ಬೆಂಕಿ ಅವಘಡ | ಸಂತ್ರಸ್ತ ಕುಟುಂಬಗಳಿಗೆ ವೈಯಕ್ತಿಕವಾಗಿ ತಲಾ ಎರಡು ಲಕ್ಷ ನೀಡಿದ ಸಚಿವ ಝಮೀರ್ ಅಹಮದ್

Date:

  • ಗಣೇಶ ಚತುರ್ಥಿಯಂದು ಚಾಮರಾಜಪೇಟೆಯ ಆನಂದಪುರಂ ಕೊಳೆಗೇರಿಯಲ್ಲಿ ನಡೆದಿದ್ದ ದುರಂತ
  • ವೈಯಕ್ತಿಕವಾಗಿ ತಲಾ ಎರಡು ಲಕ್ಷ ರೂ. ನಂತೆ ಒಟ್ಟು 10 ಲಕ್ಷ ರೂ.ಪರಿಹಾರ ಹಣ ವಿತರಣೆ

ಚಾಮರಾಜಪೇಟೆಯ ಆನಂದಪುರಂ ಕೊಳೆಗೇರಿಯಲ್ಲಿ ಇತ್ತೀಚೆಗೆ ಸಂಭವಿಸಿದ ಸಿಲಿಂಡರ್ ಸ್ಫೋಟ ಘಟನೆಯಿಂದಾಗಿ ಹಾನಿಗೊಳಗಾದ ಐದು ಸಂತ್ರಸ್ತ ಕುಟುಂಬಗಳಿಗೆ ಸಚಿವ ಝಮೀರ್ ಅಹಮದ್ ಖಾನ್ ವೈಯಕ್ತಿಕವಾಗಿ ತಲಾ ಎರಡು ಲಕ್ಷ ರೂ.ನಂತೆ ಒಟ್ಟು 10 ಲಕ್ಷ ರೂ.ಪರಿಹಾರ ವಿತರಿಸಿದರು.

zameer 2

ಗಣೇಶ ಚತುರ್ಥಿ ದಿನದಂದೇ ಆನಂದಪುರಂ ಕೊಳೆಗೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿ, ಬೆಂಕಿಯ ಕೆನ್ನಾಲಿಗೆಗೆ ಸುಮಾರು 8 ಮನೆಗಳು ಬೆಂಕಿಗಾಹುತಿಯಾಗಿತ್ತು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದರು.

ವಿನಾಯಕ ಚಿತ್ರಮಂದಿರರದ ಬಳಿಯ ಗೋದಾಮಿನಲ್ಲಿ ಉಂಟಾದ ಶಾರ್ಟ್‌ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿತ್ತು. ವಿಷಯ ತಿಳಿದು ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅವಘಡ ನಡೆಯದಂತೆ ತಡೆದಿದ್ದರು.

zmr
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...