ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರು ಮೃತ್ಯು: ಉತ್ತರಾಖಂಡಕ್ಕೆ ಹೊರಟ ಸಚಿವ ಕೃಷ್ಣ ಬೈರೇಗೌಡ

Date:

ಚಾರಣಕ್ಕೆಂದು ತೆರಳಿದ್ದ ವೇಳೆ ಕರ್ನಾಟಕದ ನಾಲ್ವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ತಂಡದ ನೆರವಿಗಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಉತ್ತರಾಖಂಡಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ನೀಡಿರುವ ಸಚಿವ ಕೃಷ್ಣ ಬೈರೇಗೌಡ, “ಕರ್ನಾಟಕದ 20 ಜನ ಚಾರಣಿಗರು ಹಾಗೂ ಓರ್ವ ಗೈಡ್‌ ಒಳಗೊಂಡ ಚಾರಣಿಗರ ತಂಡವೊಂದು ಉತ್ತರಾಖಂಡದ ಎತ್ತರದ ಶಾಸ್ತ್ರತಾಳ್ ಮಯಳಿ ಎಂಬ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಚಾರಣ ಆರಂಭಿಸಿದ್ದಾರೆ. ಚಾರಣದ ಗಮ್ಯಸ್ಥಾನವನ್ನು ತಲುಪಿದ ತಂಡ ಮತ್ತೆ ಶಿಬಿರಕ್ಕೆ ಹಿಂತಿರುಗಲು ಯತ್ನಿಸಿದೆ. ಆದರೆ, ಹಿಂತಿರುಗುವ ಮಾರ್ಗದ ಮಾಧ್ಯೆ ನಿನ್ನೆ ಮಧ್ಯಾಹ್ನ 2 ಗಂಟೆಗೆ ಹಿಮಗಾಳಿಯಿಂದಾಗಿ ಹವಾಮಾನ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿ ಎಲ್ಲಾ ಚಾರಣಿಗರು ಅದೇ ಸ್ಥಳದಲ್ಲಿ ಅಪಾಯಕ್ಕೆ ಸಿಲುಕಿದ್ದರು” ಎಂದು ತಿಳಿಸಿದ್ದಾರೆ.

“ಕರ್ನಾಟಕದ ಚಾರಣಿಗರು ಪ್ರತಿಕೂಲ ವಾತಾವರಣದಿಂದಾಗಿ ಅಪಾಯಕ್ಕೆ ಸಿಲುಕಿದೆ ಎಂಬ ಮಾಹಿತಿ ನಿನ್ನೆ ರಾತ್ರಿ ನಮಗೆ ತಿಳಿದುಬಂದಿತ್ತು. ಈ ವಿಚಾರ ತಿಳಿದ ಕೂಡಲೇ ಜಿಲ್ಲಾಡಳಿತದ ಮುಖಾಂತರ ಉತ್ತರಾಖಂಡ ಸರ್ಕಾರ, ಭಾರತೀಯ ಪರ್ವತಾರೋಹಣ ಒಕ್ಕೂಟ ಮತ್ತು ಕೇಂದ್ರ ಸರ್ಕಾರದ ಗೃಹ ಇಲಾಖೆಯನ್ನು ಸಂಪರ್ಕಿಸಲಾಯಿತು. ಇವರ ಸಹಾಯದಿಂದ ಕರ್ನಾಟಕದ ಚಾರಣಿಗರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ” ಎಂದು ಸಚಿವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ಥಳೀಯವಾಗಿ ಲಭ್ಯವಿರುವ ಹೆಲಿಕಾಪ್ಟರ್‌ಗಳ ಸಹಾಯದಿಂದ ನಿನ್ನೆ ಸಂಜೆಯಿಂದಲೇ ತುರ್ತು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಅಲ್ಲದೆ, ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಚಾರಣಿಗರ ರಕ್ಷಣೆಗಾಗಿ ಇಂದು ಬೆಳಗ್ಗೆ 9 ಗಂಟೆಗೆ ಉತ್ತರಕಾಶಿ ತಲುಪಿದೆ. ಜೊತೆಗೆ ಇಂದು ಬೆಳಗ್ಗೆ ವಿಪತ್ತು ನಿರ್ವಹಣಾ ಪಡೆ ಭೂ ಮಾರ್ಗವಾಗಿ ಶಿಬಿರದ ಬಳಿಗೆ ತೆರಳಲು ಪ್ರಾರಂಭಿಸಿದೆ. ರಕ್ಷಣಾ ಕಾರ್ಯಾಚರಣೆಯ ಫಲವಾಗಿ ಕೆಲವು ಚಾರಣಿಗರನ್ನು ಈವರೆಗೆ ರಕ್ಷಿಸಲಾಗಿದ್ದು, ಅವರನ್ನು ಡೆಹ್ರಾಡೂನ್‌ನ ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

