ಜಾರ್ಖಂಡ್ ಚುನಾವಣೆ | ಕಾಂಗ್ರೆಸ್ ಮಾಜಿ ಕಾರ್ಯಾಧ್ಯಕ್ಷ ಮಾನಸ್ ಸಿನ್ಹಾ ಬಿಜೆಪಿ ಸೇರ್ಪಡೆ

Date:

ಜಾರ್ಖಂಡ್‌ನ ಕಾಂಗ್ರೆಸ್‌ನ ಮಾಜಿ ಕಾರ್ಯಾಧ್ಯಕ್ಷ ಮಾನಸ್ ಸಿನ್ಹಾ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜಾರ್ಖಂಡ್ ಬಿಜೆಪಿ ಕಾರ್ಯಾಧ್ಯಕ್ಷ ರವೀಂದ್ರ ರೈ ಮತ್ತು ಬಿಜೆಪಿಯ ರಾಜ್ಯ ಚುನಾವಣಾ ಉಸ್ತುವಾರಿಯೂ ಆಗಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನಸ್ ಸಿನ್ಹಾ ಅವರನ್ನು ಬಿಜೆಪಿಗೆ ಸ್ವಾಗತಿಸಿದರು.

ಬಿಜೆಪಿ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಮಾನಸ್ ಸಿನ್ಹಾ, “ನಾನು ಕಳೆದ 27 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸಿದ್ದೇನೆ. ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದೇನೆ. ಆದರೆ ಕಾಂಗ್ರೆಸ್‌ನಲ್ಲಿ ಸಮರ್ಪಿತ ಕಾರ್ಯಕರ್ತರಿಗೆ ಯಾವುದೇ ಗೌರವ ಉಳಿದಿಲ್ಲ. ಹಾಗಾಗಿ, ನಾನು ಬಿಜೆಪಿಗೆ ಸೇರಲು ನಿರ್ಧರಿಸಿದೆ. ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದೇನೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಜಾರ್ಖಂಡ್ ಚುನಾವಣೆ | ಬಿಜೆಪಿಗೆ ಸೀಟು ಹಂಚಿಕೆ ಬಿಕ್ಕಟ್ಟು; ಮತ್ತೆ ಗೆಲ್ಲುವುದೇ ‘ಇಂಡಿಯಾ’?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲೇ ಮಾತನಾಡಿದ ಅಸ್ಸಾಂ ಸಿಎಂ ಬಿಸ್ವಾ, “ಕಾಂಗ್ರೆಸ್‌ನಲ್ಲಿ ಪಕ್ಷಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿರುವ ಕಾಂಗ್ರೆಸ್ ಕಾರ್ಯಕರ್ತರಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ. ಬಿಜೆಪಿ ಬಲಪಡಿಸಲು ಮತ್ತು ಚುನಾವಣೆಯಲ್ಲಿ ಗೆಲ್ಲಲು ಸಿನ್ಹಾ ಅವರ ಅನುಭವವನ್ನು ರಾಜ್ಯ ಮಟ್ಟದಲ್ಲಿ ಬಳಸಿಕೊಳ್ಳಲಾಗುವುದು” ಎಂದು ತಿಳಿಸಿದರು.

81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಗೆ ನವೆಂಬರ್ 13 ಮತ್ತು ನವೆಂಬರ್ 20ರಂದು ಚುನಾವಣೆ ನಡೆಯಲಿದೆ. ಮತ ಎಣಿಕೆ ನವೆಂಬರ್ 23ರಂದು ನಡೆಯಲಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿರೀಕ್ಷೆಯಲ್ಲಿ ಮಾನಸ್ ಸಿನ್ಹಾ ಇದ್ದರು. ಆದರೆ ಟಿಕೆಟ್ ಲಭ್ಯವಾಗಿಲ್ಲ. ಇದಾದ ಬೆನ್ನಲ್ಲೇ ಸಿನ್ಹಾ ಬಿಜೆಪಿಗೆ ಪಕ್ಷಾಂತರಗೊಂಡಿದ್ದಾರೆ.

ಈ ನಡುವೆ ಜಾರ್ಖಂಡ್‌ನ ಆಡಳಿತಾರೂಢ ಜೆಎಂಎಂ ಭಾನುವಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಮುಖ್ಯ ಚುನಾವಣಾ ಅಧಿಕಾರಿ ಕೆ ರವಿಕುಮಾರ್ ಮತ್ತು ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದೆ. ಅವರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...