ಲೋಕಸಭಾ ಚುನಾವಣೆ | ಸಂಸದ ತೇಜಸ್ವಿ ಸೂರ್ಯ ಕ್ಷೇತ್ರದ ಮೇಲೆ ಕಣ್ಣಿಟ್ಟ ಮಾಜಿ ಸಚಿವ ವಿ ಸೋಮಣ್ಣ

Date:

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳುವ ಮೂಲಕ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ.

ಬೆಂಗಳೂರಿನ ಗೋವಿಂದರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸೋಮಣ್ಣ, “ನಾನೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ” ಎಂದಿದ್ದಾರೆ.

“ನಾನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಲು ಬಯಸಿದ್ದೇನೆ. ಕಳೆದ ಕೆಲವು ವರ್ಷಗಳಿಂದ ನಿರ್ದಿಷ್ಟ ಸಮುದಾಯಕ್ಕೇ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲಾಗುತ್ತಿದೆ. ಈ ಬಾರಿ ಬೇರೆ ಸಮುದಾಯಗಳಿಗೂ ಬಿಜೆಪಿ ಹೈಕಮಾಂಡ್ ಪ್ರಾತಿನಿಧ್ಯ ನೀಡಬೇಕು” ಎಂದು ಬೇಡಿಕೆ ಮುಂದಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕ್ಷೇತ್ರದ ಟಿಕೆಟ್​ ತಮಗೆ ಬೇಕೆಂದು ಬಹಿರಂಗವಾಗಿ ಬೇಡಿಕೆ ಇಟ್ಟಿದ್ದಾರೆ. ಅಲ್ಲದೇ ವಿಧಾನಸಭಾ ಚುನಾವಣೆಯಲ್ಲಿ ಯಾರ್ಯಾರು ಸೋಲಿಗೆ ಕಾರಣರಾದರೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲೇಬೇಕು. ಮತ್ತೊಂದು ಬಾರಿ ನಿಮ್ಮನ್ನೆಲ್ಲ ಕರೆದು ಚರ್ಚೆ ನಡೆಸುತ್ತೇನೆ ಎಂದು ಸಭೆಯಲ್ಲಿ ಭಾವುಕರಾಗಿ ಮಾತನಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜೆಡಿಎಸ್ ಜೊತೆ ಹೊಂದಾಣಿಕೆಗೆ ಯಾವುದೇ ಪ್ರಸ್ತಾವ ಪಕ್ಷದ ಮುಂದಿಲ್ಲ: ನಳಿನ್‌ ಕುಮಾರ್‌ ಕಟೀಲ್‌

ಸೋಮಣ್ಣ ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್​ ಬೇಡಿಕೆ ಇಟ್ಟಿದ್ದಾರೆ. ಆದರೆ, ಹೈಕಮಾಂಡ್, ಹಾಲಿ ಸಂಸದ, ಬಿಜೆಪಿ ರಾಷ್ಟ್ರೀಯ ಯುವ ಘಟಕದ ಸಾರಥಿ ತೇಜಸ್ವಿ ಸೂರ್ಯ ಅವರನ್ನು ಬಿಟ್ಟು ಸೋಮಣ್ಣ ಅವರಿಗೆ ಮಣೆ ಹಾಕುವುದೇ, ಕಾದು ನೋಡಬೇಕು.

ವಿ ಸೋಮಣ್ಣ ಅವರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...