ಬೆಂಗಳೂರು | ಮಹದೇವಪುರ ಕ್ಷೇತ್ರದಲ್ಲಿ ‘ನಕಲಿ ಮತದಾರರ’ ಸೇರ್ಪಡೆ: ಪ್ರಕರಣ ದಾಖಲು

Date:

2024ರ ಲೋಕಸಭೆ ಚುನಾವಣೆಗೂ ಮುನ್ನ ಮಹದೇವಪುರ ವಿಧಾನಸಭೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದಲ್ಲಿ ನಕಲಿ ಮತದಾರರನ್ನು ಸೇರ್ಪಡೆ ಮಾಡಲಾಗಿರುವ ಬಗ್ಗೆ ಬೆಂಗಳೂರು ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ನಲ್ಲೂರುಹಳ್ಳಿ ನಿವಾಸಿ ವೈ ವಿನೋದ (39) ಎಂಬವರು ಚುನಾವಣಾ ವಂಚನೆ ಬಗ್ಗೆ ದೂರು ನೀಡಿದ್ದು, ಸರ್ಕಾರಿ ಅಧಿಕಾರಿಗಳು, ಇತರೆ ಖಾಸಗಿ ವ್ಯಕ್ತಿಗಳು ಲೋಕಸಭೆ ಚುನಾವಣೆಗೂ ಮುನ್ನ ಮತದಾರರ ಪಟ್ಟಿಗೆ ನಕಲಿ ಹೆಸರುಗಳನ್ನು ಸೇರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಒಂದೇ ಮನೆಯಲ್ಲಿ 4271 ಮತದಾರರು; ಮಹದೇವಪುರ ನಂತರ ಮತ್ತೊಂದು ಭಾರೀ ಮತಗಳ್ಳತನ ಬೆಳಕಿಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಂಚನೆಯು ಪ್ರಜಾಪ್ರಭುತ್ವ ಪ್ರಕ್ರಿಯೆಗಳ ಮೇಲೆ ಪರಿಣಾಮ ಬೀರುವ ಗಂಭೀರ ಸಮಸ್ಯೆಯಾಗಿದೆ. 2024ರ ಚುನಾವಣೆಗೆ ಮುಂಚಿತವಾಗಿ ಮಹದೇವಪುರ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ನಕಲಿ ಮತ್ತು ಸುಳ್ಳು ಮತದಾರರ ಬಗ್ಗೆ ನಿಷ್ಪಕ್ಷಪಾತ ಮತ್ತು ನ್ಯಾಯಯುತ ತನಿಖೆಯಾಗಬೇಕು. ಹಾಗೆಯೇ ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮತಗಳವು ಪ್ರಕರಣಗಳ ಬಗ್ಗೆ ನಿರಂತರವಾಗಿ ಪುರಾವೆಗಳನ್ನು ಬಹಿರಂಗಪಡಿಸುತ್ತಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಈ ಹಿಂದೆ ಬೆಂಗಳೂರಿನ ಮಹದೇವಪುರ ವಿಧಾನಸಭೆ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಮತ್ತು ಒಂದು ಲಕ್ಷಕ್ಕೂ ಹೆಚ್ಚು ನಕಲಿ ಮತಗಳು ಚಲಾವಣೆಯಾಗಿವೆ ಎಂದು ಗಂಭೀರ ಆರೋಪ ಮಾಡಿದ್ದರು.

ಒಂದೇ ಮನೆಯ ವಿಳಾಸದಲ್ಲಿ 80 ಮತದಾರರು ನೋಂದಣಿಯಾಗಿರುವುದೂ ಬಹಿರಂಗವಾಗಿದೆ. ಈ ಸಂಬಂಧ ಕೆಲವು ಮಾಧ್ಯಮಗಳೂ ತನಿಖಾ ವರದಿ ಬಿಡುಗಡೆ ಮಾಡಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...