ದಾವಣಗೆರೆ | ಬಿಜೆಪಿ ಮಾಜಿ ಶಾಸಕ, ಆರ್‌ಎಸ್‌ಎಸ್‌ ಮುಖಂಡ ಕಾಂಗ್ರೆಸ್‌ಗೆ ಸೇರ್ಪಡೆ

Date:

ಲೋಕಸಭಾ ಚುನಾವಣೆಗೆ ದಾವಣಗೆರೆಯಲ್ಲಿ ಹಾಲಿ ಸಂಸದ ಸಿದ್ಧೇಶ್ವರ್ ಅವರ ಪತ್ನಿಗೆ ಬಿಜೆಪಿ ಟಿಕೆಟ್ ನೀಡಿರುವುದರಿಂದ ಬಂಡಾಯದ ಕಾವು ಏರಿದೆ. ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಸಿದ್ದೇಶ್ವರ್ ವಿರುದ್ಧ ಬಂಡಾಯ ಎದಿದ್ದರು ಸಮಯದಲ್ಲೇ, ಜಿಲ್ಲೆಯ ಮಾಜಿ ಶಾಸಕ, ಆರ್‌ಎಸ್‌ಎಸ್‌ ಮುಖಂಡ ಟಿ ಗುರುಸಿದ್ದನಗೌಡ ಬಿಜೆಪಿಗೆ ‘ಗುಡ್‌ಬೈ’ ಹೇಳಿದ್ದು, ಕಾಂಗ್ರೆಸ್‌ ಸೇರಿದ್ದಾರೆ.

ಗುರುಸಿದ್ದನಗೌಡ ಅವರು ಈ ಹಿಂದೆ, ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಡಾ. ರವಿಕುಮಾರ್‌ಗೆ ಟಿಕೆಟ್ ನೀಡಬೇಕೆಂದು ಬಿಜೆಪಿ ಎದುರು ಬೇಡಿಕೆ ಇಟ್ಟಿದ್ದರು. ಆದರೆ, ಬಿಜೆಪಿ ಟಿಕೆಟ್‌ ದೊರೆಯದ ಕಾರಣ, ಅಸಮಾಧಾನಗೊಂಡಿದ್ದರು. ಇದೀಗ, ಗುರುಸಿದ್ದನಗೌಡ ಮತ್ತು ಅವರ ಪುತ್ರ ಕಾಂಗ್ರೆಸ್‌ ಸೇರಿದ್ದಾರೆ. ಅವರನ್ನು ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ ಭೇಟಿ ಮಾಡಿ, ಕಾಂಗ್ರೆಸ್‌ಗೆ ಕರೆತಂದಿದ್ದಾರೆ.

“ಸಂಸದ ಸಿದ್ದೇಶ್ವರ ಅವರು ಸರ್ವಾಧಿಕಾರಯಂತೆ ವರ್ತಿಸುತ್ತಿದ್ದಾರೆ. ಯಡಿಯೂರಪ್ಪ ಕೆಜೆಪಿ ಮೂಡ್​ನಿಂದ ಹೊರಬಂದಿಲ್ಲ. ಅವರ ವರ್ತನೆಯಿಂದ ನನಗೆ ಬೇಸರ ಆಗಿದೆ. ಹೀಗಾಗಿ, ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದೇನೆ” ಎಂದು ಗುರುಸಿದ್ದನಗೌಡ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಾವಣಗೆರೆ ಬಿಜೆಪಿಯಲ್ಲಿ ಉಸಿರು ಗಟ್ಟುವ ವಾತಾವರಣ ಇದೆ.‌ ಹೀಗಾಗಿ, ಆರ್‌ಎಸ್‌ಎಸ್‌ನ ಕಟ್ಟಾಳು ಆಗಿದ್ದ ಗುರುಸಿದ್ದನಗೌಡ ಕಾಂಗ್ರೆಸ್ ಸೇರಿದ್ದಾರೆ. ಅವರ ಕಾಂಗ್ರೆಸ್‌ ಸೇರ್ಪಡೆಯಿಂದ ನಮ್ಮ ಬಲ ಹೆಚ್ಚಾಗಿದೆ” ಎಂದು ಸಚಿವ ಮಲ್ಲಿಕಾರ್ಜುನ ಹೇಳಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ದಾವಣಗೆರೆ | ಕುಟುಂಬ ರಾಜಕಾರಣಕ್ಕೆ ವಿರೋಧ; ಗೆಲ್ಲುವ ಅಭ್ಯರ್ಥಿಗೆ ಟಿಕೆಟ್: ಸಿಎಂ ಸಿದ್ದರಾಮಯ್ಯ

"ನಾನು ಕುಟುಂಬ ರಾಜಕಾರಣ ಬೆಂಬಲಿಸುವುದಿಲ್ಲ, ವಿರೋಧಿಸುತ್ತೇನೆ. ಆದರೆ ಕ್ಷೇತ್ರದಲ್ಲಿ ಅಳೆದು ತೂಗಿ...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...