ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಶುಭ ಮುಹೂರ್ತಕ್ಕೆ ಕಾಯುತ್ತಿದ್ದೀರಾ? : ಸರ್ಕಾರಕ್ಕೆ ಹೈಕೋರ್ಟ್ ತರಾಟೆ

Date:

  • ಅನಧಿಕೃತವಾಗಿ ಹಾಕಲಾಗುತ್ತಿರುವ ಫ್ಲೆಕ್ಸ್ ಬ್ಯಾನರ್ ತಡೆಗೆ ಕ್ರಮ ಕೈಗೊಳ್ಳದ ಬಿಬಿಎಂಪಿ
  • ಒಂದೇ ಒಂದು ಅನಧಿಕೃತ ಫ್ಲೆಕ್ಸ್ ಕಂಡರೂ ತಲಾ 50 ಸಾವಿರ ದಂಡ ವಿಧಿಸಲು ಸೂಚನೆ

ಅನಧಿಕೃತ ಜಾಹೀರಾತು ಹಾವಳಿ ತಡೆಯಲು ಪಂಚವಾರ್ಷಿಕ ಯೋಜನೆ ಬೇಕೆ? ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಶುಭ ಮುಹೂರ್ತಕ್ಕಾಗಿ ಕಾಯುತ್ತಿದ್ದೀರಾ? …ಹೀಗಂತ ಸರ್ಕಾರವನ್ನು ಪ್ರಶ್ನಿಸಿದ್ದು ಹೈಕೋರ್ಟ್‌.

ಬೆಂಗಳೂರಿನಲ್ಲಿ ಅನಧಿಕೃತವಾಗಿ ಹಾಕಲಾಗುತ್ತಿರುವ ಫ್ಲೆಕ್ಸ್, ಬ್ಯಾನರ್, ಬಂಟಿಂಗ್​​ಗಳ ತಡೆಗೆ ಬಿಬಿಎಂಪಿ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

‘ಚುನಾವಣೆ ವೇಳೆ 60 ಸಾವಿರ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಲಾಗಿದೆ. ಆದರೆ ಕೇವಲ 134 ದೂರು ಪರಿಗಣಿಸಿ, 40 ಎಫ್‌ಐಆರ್ ದಾಖಲಿಸಲಾಗಿದೆ. ಫ್ಲೆಕ್ಸ್ ಅಳವಡಿಸಿದ ರಾಜಕೀಯ ಪಕ್ಷಗಳ ಪದಾಧಿಕಾರಿಗಳ ಮೇಲೆ ಕ್ರಮ ಏಕಿಲ್ಲ’ ಎಂದು ಹೈಕೋರ್ಟ್‌ ದ್ವಿಸದಸ್ಯ ಪೀಠ ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಬೆಂಗಳೂರು ಸುಂದರವಾಗಿ ಕಾಣಬೇಕು ಎಂಬುವುದು ಸರ್ಕಾರಕ್ಕೆ ಬೇಕಿಲ್ಲವೆ? ನಗರದ ತುಂಬೆಲ್ಲಾ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ಇರಬೇಕೆಂದು ಸರ್ಕಾರದ ಅಪೇಕ್ಷೆಯೇ? ಬ್ರ್ಯಾಂಡ್ ಬೆಂಗಳೂರಿಗೆ ಫ್ಲೆಕ್ಸ್, ಬ್ಯಾನರ್​​ಗಳಿಂದ ಕಳಂಕ ಅಂಟುತ್ತಿದೆ. ನಗರದ ತುಂಬೆಲ್ಲಾ ಫ್ಲೆಕ್ಸ್, ಬ್ಯಾನರ್​ ರಾರಾಜಿಸುತ್ತಲೇ ಇವೆ. ಬೆಂಗಳೂರನ್ನು ಅದರಷ್ಟಕ್ಕೇ ಬಿಡಲಾಗಿದೆ. ಇದು ಅಚ್ಚರಿ, ಆಘಾತಕಾರಿ ಹಾಗೂ ಆತ್ಮಸಾಕ್ಷಿ ಕಲಕುವಂತಹದ್ದಾಗಿದೆ. ಬಿಬಿಎಂಪಿ ಅಸಹಾಯಕತೆಯಿಂದ ಕೈ ಎತ್ತಿದೆ. ನೀವೇನು ಕ್ರಮ ಕೈಗೊಂಡಿದ್ದೀರಿ’ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿರುವ ಹೈಕೋರ್ಟ್, ಇನ್ನು ಮುಂದೆ ಒಂದೇ ಒಂದು ಅನಧಿಕೃತ ಫ್ಲೆಕ್ಸ್ ಕಂಡರೂ ತಲಾ 50 ಸಾವಿರ ದಂಡ ವಿಧಿಸಿ ಎಂದು ಸೂಚನೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಆರ್‌ಪಿಎಫ್‌ ಕಾನ್‌ಸ್ಟೆಬಲ್‌ನಿಂದ ಹತ್ಯೆಗೊಳಗಾದ ನಾಲ್ವರಲ್ಲಿ ಓರ್ವ ಬೀದರ್‌ನವರು

‘ರಾಜ್ಯ ಸರ್ಕಾರ ತಲಾ 50 ಸಾವಿರ ಠೇವಣಿ ಇಡಬೇಕು. ಅನಧಿಕೃತ ಜಾಹೀರಾತು ಫಲಕ ಅಳವಡಿಸಲು ಅವಕಾಶ ನೀಡುವ ಕಟ್ಟಡಗಳ ಮಾಲೀಕರಿಗೂ ನೋಟಿಸ್ ಕಳುಹಿಸಬೇಕು. ಫ್ಲೆಕ್ಸ್ ಮೂಲಕ ಶುಭಾಶಯ ಕೋರುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧವೂ ಮೇಲಾಧಿಕಾರಿಗಳು ಇಲಾಖಾ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಬೇಕು. ಬೆಂಗಳೂರಿನ ಆಡಳಿತದ ಹೊಣೆ ಹೊತ್ತವರು ಈ ಬಗ್ಗೆ ಗಮನಹರಿಸಬೇಕು. ಮೂರು ವಾರಗಳಲ್ಲಿ ಕ್ರಮ ಕೈಗೊಂಡ ವರದಿ ಸಲ್ಲಿಕೆ ಮಾಡಬೇಕೆಂದು ಹೈಕೋರ್ಟ್​ ಖಡಕ್ ನಿರ್ದೇಶನ ನೀಡಿದೆ.

ಮಾಯಿಗೇ ಗೌಡ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸಿಜೆ ಪ್ರಸನ್ನ ಬಿ. ವರಾಳೆ ಹಾಗೂ ನ್ಯಾ. ಎಂ.ಜಿ.ಎಸ್. ಕಮಲ್​ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...