ಪ್ರಧಾನಿ ಮೋದಿಗೆ ಪ್ರಧಾನ ಕಾರ್ಯದರ್ಶಿಯಾಗಿ ಆರ್‌ಬಿಐ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

Date:

ಪ್ರಧಾನಿ ನರೇಂದ್ರ ಮೋದಿ ಅವರಿಗೆ 2ನೇ ಪ್ರಧಾನ ಕಾರ್ಯದರ್ಶಿಯಾಗಿ ಆರ್‌ಬಿಐ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ನೇಮಿಸಲಾಗಿದೆ. ಅವರ ನೇಮಕಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಈ ಬಗ್ಗೆ ಕೇಂದ್ರ ಸರ್ಕಾರವು ಸುತ್ತೋಲೆ ಹೊರಡಿಸಿದ್ದು, “ನಿವೃತ್ತ ಐಎಎಸ್ ಅಧಿಕಾರಿ, ಆರ್‌ಬಿಐ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನ ಮಂತ್ರಿಗಳ 2ನೇ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲು ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ. ದಾಸ್ ಅವರು ಅಧಿಕಾರ ವಹಿಸಿಕೊಳ್ಳುವ ದಿನಾಂಕದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ” ಎಂದು ಹೇಳಿದೆ.

ದಾಸ್ ಅವರು 2018ರ ಡಿಸೆಂಬರ್‌ನಿಂದ 2024ರ ಡಿಸೆಂಬರ್‌ 10ರವರೆಗೆ ಆರ್‌ಬಿಐ ಗವರ್ನರ್‌ ಆಗಿದ್ದರು. ಅದಕ್ಕೂ ಮುನ್ನ, ಅವರು ಕೇಂದ್ರ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳಲ್ಲಿ ಹಣಕಾಸು, ತೆರಿಗೆ, ಕೈಗಾರಿಕೆಗಳು, ಆರ್ಥಿಕ ವ್ಯವಹಾರಗಳು, ಕಂದಾಯ, ರಸಗೊಬ್ಬರ ಹಾಗೂ ಮೂಲಸೌಕರ್ಯ ಇಲಾಖೆಗಳಲ್ಲಿ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ. 15ನೇ ಹಣಕಾಸು ಆಯೋಗದ ಸದಸ್ಯರೂ ಆಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...