ಯುಪಿ ಮಾಜಿ ಪೊಲೀಸ್ ಮಹಾನಿರ್ದೇಶಕ ಬಿಜೆಪಿಗೆ ಸೇರ್ಪಡೆ

Date:

ಎರಡು ತಿಂಗಳ ಹಿಂದೆ ನಿವೃತ್ತ ಉತ್ತರ ಪ್ರದೇಶದ ಮಾಜಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವಿಜಯ್ ಕುಮಾರ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷವು ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸೂಚಿಸಿತ್ತು. ಅದರಂತೆ, ಪಕ್ಷಕ್ಕೆ ಸೇರಿದ್ದೇನೆ ಎಂದು ಹೇಳಿದ್ದಾರೆ.

1988ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ವಿಜಯ್ ಮತ್ತು ಅವರ ಪತ್ನಿ ಅನುಪಮಾ ಕುಮಾರ್ ಬಿಜೆಪಿಗೆ ಸೇರಿದ್ದಾರೆ. ಉತ್ತರ ಪ್ರದೇಶದಲ್ಲಿ 2015ರಲ್ಲಿ ಮಾಜಿ ಡಿಜಿಪಯೊಬ್ಬರು ಬಿಜೆಪಿಗೆ ಸೇರಿ, ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಇದೀಗ, ವಿಜಯ್ ಅವರು ಪಕ್ಷಕ್ಕೆ ಸೇರಿದ್ದಾರೆ. ಕಳೆದ 10 ವರ್ಷಗಳಲ್ಲಿ ಬಿಜೆಪಿಗೆ ಸೇರಿದ ಎರಡನೇ ಮಾಜಿ ರಾಜ್ಯ ಡಿಜಿಪಿ ಆಗಿದ್ದಾರೆ. ರಾಜಕೀಯ ಪ್ರವೇಶಿಸುವುದು ಅವರ ಧೀರ್ಘಕಾಲದ ಉದ್ದೇಶವಾಗಿತ್ತು ಎಂದು ಅವರು ಹೇಳಿದ್ದಾರೆ.

ಬಿಜೆಪಿ ಸೇರಿದ ಬಳಿಕ ಮಾತನಾಡಿದ ವಿಜಯ್, “ಗೃಹಿಣಿಯಾಗಿರುವ ನನ್ನ ಪತ್ನಿ ಮತ್ತು ನಾನು ರಾಜಕೀಯೇತರ ಹಿನ್ನೆಲೆಯಿಂದ ಬಂದವರು. ಪಕ್ಷದ ನಾಯಕತ್ವ ವಹಿಸುವ ಯಾವುದೇ ಜವಾಬ್ದಾರಿಯನ್ನು ನಿಭಾಯಿಸಲು ನಾವು ಸಿದ್ಧರಿದ್ದೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ಕಾನೂನು ಸುವ್ಯವಸ್ಥೆ ಸುಧಾರಿಸಿದೆ. ಇದು ಅಭಿವೃದ್ಧಿಗೆ ಅನುಕೂಲವಾಗಿದೆ. ಸಾಮಾನ್ಯ ಜನರಿಗೆ ಪರಿಹಾರವನ್ನು ಒದಗಿಸಿದೆ” ಎಂದಿದ್ದಾರೆ.

ಝಾನ್ಸಿ ಮೂಲದ ಕುಮಾರ್ ಅವರು 2023ರ ಮೇ 31ರಿಂದ 2024ರ ಜನವರಿ 31ರವರೆಗೆ ರಾಜ್ಯ ಡಿಜಿಪಿಯಾಗಿ ಸೇವೆ ಸಲ್ಲಿಸಿದರು.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಅಸೀಮ್ ಅರುಣ್ ಸೇರಿದಂತೆ ಹಲವಾರು ನಿವೃತ್ತ ಐಪಿಎಸ್ ಅಧಿಕಾರಿಗಳು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...