರ್ನಾಟಕ ರಾಜ್ಯ ಕೇಡರ್‌ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಬೆದರಿಸಿದ್ದರು. ನನ್ನ ಕುಟುಂಬದ ವಿರುದ್ಧವೂ ಸುಳ್ಳು ಆಪಾದನೆ ಮಾಡಿದ್ದರು” ಎಂದು ಚಂದ್ರಶೇಖರ್ ದೂರಿನಲ್ಲಿ ಉಲ್ಲೇಖಿಸಿದ್ದರು.

ಈ ಸುದ್ದಿ ಓದಿದ್ದೀರಾ? ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಇಂದು ಮತದಾನ, ಮತದಾರರಿಗೆ 10 ಲಕ್ಷ ಉಡುಗೊರೆ

ಕುಮಾರಸ್ವಾಮಿ ವಿರುದ್ಧ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 16/2014 ಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಾಕ್ಷ್ಯಾಧಾರಗಳು ಲಭ್ಯವಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯಪಾಲರ ಅನುಮತಿ ಕೋರಿದ್ದೆ. ಈ ಹಿನ್ನೆಲೆಯಲ್ಲಿ ಸೆ.28 ಹಾಗೂ ಸೆ.29ರಂದು ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ತನ್ನ ವಿರುದ್ಧ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ಪೊಲೀಸ್ ದೂರಿನಲ್ಲಿ ತಿಳಿಸಿದ್ದರು.

ಈ ದೂರಿಗೆ ಸಂಬಂಧಿಸಿ ಕೇಂದ್ರ ಸಚಿವರ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯದ ಅನುಮತಿ ಕೋರಲಾಗಿತ್ತು. ಇದೀಗ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ. ಅದರಂತೆ ಸಂಜಯ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್.ಐ.ಆ‌ರ್.ನಲ್ಲಿ ಕುಮಾರಸ್ವಾಮಿ ಎ1, ನಿಖಿಲ್ ಎ2 ಹಾಗೂ ಸುರೇಶ್ ಬಾಬು ಎ3 ಆರೋಪಿ ಎಂದು ಉಲ್ಲೇಖಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...