ಗುಂಡಿಕ್ಕಿ ಕೊಲ್ಲುವ ಹೇಳಿಕೆ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಎಫ್‌ಐಆರ್

Date:

ದೇಶವನ್ನು ಇಬ್ಭಾಗ ಮಾಡುವ ಹೇಳಿಕೆ ನೀಡುವ ಡಿ. ಕೆ. ಸುರೇಶ್ ಹಾಗೂ ವಿನಯ್ ಕುಲಕರ್ಣಿ ಅವರಂಥವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಡಿಸಿಎಂ, ಬಿಜೆಪಿ ಮುಖಂಡ ಕೆ. ಎಸ್. ಈಶ್ವರಪ್ಪರ ವಿರುದ್ದ ಎಫ್‌ಐಆರ್ ದಾಖಲಾಗಿದೆ.

ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ನೀಡಲಾದ ಬಳಿಕ ಎಫ್‌ಐಆರ್ ದಾಖಲಾಗಿರುವುದಾಗಿ ವರದಿಯಾಗಿದೆ.

ಡಿ. ಕೆ. ಸುರೇಶ್ ಹಾಗೂ ವಿನಯ್ ಕುಲಕರ್ಣಿ ರಾಷ್ಟ್ರದ್ರೋಹಿಗಳು. ದೇಶ ವಿಭಜನೆ ಬಗ್ಗೆ ಮಾತನಾಡುವರು ಜಿನ್ನಾ ವಂಶಸ್ಥರು. ದೇಶ ಇಬ್ಬಾಗ ಮಾಡುವವರನ್ನು ಸುಮ್ಮನೆ ಬಿಡಬಾರದು. ಗುಂಡಿಕ್ಕಿ ಕೊಲ್ಲುವಂತಹ ಕಾನೂನನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಬೇಕು ಎಂಬ ಒತ್ತಾಯ ಮಾಡುವುದಾಗಿ ಹೇಳಿಕೆ ನೀಡಿ, ನಾಲಗೆ ಹರಿಯಬಿಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಬಿಜೆಪಿ ನೂತನ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ್ದ ಈಶ್ವರಪ್ಪರ ಹೇಳಿಕೆಗೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಎಫ್ ಐ ಆರ್ ದಾಖಲಾಗಿರುವುದನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಕೂಡ ಖಚಿತಪಡಿಸಿದ್ದಾರೆ.

ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು, ಕಾನೂನು ಮತ್ತು ಸುವ್ಯವಸ್ಥೆ ಹದಗೆಡಿಸುವ ಸಲುವಾಗಿ ಉದ್ರೇಕಕಾರಿ ಭಾಷಣ ಮಾಡಿದ್ದು ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ನಿಜಲಿಂಗಪ್ಪ ಬಡಾವಣೆಯ ನಿವಾಸಿ ಹನುಮಂತ ಎಂಬುವವರು ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿರುವ ಪೊಲೀಸರು ಈಶ್ವರಪ್ಪರ ವಿರುದ್ಧ ಐಪಿಸಿ ಕಲಂ 505 (1)ಸಿ, 505 (2), 506ರಡಿ ಎಫ್ ಐ ಆರ್ ದಾಖಲಿಸಲಾಗಿದೆ.

ಇದನ್ನು ಓದಿದ್ದೀರಾ? ಗುಂಡಿಕ್ಕಿ ಕೊಲ್ಲುವ ಕಾನೂನು ತಂದರೆ ಅರ್ಧ ಬಿಜೆಪಿ ಖಾಲಿ: ಈಶ್ವರಪ್ಪಗೆ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಸಚಿವರಾದ ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಈಶ್ವರಪ್ಪರ ವಿರುದ್ಧ ಮುಗಿಬಿದ್ದಿದ್ದರು. ಹೆಚ್. ಕೆ. ಪಾಟೀಲ್ ಅವರು 24 ಗಂಟೆಯೊಳಗೆ ಕ್ಷಮೆಯಾಚಿಸಬೇಕು ಎಂದು ಎಚ್ಚರಿಕೆ ನೀಡಿದ್ದರು. ಆದರೆ, ತನ್ನ ಹೇಳಿಕೆಗೆ ಬದ್ಧ ಎಂಬ ಹೇಳಿಕೆ ನೀಡಿದ್ದ ಈಶ್ವರಪ್ಪರ ವಿರುದ್ದ ಎಫ್ ಐ ಆರ್ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...