ಚಾಮುಂಡೇಶ್ವರಿಗೆ ಐದು ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ

Date:

  • ವೈಯಕ್ತಿಕವಾಗಿ ದೇವಿಗೆ ಹಣ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
  • ಶಾಸಕ ದಿನೇಶ ಗೂಳಿಗೌಡರಿಂದ ನಾಡದೇವಿಗೆ ಹಣ ಸಮರ್ಪಣೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ಚಾಮುಂಡೇಶ್ವರಿ ದೇವಿಗೆ ಸಮರ್ಪಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು.

ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲ ಕಂತು ಸಲ್ಲಿಸಿದ್ದ ಸಿಎಂ, ಡಿಸಿಎಂ

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, “ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9 ರಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಧಿಯಲ್ಲಿ ಗ್ಯಾರಂಟಿ ಕಾರ್ಡ್ ಗಳನ್ನಿಟ್ಟು ಹರಕೆ ಕಟ್ಟಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಶಕ್ತಿ ನೀಡುವಂತೆ ತಾಯಿಯಲ್ಲಿ ಬೇಡಿಕೊಂಡಿದ್ದರು. ಅದರಂತೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಭೂತಪೂರ್ವ ಜಯಭೇರಿ ಬಾರಿಸಿ ಅಧಿಕಾರವನ್ನು ಹಿಡಿದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದು 100 ದಿನ ಕಳೆಯುವುದರೊಳಗೆ ಭರವಸೆ ನೀಡಿದ್ದಂತೆ ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ” ಎಂದಿದ್ದಾರೆ.

“ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಮೊದಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ನಾನು, ಶಾಸಕರಾದ ದಿನೇಶ್ ಗೂಳಿಗೌಡ ಇತರ ಪ್ರಮುಖರು ದೇವಿಯ ದರ್ಶನ ಮಾಡಿ‌ ಹರಕೆ ತೀರಿಸಿದ್ದೆವು. ರಾಜ್ಯದ ಯಜಮಾನಿಯರ‌ ಖಾತೆಗೆ ಪ್ರತಿ ತಿಂಗಳು ಜಮಾ ಮಾಡುವ ತಲಾ 2 ಸಾವಿರ ರೂ.ಗಳ ಮೊದಲ ಕಂತನ್ನು ತಾಯಿ ಚಾಮುಂಡೇಶ್ವರಿ ದೇವಿಗೆ ಅಂದು ಸಮರ್ಪಣೆ ಮಾಡಿದ್ದೆವು” ಎಂದು ಹೆಬಾಳ್ಕರ್ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತೆಲಂಗಾಣ ಚುನಾವಣೆ | ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ: ಸಿದ್ದರಾಮಯ್ಯ

“ಪ್ರತಿ ತಿಂಗಳು ತಾಯಿ ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಕಂತನ್ನು ನೀಡುವಂತೆ ಶಾಸಕ ದಿನೇಶ ಗೂಳಿಗೌಡ ಅವರು ಸಿಎಂ‌ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ದರು. ಅವರು ತಕ್ಷಣ ಈ ಕುರಿತು ಕ್ರಮ ವಹಿಸುವಂತೆ ಸೂಚಿಸಿದ್ದರು. ಆ ಹಿನ್ನೆಲೆಯಲ್ಲಿ ಒಂದೇ ಸಲ ಎಲ್ಲ ಕಂತಿನ ಹಣವನ್ನು ನಾಡದೇವಿಗೆ ಅರ್ಪಿಸಲಾಗಿದೆ” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

“ಮೊದಲ ಕಂತನ್ನು ಸಿಎಂ, ಡಿಸಿಎಂ ಹಾಗೂ ನಾನು ತಾಯಿ ಚಾಮುಂಡೇಶ್ವರಿ ದೇವಿಗೆ ಅರ್ಪಿಸಿದ್ದೇವೆ. ಹಾಗಾಗಿ ಉಳಿದ 59 ತಿಂಗಳ ಹಣವನ್ನು ದೇವಿಗೆ ನಾನು ವೈಯಕ್ತಿಕವಾಗಿ ಸಲ್ಲಿಸುತ್ತಿದ್ದೇನೆ. ಈ ಮೊತ್ತವನ್ನು ಶಾಸಕರಾದ ದಿನೇಶ್ ಗೂಳಿಗೌಡ ಅವರ ಮೂಲಕ ಸಮರ್ಪಿಸುತ್ತಿದ್ದೇನೆ” ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

5 ವರ್ಷವೂ ಯೋಜನೆ

“ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಗೃಹಲಕ್ಷ್ಮೀ ಯೋಜನೆಯು ದೇಶದಲ್ಲಿ, ಅಥವಾ ವಿಶ್ವದಲ್ಲಿ ಜಾರಿಯಾದ ಅತಿ ವಿಶಿಷ್ಟ ಹಾಗೂ ಜನಪ್ರಿಯ ಯೋಜನೆಯಾಗಿದೆ. ಇದುವರೆಗೆ ರಾಜ್ಯಾದ್ಯಂತ 1 ಕೋಟಿ 17 ಲಕ್ಷ ಯಜಮಾನಿಯರು ಗೃಹಲಕ್ಷ್ಮಿ ಯೋಜನೆ ಮೂಲಕ ಹಣ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 1 ಕೋಟಿ 10 ಲಕ್ಷ ಯಜಮಾನಿಯರ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತಿದೆ” ಎಂದಿದ್ದಾರೆ.

“ಯೋಜನೆಗಾಗಿ ನಮ್ಮ ಸರ್ಕಾರ 11,200 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಸುಮಾರು 2,100 ಕೋಟಿ ರೂ.ಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದುವರೆಗೆ ಸುಮಾರು 6 ಸಾವಿರ ಕೋಟಿ ರೂ. ಜಮಾ ಆಗಿದೆ. 2028 ರ ವಿಧಾನಸಭೆ ಚುನಾವಣೆಯಲ್ಲೂ ನಾವು ಮತ್ತೆ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಪುನಃ, ಪುನಃ ಮುಂದುವರಿಸಲಿದ್ದೇವೆ. ಯೋಜನೆ 3 ತಿಂಗಳಿಗೆ ನಿಲ್ಲುತ್ತದೆ, 6 ತಿಂಗಳಿಗೆ ಸ್ಥಗಿತವಾಗುತ್ತದೆ. ಲೋಕಸಭಾ ಚುನಾವಣೆಯ ನಂತರ ಮುಕ್ತಾಯವಾಗುತ್ತದೆ ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಅವುಗಳಿಗೆ ಕಿವಿಗೊಡಬೇಡಿ. ಕೇವಲ ಈ ಐದು ವರ್ಷವಲ್ಲ, ಮುಂದಿನ ಐದು ವರ್ಷವೂ ನಾವೇ ಅಧಿಕಾರದಲ್ಲಿರುತ್ತೇವೆ. ಮತ್ತೆ ಈ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ” ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...