“ಚಾರಣಿಗರ ಪೈಕಿ ಒಬ್ಬರೊಂದಿಗೆ ಸ್ವತಃ ನಾನು ಮಾತನಾಡಿದ್ದು, ಅಲ್ಲಿನ ಸದ್ಯದ ಪರಿಸ್ಥಿತಿಯ ಬಗ್ಗೆ ನಿಖರ ಮಾಹಿತಿ ಕಲೆ ಹಾಕಲಾಗಿದೆ. ಉಳಿದವರನ್ನೂ ರಕ್ಷಿಸುವ ಕಾರ್ಯ ಪ್ರಗತಿಯಲ್ಲಿದ್ದು, ಚಾರಣಿಗರನ್ನು ರಕ್ಷಿಸಲು ಕರ್ನಾಟಕ ಸರ್ಕಾರವು ತನ್ನಿಂದಾದ ಎಲ್ಲ ಪ್ರಯತ್ನಗಳನ್ನು ಈಗಾಗಲೇ ಪ್ರಾರಂಭಿಸಿದೆ. ಈ ಕಾರ್ಯಾಚರಣೆಗೆ ಸಹಕಾರ ಒದಗಿಸುವ ಸಲುವಾಗಿ ಸ್ವತಃ ನಾನು ಸಹ ಬುಧವಾರ ಮಧ್ಯಾಹ್ನ ಡೆಹ್ರಾಡೂನ್‌ಗೆ ಹೊರಟಿದ್ದೇನೆ” ಎಂದು ತಿಳಿಸಿದ್ದಾರೆ.

WhatsApp Image 2024 06 05 at 2.50.47 PM

“ದುರದೃಷ್ಟವಶಾತ್‌ ಕೆಲವು ಚಾರಣಿಗರು ಮೃತಪಟ್ಟಿರುವ ವರದಿಯೂ ಲಭ್ಯವಾಗಿದ್ದು, ಅದನ್ನು ನಾವು ಸ್ಥಳೀಯ ಅಧಿಕಾರಿಗಳು ಮತ್ತು ಖಾಸಗಿ ಏಜೆನ್ಸಿಗಳೊಂದಿಗೆ ಮರುದೃಢೀಕರಿಸಲು ಪ್ರಯತ್ನಿಸುತ್ತಿದ್ದೇವೆ. ಮೃತ ಚಾರಣಿಗರ ಮೃತದೇಹಗಳನ್ನು ಹೊರತೆಗೆಯಲು ಎಲ್ಲ ಪ್ರಯತ್ನಗಳನ್ನು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮಗೆ ಸೂಚನೆ ನೀಡಿದ್ದಾರೆ. ನಾವು ಉತ್ತರಾಖಂಡ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದು, ಈ ನಿಟ್ಟಿನಲ್ಲಿ ಕೆಲಸ ನಿರ್ವಹಿಸಲಿದ್ದೇವೆ” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಧ್ಯಮ ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...