ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ

Date:

‘ನಾನು ಚುನಾವಣಾ ರಾಜಕಾರಣದಲ್ಲಿ ಮುಂದುವರಿಯಬಾರದು ಎಂದು ಸಣ್ಣ ತೀರ್ಮಾನ ಮಾಡಿದ್ದೇನೆ’ ಎಂದಿರುವ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ, ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ಹೆಚ್ಚಿನ ಲಾಭ ಪಡೆದುಕೊಂಡಿದ್ದೇನೆ. ಇದೀಗ ಹೆಚ್ಚಿನ ಅಸೆ ಏನೂ ಇಲ್ಲ. ಚುನಾವಣಾ ರಾಜಕೀಯದಲ್ಲಿ ಮುಂದುವರೆಯದಿರಲು ನಿರ್ಧಾರ ಮಾಡಿದ್ದೇನೆ ಎಂದಿದ್ದಾರೆ.

ರಾಜ್ಯದ ಸಿಎಂ, ಕೇಂದ್ರದಲ್ಲಿ ಸಚಿವರಾಗಿ ಕೆಲಸ ಮಾಡಿದ್ದೇನೆ. 10 ವರ್ಷ ಶಾಸಕ, 20 ವರ್ಷ ಸಂಸದನಾಗಿ ಕಾರ್ಯ ನಿರ್ವಹಿಸಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಮೂವತ್ತು ವರ್ಷ ನನ್ನ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಯಡಿಯೂರಪ್ಪ ಬಿಟ್ಟರೆ ನಮ್ಮ ಪಕ್ಷದಲ್ಲಿ ನಾನೇ ನಂಬರ್ ಒನ್ ಫಲಾನುಭವಿ. 10 ವರ್ಷ ಶಾಸಕ, 20 ವರ್ಷ ಸಂಸದ, 1 ವರ್ಷ ಮುಖ್ಯಮಂತ್ರಿ, ಒಂದೂವರೆ ವರ್ಷ ವಿರೋಧ ಪಕ್ಷದ ನಾಯಕ, ಐದು ವರ್ಷ ವಿಧಾನಸಭೆಯಲ್ಲಿ ವಿರೋಧ ಪಕ್ಷದ ಉಪನಾಯಕ, ನಾಲ್ಕೂವರೆ ವರ್ಷ ಪಕ್ಷದ ರಾಜ್ಯಾಧ್ಯಕ್ಷ, ಕೇಂದ್ರದಲ್ಲಿ ಏಳು ವರ್ಷ ನರೇಂದ್ರ ಮೋದಿ ಜೊತೆ ಕ್ಯಾಬಿನೆಟ್ ಮಂತ್ರಿಯಾಗಿದ್ದಾನೆ. ಇಷ್ಟು ಸಿಕ್ಕಿ ಕೂಡ ಸಂತೋಷ ಪಡದ ರಾಜಕಾರಣಿ, ಅವನು ರಾಜಕಾರಣಿ ಅಲ್ಲ. ಅವನನ್ನು ಸ್ವಾರ್ಥಿ ಎಂದು ತಿಳಿದುಕೊಳ್ಳುತ್ತೇನೆ’ ಎನ್ನುವ ಮೂಲಕ ಸಕ್ರಿಯ ರಾಜಕಾರಣದಿಂದ ದೂರವುಳಿಯುವ ಬಗ್ಗೆ ಡಿ.ವಿ ಸದಾನಂದ ಗೌಡ ಮಾತನಾಡಿದ್ದಾರೆ.

D V Sadananda Gowda

ಎಲ್ಲಾ ರಾಜಕೀಯ ಪಕ್ಷದಲ್ಲಿ ನಾನು ಸತ್ಯಹರಿಶ್ಚಂದ್ರ ಅಂತ ಹೇಳಿಕೊಂಡರು ಕೂಡ ಹತ್ತು ಪರ್ಸೆಂಟ್ ಜನ ಅಧಿಕಾರಕ್ಕಾಗಿ ಜಂಪ್ ಮಾಡುವವರಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ತಕ್ಷಣ ಬಿಜೆಪಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಕ್ಷಣ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗುವವರಿದ್ದಾರೆ. ಏನೂ ಇಲ್ಲದ ಜೆಡಿಎಸ್ ಅಧಿಕಾರಕ್ಕೆ ಬಂದರೆ ತಕ್ಷಣ ಅವರ ಜೊತೆಗೂ ಹೋಗುವವರಿದ್ದಾರೆ. ಈ ರೀತಿ ಹೋಗುವಂತಹವರು ಎಲ್ಲ ಪೊಲಿಟಿಕಲ್ ಪಾರ್ಟಿಯಲ್ಲಿದ್ದಾರೆ. ಅದರಿಂದ ನಮ್ಮ ಪಾರ್ಟಿ ಕೂಡ ಹೊರತಾಗಿಲ್ಲ ಎಂದು ಇದೇ ವೇಳೆ ಮಾಜಿ ಸಿಎಂ ತಿಳಿಸಿದ್ದಾರೆ.

2021ರಲ್ಲಿ ಕೇಂದ್ರ ಸಚಿವರ ಪುನಾರಚನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸೂಚನೆಯ ಮೇರೆಗೆ ಡಿ.ವಿ ಸದಾನಂದ ಗೌಡ ಕೇಂದ್ರ ಸಚಿವ ಸ್ಥಾನ ತ್ಯಜಿಸಿದ್ದರು. ಪ್ರಸ್ತುತ ಅವರು ಬೆಂಗಳೂರು ಉತ್ತರ ಕ್ಷೇತ್ರದ ಸಂಸದನಾಗಿ ಲೋಕಸಭೆಯಲ್ಲಿ ಪ್ರತಿನಿಧಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...