ಬೆಂಗಳೂರಿನ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳ ಕಾರ್ಯಕ್ರಮ: ಡಿ ಕೆ ಶಿವಕುಮಾರ್

Date:

“ಶುದ್ಧ ಕುಡಿಯುವ ನೀರು, ರಸ್ತೆಗುಂಡಿ ಸಮಸ್ಯೆ ಸೇರಿದಂತೆ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳ ಕಾರ್ಯಕ್ರಮ ರೂಪಿಸಲಾಗಿದೆ” ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ವೈಯಾಲಿಕಾವಲ್‌ನ ಐಟಿಪಿ ಕಚೇರಿಯಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

“ಬಿಬಿಎಂಪಿ ಆಸ್ತಿಗಳ ಗುರುತಿಸುವಿಕೆ ಹಾಗೂ ಸಂರಕ್ಷಣೆ, ಆಸ್ತಿ ತೆರಿಗೆ, ರಾಜಕಾಲುವೆ, ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಈ ಐದು ಅಂಶಗಳ ಕಾರ್ಯಕ್ರಮದಲ್ಲಿ ಸೇರಿವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಖ್ಯಮಂತ್ರಿಗಳ ಜೊತೆಗೂಡಿ ಬುಧವಾರದಂದು ಬೆಂಗಳೂರು ನಗರದ ಒಂದಷ್ಟು ಭಾಗಗಳಲ್ಲಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಅನೇಕ ಸಮಸ್ಯೆಗಳು ಕಂಡು ಬಂದ ಕಾರಣ ಬಿಬಿಎಂಪಿ ವಲಯ ಅಧಿಕಾರಿಗಳು ಸೇರಿದಂತೆ ಬೆಂಗಳೂರಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಚರ್ಚೆ ನಡೆಸಲಾಯಿತು” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

“ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ಥಿ ಹಾಗೂ ನಗರದ ಎಲ್ಲ ಭಾಗಗಳಲ್ಲಿ ಸರಬರಾಜಾಗುವ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಬಿಬಿಎಂಪಿ ನಡೆಸಬೇಕು ಹಾಗೂ ಗುಣಮಟ್ಟದ ಫಲಿತಾಂಶವನ್ನು ಬಿಡ್ಬ್ಲೂ ಎಸ್ ಎಸ್ ಬಿಗೆ ನೀಡಬೇಕು ಎಂದು ಸೂಚಿಸಲಾಗಿದೆ. ರಾಜಕಾಲುವೆ ಒತ್ತುವರಿ ತೆರವಿಗೆ ನ್ಯಾಯಾಲಯ ಈ ಹಿಂದೆ ನಿರ್ದೇಶನ ನೀಡಿತ್ತು. ಅದರಂತೆ 2016-17 ರಲ್ಲಿ 2,626 ಒತ್ತುವರಿಗಳನ್ನು ಗುರುತಿಸಲಾಗಿತ್ತು. 2022- 23 ಹೊತ್ತಿಗೆ 556 ಒತ್ತುವರಿ ತೆರವು ಮಾಡಲಾಗಿತ್ತು. ಈಗ 1136 ಹೊಸದಾಗಿ ಒತ್ತುವರಿಗಳನ್ನು ಗುರುತಿಸಲಾಗಿದ್ದು, ಒಟ್ಟು 4,316 ಒತ್ತುವರಿಗಳನ್ನು ಗುರುತಿಸಲಾಗಿದೆ. ಸ್ಯಾಟಲೈಟ್, ಗೂಗಲ್ ಇಮೇಜ್ ಮತ್ತು ಸರ್ವೇ ಇಲಾಖೆ ಈ ಒತ್ತುವರಿ ಮಾಹಿತಿ ಸಂಗ್ರಹಿಸಿದೆ. ಒತ್ತುವರಿ ತೆರವುಗೊಳಿಸಲು ಬಿಎಂಟಿಎಫ್ ಗೆ ಕಾನೂನಾತ್ಮಕವಾಗಿ ಮತ್ತು ಎಲ್ಲಾ ರೀತಿಯ ಬೆಂಬಲ ನೀಡಬೇಕು ಎಂದು ಮಾರ್ಗದರ್ಶನ ನೀಡಲಾಗಿದೆ” ಎಂದು ಡಿಸಿಎಂ ಮಾಹಿತಿ ನೀಡಿದರು.

“ಬಾಗಿಲಿಗೆ ಬಂತು ಸರ್ಕಾರ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒತ್ತುವರಿ ವಿಚಾರವಾಗಿ ಬಂದಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ. 182 ಕೆರೆಗಳಲ್ಲಿ 116 ಕೆರೆಗಳ ಒತ್ತುವರಿ ಬಗ್ಗೆ ಸರ್ವೇ ನಡೆಸಬೇಕಾಗಿದೆ. ಬಾಕಿ ಉಳಿದ ಕೆರೆಗಳನ್ನು ಸರ್ವೇ ನಡೆಸಬೇಕು ಹಾಗೂ ಬಿಬಿಎಂಪಿ ಆಸ್ತಿಗಳನ್ನು ಗುರುತು ಮಾಡಬೇಕು. ಪಾಲಿಕೆ ಆಸ್ತಿ ಸಂರಕ್ಷಣೆ ಸೇರಿದಂತೆ ಒತ್ತುವರಿ ತೆರವಿಗೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಲಾಗಿದೆ. ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಜವಾಬ್ದಾರಿಯನ್ನು ಬಿಡ್ಬ್ಲೂ ಎಸ್‌ಎಸ್‌ಬಿಗೆ ವಹಿಸಲಾಗಿದೆ. ಕೆರೆಗಳಲ್ಲಿ ನೀರಿದ್ದರೆ ಒತ್ತುವರಿ ತಪ್ಪುತ್ತದೆ, ಅಂತರ್ಜಲ ಹೆಚ್ಚುತ್ತದೆ. ಆದ ಕಾರಣ ಈ ಕ್ರಮ ತೆಗೆದುಕೊಳ್ಳಲಾಗಿದೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಇದನ್ನು ಓದಿದ್ದೀರಾ? ಅನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರ ಮೃತ್ಯು: ಮನೆಗೆ ಭೇಟಿ ನೀಡಿ ಪರಿಹಾರ ಘೋಷಿಸಿದ ಸಿಎಂ

“ನಗರದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿಗಳು ಇವೆ ಎಂದು ಸಿಎಂ ಮಾಹಿತಿ ನೀಡಿದ್ದರು. ಲೋಕಸಭಾ ಚುನಾವಣಾ ಫಲಿತಾಂಶ ಬಂದ ನಂತರ ಸಾರ್ವಜನಿಕರೇ ರಸ್ತೆಗುಂಡಿಗಳ ಫೋಟೋ ತೆಗೆದು ಮಾಹಿತಿ ನೀಡುವ ಆ್ಯಪ್ ಬಿಡುಗಡೆ ಮಾಡಲಾಗುವುದು. ಮುಂದಿನ 15 ದಿನಗಳಲ್ಲಿ ಎಲ್ಲ ರಸ್ತೆಗುಂಡಿಗಳನ್ನು ಮುಚ್ಚಬೇಕು ಎಂದು ತಿಳಿಸಲಾಗಿದೆ” ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...