ವಿದ್ಯುತ್, ನೀರಿನ ಕ್ಷಾಮ ತಲೆದೋರುವುದು ಗ್ಯಾರಂಟಿ: ಬಸವರಾಜ ಬೊಮ್ಮಾಯಿ

Date:

  • ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡಲು ಸಾಧ್ಯವೇ ಇಲ್ಲ
  • ಕಾಂಗ್ರೆಸ್‌ ನೀರಾವರಿಯ ವಿಷಯವನ್ನೇ ಡೈವರ್ಟ್ ಮಾಡುತ್ತಿದೆ

ಗ್ಯಾರಂಟಿ ಮೂಲಕ ಜನರಿಗೆ ಮೋಸ ಮಾಡಿ, ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡಲು ಸಾಧ್ಯವೇ ಇಲ್ಲ. ಡೀಸೆಲ್‌ ಇಲ್ಲದೇ ಬಸ್‌ಗಳು ನಿಲ್ಲುವುದು ಗ್ಯಾರಂಟಿ, ವಿದ್ಯುತ್ ಕ್ಷಾಮ, ನೀರಿನ ಕ್ಷಾಮ ರಾಜ್ಯದಲ್ಲಿ ತಲೆದೋರುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆತಂಕ ವ್ಯಕ್ತಪಡಿಸಿದ್ದಾರೆ.

ವಿಜಯಪುರದ ಶ್ರೀ ಗುರು ಸಂಗನಬಸವ ಮಂಗಲ ಕಾರ್ಯಾಲಯದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, “ಈ ಗ್ಯಾರಂಟಿ, ಆ ಗ್ಯಾರಂಟಿ ಎಂದು ಹೇಳಿ ನೀರಾವರಿಯ ವಿಷಯವನ್ನೇ ಡೈವರ್ಟ್ ಮಾಡುತ್ತಿದ್ದಾರೆ. ವಿಜಯಪುರ ಜಿಲ್ಲೆಗೆ ಬೇಕಾದ ನೀರಾವರಿ ಯೋಜನೆಗಳಿಗೆ ಅನುದಾನ ಒದಗಿಸುತ್ತಿಲ್ಲ, ಮುಂದೊಂದು ದಿನ ನೀರಿಗೂ ಸಹ ದುಸ್ತರ ಬರುವಂತಹ ವಾತಾವರಣವನ್ನು ಕಾಂಗ್ರೆಸ್ ಸರ್ಕಾರ ಸೃಷ್ಟಿಸಿದೆ” ಎಂದರು.

“ಗುತ್ತಿ ಬಸವಣ್ಣ ಯೋಜನೆ ಅನುಷ್ಠಾನ ಮಾಡುವಾಗ ಅನೇಕ ವಿಘ್ನ ಎದುರಾದವು, ನೀವು ಜೈಲಿಗೆ ಹೋಗಬೇಕಾಗುತ್ತದೆ ಎಂದು ಅನೇಕರು ಹೆದರಿಸಿದರು, ಆದರೆ ವಿಜಯಪುರ ಜಿಲ್ಲೆಯ ಜನತೆಗೆ ನ್ಯಾಯ ಒದಗಿಸಲು ನಾನು ಜೈಲಿಗೆ ಹೋಗಲು ಸಿದ್ಧ, ನೇಣಿಗೆ ಏರಲು ಸಿದ್ಧ ಎಂದು ಗುತ್ತಿ ಬಸವಣ್ಣ ಯೋಜನೆ ಅನುಷ್ಠಾನಕ್ಕೆ ಮುಂದಾದೆ” ಎಂದು ಸ್ಮರಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರು ಕಳೆದುಕೊಂಡ ಭೂಮಿಗೆ ದರವನ್ನು ನಂತರ ಬಂದ ಕಾಂಗ್ರೆಸ್ ಸರ್ಕಾರ ನಿಗದಿಪಡಿಸಲಿಲ್ಲ, ಏಕರೂಪದ ದರವನ್ನು ರೈತರಿಗೆ ನೀಡಲೇ ಇಲ್ಲ, ಈ ಏಕರೂಪದ ದರವನ್ನು ನೀಡಲು ಪುನಃ ನಮ್ಮ ಸರ್ಕಾರವೇ ಬರಬೇಕಾಯಿತು ಎಂದರು.

