ಶಾಸಕರ ನಿವಾಸದೆಡೆ ಗುಂಡು ಹಾರಿಸಿದ ಉತ್ತರಾಖಂಡ ಮಾಜಿ ಬಿಜೆಪಿ ಶಾಸಕ; ವಿಡಿಯೋ ವೈರಲ್

Date:

ಉತ್ತರಾಖಂಡದ ಕಾನ್ಪುರ ಶಾಸಕ ಉಮೇಶ್ ಕುಮಾರ್ ಅವರ ಅಧಿಕೃತ ನಿವಾಸದೆಡೆ ಮಾಜಿ ಬಿಜೆಪಿ ಶಾಸಕ ಕುನ್ವರ್ ಪ್ರಣವ್ ಸಿಂಗ್ ಚಾಂಪಿಯನ್ ಗುಂಡು ಹಾರಿಸಿದ್ದು ಸದ್ಯ ಕುನ್ವರ್ ಅನ್ನು ಬಂಧಿಸಲಾಗಿದೆ. ಹಾಲಿ ಶಾಸಕ ಮತ್ತು ಮಾಜಿ ಶಾಸಕನ ನಡೆದಿದ್ದು, ದಿಡೀರ್ ಆಗಿ ಕುನ್ವರ್ ಗುಂಡು ಹಾರಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕಾನ್ಪುರ ಶಾಸಕರ ಕಚೇರಿಗೆ ಮಾಜಿ ಶಾಸಕರು ತಮ್ಮ ಬೆಂಬಲಿಗರೊಂದಿಗೆ ಆಗಮಿಸುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಕುನ್ವರ್ ಹಲವು ಸುತ್ತು ಗುಂಡು ಹಾರಿಸುತ್ತಿರುವುದನ್ನು ಮತ್ತು ಅಲ್ಲಿದ್ದ ಸಿಬ್ಬಂದಿಯನ್ನು ಥಳಿಸುತ್ತಿರುವುದನ್ನು ಕಾಣಬಹುದು.

ಇದನ್ನು ಓದಿದ್ದೀರಾ? ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಸಾಬೀತು: ಆರೋಪಪಟ್ಟಿ​ ಸಲ್ಲಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಹಾಲಿ ಶಾಸಕ, “ನಿನ್ನೆ ನಡೆದ ನಾಗರಿಕ ಚುನಾವಣೆಯಲ್ಲಿ ಸೋತ ನಂತರ, ಮಾಜಿ ಬಿಜೆಪಿ ಶಾಸಕ ಪ್ರಣವ್ ಸಿಂಗ್ ಚಾಂಪಿಯನ್ ಇಂದು ನನ್ನ ಅಧಿಕೃತ ನಿವಾಸದ ಮೇಲೆ ಡಜನ್‌ಗಟ್ಟಲೆ ಜನರೊಂದಿಗೆ ಶಸ್ತ್ರಾಸ್ತ್ರಗಳನ್ನು ತಂದು ನೂರಾರು ಸುತ್ತು ಗುಂಡು ಹಾರಿಸಿದರು” ಎಂದು ಬರೆದುಕೊಂಡಿದ್ದಾರೆ. ಇನ್ನು ಉಮೇಶ್ ಕುಮಾರ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದಾರೆ.

ಇನ್ನು ಕುನ್ವರ್ ಗುಂಡು ಹಾರಿಸುತ್ತಿದ್ದಂತೆ ಶಾಸಕ ಉಮೇಶ್ ಕುಮಾರ್ ತಮ್ಮ ಪಿಸ್ತೂಲ್ ತೆಗೆದುಕೊಂಡು ಗುಂಡು ಹಾರಿಸಲು ಹೋಗಿದ್ದು, ಪೊಲೀಸರು ತಡೆದಿದ್ದಾರೆ. ಸದ್ಯ ಪೊಲೀಸರು ಪ್ರಣವ್ ಸಿಂಗ್ ಚಾಂಪಿಯನ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ನಡುವೆ ಕುಮಾರ್ ವಿರುದ್ಧ ಪ್ರಣವ್ ಪತ್ನಿ ದೂರು ದಾಖಲಿಸಿದ್ದು, ತನ್ನ ಪತಿಗೆ ಬೆದರಿಕೆ ಹಾಕಿದ್ದಾರೆ. ಮಕ್ಕಳ ಮೇಲೆ ಆಯುಧ ಬೀಸಿದ್ದಾರೆ ಎಂದು ಆರೋಪಿಸಿದ್ದಾರೆ.

“ಹಾಲಿ ಶಾಸಕ ಮತ್ತು ಮಾಜಿ ಶಾಸಕರ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಹರಿದ್ವಾರದ ಎಸ್‌ಎಸ್‌ಪಿ ಪ್ರಮೋದ್ ದೋಬಲ್ ಇಂದು ಬೆಳಿಗ್ಗೆ ವೀಡಿಯೊದಲ್ಲಿ ತಿಳಿಸಿದ್ದಾರೆ. ಹಾಗೆಯೇ ಇಬ್ಬರ ಪಿಸ್ತೂಲ್ ರವಾನಗಿಗಳನ್ನು ರದ್ದುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಇಬ್ಬರನ್ನು ಕೂಡಾ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...