ಅಸ್ಸಾಂ | ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಸೇರ್ಪಡೆ

Date:

ಅಸ್ಸಾಂ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಭೂಪೇನ್ ಕುಮಾರ್ ಬೋರಾ ಭಾನುವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಸದ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಸ್ಸಾಂ ಬಿಜೆಪಿ ಪ್ರಧಾನ ಕಚೇರಿ ‘ವಾಜಪೇಯಿ ಭವನ’ದಲ್ಲಿ ನಡೆದ ಸಮಾರಂಭದಲ್ಲಿ ಬೋರಾ ಅಸ್ಸಾಂ ಬಿಜೆಪಿ ರಾಜ್ಯಧ್ಯಕ್ಷ ದಿಲೀಪ್ ಸೈಕಿಯಾ ಅವರ ಸಮ್ಮುಖದಲ್ಲಿ ಸೇರ್ಪಡೆಗೊಂಡಿದ್ದಾರೆ. ಮಾಜಿ ಕಾಂಗ್ರೆಸ್ ಕಾರ್ಯಕರ್ತ ಸಂಜು ಬೋರಾ ಕೂಡ ಈ ಸಂದರ್ಭದಲ್ಲೇ ಬಿಜೆಪಿ ಸೇರಿದ್ದಾರೆ.

ಫೆಬ್ರವರಿ 16ರಂದು ಬೋರಾ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಹೈಕಮಾಂಡ್ ರಾಜೀನಾಮೆಯನ್ನು ಸ್ವೀಕರಿಸಿರಲಿಲ್ಲ. ಹಿರಿಯ ನಾಯಕರು ಬೋರಾ ನಿವಾಸಕ್ಕೆ ಧಾವಿಸಿದ್ದರು. ರಾಹುಲ್ ಗಾಂಧಿ ಕೂಡಾ ಮಾತನಾಡಿದ್ದರು ಎಂದು ವರದಿಯಾಗಿತ್ತು.

ಇದನ್ನು ಓದಿದ್ದೀರಾ? ಮೋದಿ-ಅದಾನಿ ವಾಶಿಂಗ್ ಮಷೀನ್‌ನಲ್ಲಿ ಪರಿಶುದ್ಧವಾಯ್ತು ‘ಭ್ರಷ್ಟ’ ಅಗಸ್ಟಾ-ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಕಂಪನಿ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಾದ ಬಳಿಕ ತಮ್ಮ ನಿರ್ಧಾರವನ್ನು ಮರುಪರಿಶೀಲಿಸಲು ಸಮಯ ಬೇಕು ಎಂದು ಕೇಳಿದ ಬೋರಾ ಮರುದಿನವೇ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ನಿವಾಸಕ್ಕೆ ತೆರಳಿ ಫೆಬ್ರವರಿ 22ರಂದು ಬಿಜೆಪಿಗೆ ಸೇರುವುದಾಗಿ ಘೋಷಿಸಿದ್ದರು.

126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಮಾರ್ಚ್-ಏಪ್ರಿಲ್‌ನಲ್ಲಿ ಚುನಾವಣೆ ನಡೆಯಲಿದ್ದು, ಈ ನಡುವೆ ಕಾಂಗ್ರೆಸ್ ನಾಯಕ ಬಿಜೆಪಿ ಸೇರಿರುವುದು ತೀವ್ರ ರಾಜಕೀಯ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಈ ವೇಳೆ ಬೋರಾ ವಿರುದ್ಧ ಇರುವ ಕೋಲ್ ಟ್ರೇಡ್ (ಕಲ್ಲಿದ್ದಲು ವ್ಯಾಪಾರ) ಹಗರಣದ ಆರೋಪವೂ ಮುನ್ನೆಲೆಗೆ ಬರುತ್ತಿದೆ. 2025ರ ಏಪ್ರಿಲ್‌ನಲ್ಲಿ ಆಡಿಯೋ ಕ್ಲಿಪ್ ಒಂದು ಹರಿದಾಡಿತ್ತು. ಅದರಲ್ಲಿ ಬೋರಾ ಅವರ ಆಪ್ತನೆನ್ನಲಾದ ವ್ಯಕ್ತಿ ಕಲ್ಲಿದ್ದಲು ವ್ಯಾಪಾರಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿರುವುದು ತಿಳಿದುಬಂದಿತ್ತು. ಈ ಆರೋಪಗಳನ್ನು ಭೂಪೇನ್ ಬೋರಾ ಸಂಪೂರ್ಣವಾಗಿ ನಿರಾಕರಿಸಿದ್ದು ಅವರೇ ಹತಿಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರಿನ ಬಳಿಕ ಆಡಿಯೋ ಕ್ಲಿಪ್ ನೈಜವೇ ಅಥವಾ ತಿದ್ದಲ್ಪಟ್ಟಿದ್ದೇ ಎಂದು ತಿಳಿಯಲು ಆಡಿಯೋವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿತ್ತು. ಈವರೆಗೆ ಅದರ ವರದಿ ಬಂದಿಲ್ಲ ಅಥವಾ ತನಿಖೆಯಲ್ಲಿ ಪ್ರಗತಿಯೂ ಕಂಡುಬಂದಿಲ್ಲ. ಇದೀಗ ಕಲ್ಲಿದ್ದಲು ಹಗರಣದ ಆರೋಪಗಳಿಂದ ಕ್ಲೀನ್‌ಚಿಟ್ ಪಡೆಯಲೆಂದೇ ಬೋರಾ ಬಿಜೆಪಿ ಸೇರಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿದೆ. ಬಿಜೆಪಿಯ ವಾಶಿಂಗ್ ಮಷಿನ್‌ನಲ್ಲಿ ಬೋರಾ ಸ್ವಚ್ಛವಾಗುವರೇ ಎಂದು ಕಾದುನೋಡಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...