ಕಾನೂನು ಸುವ್ಯವಸ್ಥೆ ಸುಗಮ ಆಗಿರಬೇಕಾದರೆ ಅಸಮಾನತೆ ಅಳಿಯಬೇಕು: ಸಿಎಂ ಸಿದ್ದರಾಮಯ್ಯ

Date:

ಸ್ವಾತಂತ್ರ್ಯ ಬಂದು, ಸಂವಿಧಾನ ರಚನೆಯಾಗಿ 75 ವರ್ಷಗಳಾದರೂ ಅಸಮಾನತೆಯನ್ನು ಇನ್ನೂ ತೆಗೆದುಹಾಕಲು ಸಾಧ್ಯವಾಗಿಲ್ಲ. ವಿಧಾನಸೌಧ, ಸುವರ್ಣಸೌಧ, ವಿಕಾಸಸೌಧದಲ್ಲಿ ಕುಳಿತು ಸಮ ಸಮಾಜ ತರುವ ದಿಕ್ಕಿನಲ್ಲಿ ಶ್ರಮಿಸಬೇಕು. ಕಾನೂನು ಸುವ್ಯವಸ್ಥೆ ಸುಗಮ ಆಗಿರಬೇಕಾದರೆ ಅಸಮಾನತೆ ಅಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ನೂತನ ನಿತ್ಯ ದೀಪಾಲಂಕಾರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. “ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಸಾರ್ಥಕಗೊಳಿಸುವ ಕೆಲಸ ನಮ್ಮಿಂದ ಆಗಬೇಕು. ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದಾರೆ” ಎಂದರು.

ಇದನ್ನು ಓದಿದ್ದೀರಾ? ಸಿದ್ದರಾಮಯ್ಯರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ ಆರೋಪ: ‘ಶಾಸಕ ಹರೀಶ್‌ ಪೂಂಜಾ ಹೇಳಿಕೆಯ ವಿಡಿಯೋ ಒದಗಿಸಿ’ ಎಂದ ಹೈಕೋರ್ಟ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಸತ್ತು ಮತ್ತು ವಿಧಾನಸೌಧ ಜನರ, ರಾಜ್ಯದ ಮತ್ತು ದೇಶದ ಸಮಸ್ಯೆಗಳನ್ನು ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ದೇಗುಲಗಳು. ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತನ್ನು ಸಾರ್ಥಕಗೊಳಿಸುವ ರೀತಿಯಲ್ಲಿ ಪ್ರತಿಯೊಬ್ಬರೂ ಕೆಲಸ ಮಾಡಬೇಕು. ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಬೇಕು” ಎಂದು ಕರೆ ನೀಡಿದರು.

“ಜನರ ಕೆಲಸ ಸರಿಯಾಗಿ ಮಾಡಲು ನಮ್ಮನ್ನು ವಿಧಾನಸೌಧಕ್ಕೆ ಕಳುಹಿಸಿದ್ದಾರೆ. ಈ ಉದ್ದೇಶಕ್ಕಾಗಿ ವಿಧಾನಸೌಧ ಕಟ್ಟಿಸಲಾಗಿದೆ. ಈ ಉದ್ದೇಶ ಈಡೇರಿಸಿ‌ ಜನರ ಸಮಸ್ಯೆ ಬಗೆಹರಿಸುವ ಶಕ್ತಿ ನಮಗೆ ಬರಲಿ, ರಾಜ್ಯದ ಜನತೆಗೂ ಆರ್ಥಿಕ ಶಕ್ತಿ ತರಲು ಯತ್ನಿಸೋಣ” ಎಂದರು.

ಇದನ್ನು ಓದಿದ್ದೀರಾ? ಮೀಸಲಾತಿ ಕುರಿತ ಕರಂದ್ಲಾಜೆ ಹೇಳಿಕೆ; ಅಜ್ಞಾನಕ್ಕೆ ಮದ್ದಿಲ್ಲ ಎಂದ ಸಿದ್ದರಾಮಯ್ಯ

ಇದೇ ಸಂದರ್ಭದಲ್ಲಿ, ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರವನ್ನು ಕಾರ್ಯಗತ ಮಾಡಿಸಿದ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಅವರಿಗೆ ಸರ್ಕಾರದ ಪರವಾಗಿ ಮುಖ್ಯಮಂತ್ರಿಗಳು ಅಭಿನಂದಿಸಿದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ವಿಧಾನಸಭಾಧ್ಯಕ್ಷ ಯು ಟಿ ಖಾದರ್, ಸಚಿವರಾದ ಕೆ ಜೆ ಜಾರ್ಜ್, ಹೆಚ್ ಕೆ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಎಲ್ ಕೆ ಅತೀಕ್ ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...