ಕಾಂಗ್ರೆಸ್ ಸೇರ್ಪಡೆಯಾಗಲಿರುವ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

Date:

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಹಲವು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರುವುದು ಖಚಿತವಾಗುತ್ತಿದೆ. ಸದ್ಯ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಪಕ್ಷ ಸೇರ್ಪಡೆಯ ವಿಚಾರವಾಗಿ ಪೂರ್ಣಿಮಾ ಶ್ರೀನಿವಾಸ್ ಅವರು ಭಾನುವಾರ ಸಂಜೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಚರ್ಚೆ ನಡೆಸಿದರು. ಅವರು ಅಕ್ಟೋಬರ್ 20ಕ್ಕೆ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದ ನಾಯಕರು ತಿಳಿಸಿದ್ದಾರೆ.

WhatsApp Image 2023 10 08 at 8.06.58 PM

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2018ರಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಪೂರ್ಣಿಮಾ ಶ್ರೀನಿವಾಸ್, ಕಾಂಗ್ರೆಸ್‌ನ ಡಿ ಸುಧಾಕರ್ ವಿರುದ್ಧ ಜಯಗಳಿಸುವ ಮೂಲಕ ಚಿತ್ರದುರ್ಗ ಜಿಲ್ಲೆಯ ಮೊದಲ ಮಹಿಳಾ ಶಾಸಕಿ ಎಂಬ ಕೀರ್ತಿಗೆ ಪಾತ್ರರಾಗಿದ್ದರು.

2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿಯಿಂದ ಸ್ಪರ್ಧಿಸಿದ್ದ ಪೂರ್ಣಿಮಾ, ಕಾಂಗ್ರೆಸ್‌ನ ಸುಧಾಕರ್ ಅವರ ವಿರುದ್ಧ 30322 ಮತಗಳ ಅಂತರದಿಂದ ಸೋಲನುಭವಿಸಿದ್ದರು. ಗೆಲುವು ಕಂಡಿದ್ದ ಡಿ ಸುಧಾಕರ್, ಸದ್ಯ ಕಾಂಗ್ರೆಸ್ ಸರ್ಕಾರದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವರಾಗಿದ್ದಾರೆ.

ಇತ್ತೀಚೆಗೆ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ವೇಳೆ ಬೆಂಗಳೂರಿನ ಕೆ.ಆರ್. ಪುರಂನ ದೇವಸಂದ್ರದಲ್ಲಿರುವ ಪೂರ್ಣಿಮಾ ಶ್ರೀನಿವಾಸ್ ಅವರ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ, ಮಾತುಕತೆ ನಡೆಸಿದ್ದರು. ಈ ವೇಳೆ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ವದಂತಿ ಹಬ್ಬಿತ್ತು. ಆದರೆ ಅದು ದೃಢವಾಗಿರಲಿಲ್ಲ.

ಇಂದು ಸಿಎಂ ಹಾಗೂ ಡಿಸಿಎಂ ಭೇಟಿಯ ಬಳಿಕ ಅಕ್ಟೋಬರ್ 20ಕ್ಕೆ ಅವರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಪೂರ್ಣಿಮಾ ಅವರ ತಂದೆ ದಿವಂಗತ ಕೃಷ್ಣಪ್ಪ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು.

ಮುಖ್ಯಮಂತ್ರಿಗಳ ಭೇಟಿಯ ಸಂದರ್ಭದಲ್ಲಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...