ಸಿಪಿಐಎಂ ಪ್ರಧಾನ ಕಾರ್ಯದರ್ಶಿಯಾಗಿ ಕೇರಳ ಮಾಜಿ ಸಚಿವ ಎಂ ಎ ಬೇಬಿ ಆಯ್ಕೆ

Date:

ಕೇರಳದ ಮಾಜಿ ಸಚಿವ ಎಂ ಎ ಬೇಬಿ ಅವರನ್ನು ತಮಿಳುನಾಡಿನ ಮದುರೈನಲ್ಲಿ ನಡೆಯುತ್ತಿರುವ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) 24ನೇ ಅಖಿಲ ಭಾರತ ಮಹಾ ಅಧಿವೇಶನದಲ್ಲಿ ಸಿಪಿಐಎಂ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.

ಇನ್ನು ಕೆಲವು ಸಿಪಿಐಎಂ ನಾಯಕರು ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ಅಧ್ಯಕ್ಷ ಅಶೋಕ್ ಧಾವಳೆ ಅವರಿಗೆ ಬೆಂಬಲ ಸೂಚಿಸಿದ್ದರು ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಕ್ರೈಸ್ತ ಸಮುದಾಯದ ಮೇಲೆ ಬಿಜೆಪಿಯ ಪ್ರಭಾವ ಹೆಚ್ಚಳ; ತುರ್ತು ಕ್ರಮ ಅಗತ್ಯ: ಸಿಪಿಐಎಂ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1954ರಲ್ಲಿ ಕೇರಳದ ಪ್ರಾಕುಲಂನಲ್ಲಿ ಪಿ.ಎಂ. ಅಲೆಕ್ಸಾಂಡರ್ ಮತ್ತು ಲಿಲ್ಲಿ ಅಲೆಕ್ಸಾಂಡರ್ ದಂಪತಿಗೆ ಜನಿಸಿದ ಬೇಬಿ ಅವರು, ತಮ್ಮ ಶಾಲಾ ದಿನಗಳಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್‌ನ (ಎಸ್‌ಎಫ್‌ಐ) ಕೇರಳ ವಿದ್ಯಾರ್ಥಿ ಫೆಡರೇಶನ್‌ಗೆ ಸೇರಿದ್ದರು. ಬಳಿಕ ಸಿಪಿಐಎಂ ಸೇರಿದ್ದಾರೆ.

ಅವರು 1986ರಿಂದ 1998ರವರೆಗೆ ರಾಜ್ಯಸಭೆಯ ಸದಸ್ಯರಾಗಿದ್ದರು. ಬೇಬಿ 2012ರಿಂದ ಸಿಪಿಐಎಂನ ಪಾಲಿಟ್‌ಬ್ಯೂರೋ ಸದಸ್ಯರಾಗಿದ್ದಾರೆ.

ಕಳೆದ ವರ್ಷ ಸೀತಾರಾಮ್ ಯೆಚೂರಿ ಅವರ ನಿಧನದ ನಂತರ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಹುದ್ದೆ ಖಾಲಿಯಾಗಿದೆ. ನಂತರ ಪ್ರಕಾಶ್ ಕಾರಟ್ ಮಧ್ಯಂತರ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಇದೀಗ ತಮಿಳುನಾಡಿನ ಮದುರೈನಲ್ಲಿ ನಡೆದ ಸಿಪಿಐಎಂನ 24ನೇ ಕಾಂಗ್ರೆಸ್‌ನಲ್ಲಿ (ಮಹಾ ಅಧಿವೇಶನ) ಬೇಬಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಏಪ್ರಿಲ್ 2ರಂದು ಮಹಾ ಅಧಿವೇಶನ ಆರಂಭವಾಗಿದ್ದು, ಭಾನುವಾರ (ಏಪ್ರಿಲ್ 6) ಕೊನೆಯಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...