ಕಾಂಗ್ರೆಸ್‌ಗೆ ಮರಳಿದ ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ

Date:

ಬಿಜೆಪಿ ತೊರೆದಿದ್ದ ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ ಗುರುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾದರು.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಮರಳಿದ್ದಾರೆ. ಸಚಿವರಾದ ಡಾ ಜಿ ಪರಮೇಶ್ವರ, ಕೆ ಎನ್ ರಾಜಣ್ಣ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಬಿ ಎನ್ ಚಂದ್ರಪ್ಪ, ಮಾಜಿ ಸಚಿವ ವೆಂಕಟರಮಣಪ್ಪ ಮತ್ತಿತರರು ಉಪಸ್ಥಿತರಿದ್ದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್– ಜೆಡಿಎಸ್ ಮೈತ್ರಿಯಿಂದಾಗಿ ತುಮಕೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿತ್ತು. ಹಾಲಿ ಸಂಸದರಾಗಿದ್ದ ಮುದ್ದಹನುಮೇಗೌಡ ಸ್ಪರ್ಧಿಸಲು ಸಾಧ್ಯವಾಗಿರಲಿಲ್ಲ. ನಂತರವೂ ಪಕ್ಷದಲ್ಲಿ ಯಾವುದೇ ಸ್ಥಾನಮಾನ ಸಿಕ್ಕಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಧಾನಸಭೆ ಚುನಾವಣೆ ಸಮಯದಲ್ಲಿ ಕುಣಿಗಲ್ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್ ಬಯಸಿದ್ದರು. ಟಿಕೆಟ್ ಸಿಗುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಬಿಜೆಪಿ ಸೇರಿದ್ದರು. ಆ ಪಕ್ಷದಲ್ಲೂ ಕುಣಿಗಲ್ ಕ್ಷೇತ್ರದಿಂದ ಕಣಕ್ಕಿಳಿಯಲು ಟಿಕೆಟ್‌ ಸಿಗಲಿಲ್ಲ. ಲೋಕಸಭೆಗೆ ಬಿಜೆಪಿಯಿಂದ ಟಿಕೆಟ್ ಸಿಗಬಹುದು ಎಂಬ ಆಶಾಭಾವನೆಯಲ್ಲಿ ಇದ್ದರು. ಬದಲಾದ ರಾಜಕೀಯ ಲೆಕ್ಕಾಚಾರದಲ್ಲಿ ಟಿಕೆಟ್ ಸಿಗುವುದು ಖಾತರಿಯಾಗದೆ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು.

ಈಗ ಕಾಂಗ್ರೆಸ್‌ಗೆ ಮತ್ತೆ ಮರಳಿರುವ ಮುದ್ದುಹನುಮೇಗೌಡ ಲೋಕಸಭೆಗೆ ಸ್ಪರ್ಧಿಸಲು ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...