ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾದ ದೇವೇಗೌಡ – ಮಲ್ಲಿಕಾರ್ಜುನ ಖರ್ಗೆ ಭೇಟಿ

Date:

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಆದರೆ, ಸೀಟು ಹಂಚಿಕೆ ಕುರಿತ ಮಾತುಕತೆಯೊಂದು ನಡೆಯಲು ಬಾಕಿ ಇದೆ. ಈ ನಡುವೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ ಡಿ ದೇವೇಗೌಡ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭೇಟಿಯಾಗಿರುವುದು ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಸಂಸತ್ ಭವನದಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ದೇವೇಗೌಡರು ಖರ್ಗೆ ಅವರನ್ನು ಭೇಟಿ ಮಾಡಿ, ಸುಮಾರು ಹೊತ್ತು ಚರ್ಚೆ ನಡೆಸಿದರು.

ಈ ಭೇಟಿಯ ಬಗ್ಗೆ ಕಾಂಗ್ರೆಸ್‌ನ ಸಂಸದ ರಾಜೀವ್ ಶುಕ್ಲಾ, ‘ಎಕ್ಸ್’ ಟ್ವೀಟ್ ಮಾಡಿದ್ದು, “ಮಾಜಿ ಪ್ರಧಾನಿ ದೇವೇಗೌಡರು ಇಂದು ಸಂಸತ್ ಭವನದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಅವರನ್ನು ಭೇಟಿ ಮಾಡಿ ಸುದೀರ್ಘ ಮಾತುಕತೆ ನಡೆಸಿದರು” ಎಂದು ತಿಳಿಸಿದ್ದಾರೆ. ಆದರೆ, ಯಾವ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು ಎಂಬ ಬಗ್ಗೆ ಮಾಹಿತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಇದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್​ ಡಿ ದೇವೇಗೌಡ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಬ್ಬರೂ ಕೂಡ ರಾಜ್ಯಸಭಾ ಸದಸ್ಯರಾಗಿದ್ದಾರೆ.

ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಕೇವಲ 65 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿ ಅಧಿಕಾರ ಕಳೆದುಕೊಂಡಿದ್ದರೆ ಮತ್ತು ಕಿಂಗ್ ಮೇಕರ್ ಆಗುವ ಕನಸು ಕಾಣುತ್ತಿದ್ದ ಜೆಡಿಎಸ್ ಕೇವಲ 19 ಸ್ಥಾನಗಳಲ್ಲಿ ಮಾತ್ರ ಗೆಲ್ಲುವ ಮೂಲಕ, ಹೀನಾಯವಾಗಿ ಸೋಲುಂಡಿತ್ತು. ಜನರಿಗೆ ನೀಡಿದ್ದ ಗ್ಯಾರಂಟಿಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಅಧಿಕಾರದ ಗದ್ದುಗೆಗೆ ಏರಿತ್ತು.

ಈ ನಡುವೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ‘ಇಂಡಿಯಾ’ ಮೈತ್ರಿಕೂಟ ಮಾಡಿಕೊಂಡಿದ್ದರೆ, ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲ 28 ಸ್ಥಾನಗಳನ್ನು ಗೆದ್ದುಕೊಳ್ಳಲು ಬಿಜೆಪಿ ಹಾಗೂ ಜೆಡಿಎಸ್ ಕೂಡ ಮೈತ್ರಿ ಮಾಡಿಕೊಂಡಿವೆ. ಆ ಮೂಲಕ ವಿಧಾನಸಭಾ ಚುನಾವಣೆಯ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಮೈತ್ರಿ ಬಗ್ಗೆ ಉಭಯ ಪಕ್ಷಗಳ ನಾಯಕರು ಘೋಷಣೆ ಮಾಡಿದ್ದಾರಾದರೂ, ಸೀಟು ಹಂಚಿಕೆ ಪ್ರಕ್ರಿಯೆಯ ಮಾತುಕತೆ ಇನ್ನೂ ನಡೆಯುತ್ತಲೇ ಇದೆ. ಸೀಟು ಹಂಚಿಕೆ ಪ್ರಕ್ರಿಯೆಯ ಬಳಿಕ ಏನೆಲ್ಲ ಬೆಳವಣಿಗೆ ನಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...