“ಆರು ಸಾವಿರ ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, ಹಲವಾರು ವಿಮಾನ ನಿಲ್ದಾಣಗಳಿಗೆ ಅನುಮತಿ ನೀಡಿದ ಕೀರ್ತಿ ನಮ್ಮ ಕೇಂದ್ರ ಸರ್ಕಾರಕ್ಕೆ ಸಲ್ಲುತ್ತದೆ. ವಿಜಯಪುರ ನಗರದಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದ್ದು, ನಮ್ಮ ಸರ್ಕಾರ, ಈಗ ಕಾಂಗ್ರೆಸ್‌ನವರು ಈ ವಿಮಾನ ನಿಲ್ದಾಣವನ್ನೇ ರಿಬ್ಬನ್ ಕತ್ತರಿಸಿ ತಮ್ಮ ಸಾಧನೆ ಎಂದು ಹೇಳಿಕೊಳ್ಳಬಹುದು” ಎಂದು ಹೇಳಿದರು.

ಬಂಗಾರದಿಂದ ತೂಗಿದ ಜಿಲ್ಲೆ

“ಕಾಂಗ್ರೆಸ್ ವಿರೋಧ ಮಾಡಿಕೊಂಡು ಬಂದ ಜಿಲ್ಲೆ, ಇತಿಹಾಸದ ಪುಟಗಳನ್ನು ತೆರೆದು ನೋಡಿದಾಗ ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಅಸ್ತಿತ್ವಕ್ಕೆ ಬಂದಾಗ ಅಖಂಡ ವಿಜಯಪುರ ಜಿಲ್ಲೆಯ 15 ಸ್ಥಾನಗಳಲ್ಲಿ 12 ಸ್ಥಾನಗಳನ್ನು ಬಿಜೆಪಿ ಶಾಸಕರು ಆಯ್ಕೆಯಾಗಿದ್ದರು. ಬಹುಮನಿಯಿಂದ ಹಿಡಿದು ಬ್ರಿಟಿಷ ಆಡಳಿತದವರೆಗೆ ಈ ಭಾಗಕ್ಕೆ ದೊಡ್ಡ ಅನ್ಯಾಯವಾಗುತ್ತಲೇ ಬಂದಿತ್ತು” ಎಂದು ಆರೋಪಿಸಿದರು.

“ಗುಳೇ ತಪ್ಪಿಸುವುದಕ್ಕಾಗಿ ನೀರಾವರಿ ಮಾಡಿಕೊಡಿ ಎಂಬ ಬೇಡಿಕೆ ಮಾತ್ರ ಇರಿಸಿದ್ದರು. ಬರದ ಜಿಲ್ಲೆಯಾದರೂ ಇಂದಿರಾ ಗಾಂಧಿ ಹಾಗೂ ನಿಜಲಿಂಗಪ್ಪ ಅವರನ್ನು ಬಂಗಾರದಿಂದ ತೂಗಿದ ಜಿಲ್ಲೆ. ಆದರೆ, ಜನತೆಯ ನ್ಯಾಯಯುತವಾದ ಬೇಡಿಕೆ ಯುಕೆಪಿ ಅನುಷ್ಠಾನವಾಗಲೇ ಇಲ್ಲ. ಹೀಗಾಗಿ ನ್ಯಾಯಯುತ ಕೂಗಿಗೆ ಕಾಂಗ್ರೆಸ್ ಪಕ್ಷದಿಂದ ಸ್ಪಂದನೆ ದೊರಕದ ಸಿಟ್ಟು ವಿಜಯಪುರ ಜಿಲ್ಲೆಯಲ್ಲಿ ಇಂದಿಗೂ ಇದೆ” ಎಂದು ಹೇಳಿದರು.

“ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರದಲ್ಲಿಯೂ ಬಿಜೆಪಿ ಗೆಲ್ಲಲಿದೆ, ನಾವು ಸೋಲಿಸಬೇಕಾಗಿರುವುದು ಕಾಂಗ್ರೆಸ್ ಅಭ್ಯರ್ಥಿಗಳನ್ನು, ಅದು ಮಾತ್ರ ಕಾರ್ಯಕರ್ತರು ಲಕ್ಷ್ಯದಲ್ಲಿರಿಸಿಕೊಳ್ಳಬೇಕು” ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದರಾದ ರಮೇಶ ಜಿಗಜಿಣಗಿ, ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ಎಸ್ ಕೆ ಬೆಳ್ಳುಬ್ಬಿ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಹಣಮಂತ ನಿರಾಣಿ, ಮಾಜಿ ಶಾಸಕರಾದ ಅಭಯ ಪಾಟೀಲ, ರಮೇಶ ಭೂಸನೂರ, ಸೋಮನಗೌಡ ಪಾಟೀಲ ಸಾಸನೂರ, ಎ ಎಸ್ ಪಾಟೀಲ ನಡಹಳ್ಳಿ, ಅರುಣ ಶಹಾಪೂರ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...