ರಾಹುಲ್‌ ಗಾಂಧಿ ನಿಂದನೆ | ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್‌ಐಆರ್

Date:

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ನಿಂದನೆ ಮಾಡಿದ ಆರೋಪದಲ್ಲಿ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ಎಫ್‌ಐಆರ್ ದಾಖಲಾಗಿದೆ.

ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಜಾತಿಯ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದರು. ಈ ಹೇಳಿಕೆಯನ್ನು ಖಂಡಿಸಿದ್ದ ಯತ್ನಾಳ್, “ತಾನು ಯಾವ ಜಾತಿಯಲ್ಲಿ ಹುಟ್ಟಿದ್ದೇನೆ ಎಂಬುದು ರಾಹುಲ್ ಗಾಂಧಿಗೆ ತಿಳಿದಿಲ್ಲ. ಮುಸ್ಲಿಮರಿಗೆ ಹುಟ್ಟಿದ್ದಾನೋ, ಕ್ರೈಸ್ತರಿಗೆ ಹುಟ್ಟಿದ್ದಾನೋ ಎಂಬ ಬಗ್ಗೆ ತನಿಖೆ ಆಗಬೇಕು” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಈ ಹೇಳಿಕೆಯ ವಿರುದ್ಧವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್‌ ಅವರು ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಯತ್ನಾಳ್ 3

ಇದನ್ನು ಓದಿದ್ದೀರಾ? ಆರ್‌ಎಸ್‌ಎಸ್‌ ಎಚ್ಚರಿಕೆಗೂ ಬಗ್ಗದ ಯತ್ನಾಳ್ ಮಿತ್ರ ಪಡೆ; ಮುಂದುವರೆದ ಬಂಡಾಯ

“ರಾಹುಲ್ ಗಾಂಧಿ ಅವರ ವಿರುದ್ಧ ಅತ್ಯಂತ ಕೀಳು ಹಾಗೂ ವೈಯಕ್ತಿಕ ನಿಂದನೆ ಮಾಡಿರುವ ಹಿನ್ನೆಲೆಯಲಿ ಕೂಡಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, “ಯತ್ನಾಳ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗುತ್ತದೆ. ಹೇಳಿಕೆ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...