ಭ್ರೂಣ ಹತ್ಯೆ ತಡೆಗೆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚನೆ: ಸಚಿವ ದಿನೇಶ್ ಗುಂಡೂರಾವ್

Date:

ಭ್ರೂಣ ಹತ್ಯೆ ತಡೆಯಲು ಕಠಿಣ ಕ್ರಮಗಳನ್ನ ಕೈಗೊಳ್ಳಲು ಮುಂದಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭ್ರೂಣ ಹತ್ಯೆ ತಡೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚಿಸುವುದಾಗಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ PC&PNDT ಕಾಯ್ದೆ ಅಡಿ ರಚಿಸಲಾಗಿದ್ದ ಮೇಲ್ವಿಚಾರಣಾ ಸಮಿತಿಯ ಜೊತೆ ಸಭೆ ನಡೆಸಿದ ಸಚಿವರು, ಭ್ರೂಣ ಹತ್ಯೆ ವಿಚಾರದಲ್ಲಿ ಜಾಗೃತಿಯ ಜೊತೆಗೆ ಕಠಿಣ ಕ್ರಮಗಳು ಆಗಬೇಕು ಎಂದು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ದಿನೇಶ್ ಗುಂಡೂರಾವ್, “ಮೇಲ್ವಿಚಾರಣಾ ಸಮಿತಿಯ ಮೊದಲ ಸಭೆ ಇಂದು ಸೇರಲಾಗಿತ್ತು. ನಾಲ್ವರು ಶಾಸಕಿಯರು ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಮಿತಿಯ ಸದಸ್ಯರಿದ್ದಾರೆ. ಭ್ರೂಣ ಹತ್ಯೆ ತಡೆ ನಿಟ್ಟಿನಲ್ಲಿ ಶಾಸಕಿ ರೂಪಕಲಾ, ನಯನಾ ಮೊಟಮ್ಮ, ಲತಾ ಮಲ್ಲಿಕಾರ್ಜುನ್ ಅವರುಗಳು ತಮ್ಮ ಸಲಹೆಗಳನ್ನ ನೀಡಿದ್ದಾರೆ. ಪ್ರತಿ ಹಂತದಲ್ಲಿ ಮೇಲ್ವಿಚಾರಣೆ ನಡೆಸುವುದರ ಜೊತೆಗೆ, ಹೆಣ್ಣು ಮಕ್ಕಳು ಸಮಾಜಕ್ಕೆ ಎಷ್ಟು ಮುಖ್ಯ ಎಂಬುದರ ಬಗ್ಗೆ ದೊಡ್ಡ ಮಟ್ಟದಲ್ಲಿ ಜಾಗೃತಿ ಮೂಡಿಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭ್ರೂಣ ಹತ್ಯೆಗಳ ತಡೆಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ರಾಜ್ಯಮಟ್ಟದಲ್ಲಿ ಆರೋಗ್ಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಿಲ್ಲಾ ಮಟ್ಟದಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆ ರಚಿಸಲು ನಿರ್ಧರಿಸಿದ್ದೇವೆ” ಎಂದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ಈ ಕಚ್ಚಾಟ, ‘ಆತ್ಮಹತ್ಯೆ’ಯ ಹುಚ್ಚಾಟ

“ಈ ಕಾರ್ಯಪಡೆಗಳು ಭ್ರೂಣ ಹತ್ಯೆ ಪ್ರಕರಣಗಳ ವಿಚಾರದಲ್ಲಿ pc&pndt ಕಾಯ್ದೆ ಅಡಿ ಕಾರ್ಯನಿರ್ವಹಿಸಿ ಹೆಚ್ಚು ನಿಗಾ ವಹಿಸಲಿವೆ. ಅಲ್ಲದೇ ಆರೋಗ್ಯ ಇಲಾಖೆಯ ಸಕ್ಷಮ ಪ್ರಾಧಿಕಾರಕ್ಕೆ ಪ್ರತ್ಯೇಕವಾಗಿ ಎಸಿಪಿ ಮಟ್ಟದ ಪೊಲೀಸ್ ಅಧಿಕಾರಿ ಹಾಗೂ ಇಬ್ಬರು ಸಬ್ ಇನ್ಸ್ ಪೆಕ್ಟರ್ ನಿಯೋಜಿಸುವಂತೆ ಗೃಹ ಇಲಾಖೆಗೆ ಪತ್ರ ಬರೆಯಲಾಗುವುದು. ಇದರಿಂದ ಭ್ರೂಣ ಹತ್ಯೆ ಪ್ರಕರಣಗಳನ್ನ ಟ್ರೇಸ್ ಮಾಡಲು ಸಹಕಾರಿಯಾಗಲಿದೆ” ಎಂದು ವಿವರಿಸಿದರು.

“ಭ್ರೂಣ ಹತ್ಯೆ ನಡೆಸುತ್ತಿರುವವರ ಮೇಲೆ ಕಠಿಣ ಕ್ರಮಗಳು ಆಗಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಈಗಿರುವ ಕಾಯ್ದೆಯಲ್ಲಿ 10 ಸಾವಿರ ದಂಡ, 3 ವರ್ಷ ಜೈಲು ಶಿಕ್ಷೆ ಇದೆ. 5 ಲಕ್ಷದ ವರೆಗೆ ದಂಡ ವಿಧಿಸಿ, 5 ವರ್ಷ ಜೈಲು ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ನಾನ್ ಬೇಲಬಲ್ ಕೇಸ್ ಆಗಬೇಕು. ಈ ನಿಟ್ಟಿನಲ್ಲಿ ಮುಂದಿನ ಸಭೆ ತೀರ್ಮಾನ ಕೈಗೊಳ್ಳುವುದು” ಎಂದು ದಿನೇಶ್ ಗುಂಡೂರಾವ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...