ಹಿಂದೂ ಕಾರ್ಯಕರ್ತರು ಒಂಟಿಯಾಗಿ ಓಡಾಡಬೇಡಿ: ಮಾಜಿ ಸಚಿವ ಶ್ರೀರಾಮುಲು

Date:

“ಹಿಂದೂ ಕಾರ್ಯಕರ್ತರು ಯಾರೂ ಒಬ್ಬೊಬ್ಬರೇ ಓಡಾಡಬೇಡಿ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವವರೆಗೆ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ” ಎಂದು ಮಾಜಿ ಸಚಿವ ಬಿ ಶ್ರೀರಾಮುಲು ಆರೋಪಿಸಿದ್ದಾರೆ.

ಇತ್ತೀಚೆಗೆ ಹತ್ಯೆಗೊಳಗಾದ ಮೈಸೂರು ಜಿಲ್ಲೆಯ ತಿ. ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್​ ಅವರ ನಿವಾಸಕ್ಕೆ ಬುಧವಾರ ಮಾಜಿ ಸಚಿವ ಶ್ರೀರಾಮುಲು ಭೇಟಿ ನೀಡಿದರು. “ಈ ವಿಚಾರವನ್ನು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಹೋರಾಟ‌ ಮಾಡುತ್ತೇವೆ. ನಿಮ್ಮ ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇನೆ. ಎಲ್ಲರಿಗೂ ಶಿಕ್ಷೆಯಾಗಬೇಕು, ನಾವೆಲ್ಲ ಹೋರಾಟ ಮಾಡುತ್ತೇವೆ” ಎಂದು ವೇಣುಗೋಪಾಲ್​ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಬಳಿಕ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ವೇಣುಗೋಪಾಲ್‌ ಹಿಂದೂ ಸಂಘಟನೆಯಲ್ಲಿ ಕೆಲಸ‌‌ ಮಾಡುತ್ತಿದ್ದ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಯಡಿಯೂರಪ್ಪರನ್ನು ಯಾರು, ಯಾಕೆ ಕೆಳಗಿಳಿಸಿದರು ಎಂಬುದು ಇದುವರೆಗೂ ಗೊತ್ತಿಲ್ಲ: ಜಿ ಟಿ ದೇವೇಗೌಡ

“ಮೊಬೈಲ್​ ಪರಿಶೀಲಿಸಿದರೆ ಯಾರೆಲ್ಲ ಕರೆ ಮಾಡಿದ್ದಾರೆ ಗೊತ್ತಾಗುತ್ತೆ. ವೇಣುಗೋಪಾಲ ನಾಯಕ​ ಯಾವ ಕ್ರಿಮಿನಲ್ ಕೆಲಸ ಮಾಡಿಲ್ಲ. ಇದು ಧರ್ಮದ ವಿಚಾರವಾಗಿ ನಡೆದಿರುವ ಕೊಲೆ. ಧರ್ಮ ಅಂತ ಬಂದಾಗ ನಾವೆಲ್ಲ ಒಂದೇ. ಇದರಲ್ಲಿ ಯಾವುದೇ ಪಕ್ಷ ಅನ್ನುವುದು ಇಲ್ಲ. ಕೊಲೆಯ ಬಗ್ಗೆ ಸಂಪೂರ್ಣ ತನಿಖೆ ನಡೆದರೆ ಯಾರ ಕುಮ್ಮಕ್ಕಿನಿಂದ ಆಗಿರುವುದು ಎಂಬುದು ಗೊತ್ತಾಗುತ್ತೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರ ಬಂದ ನಂತರ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...