ವಂಚನೆ ಪ್ರಕರಣ | ಬಿಜೆಪಿ ನಾಯಕ, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು ಶಿಕ್ಷೆ

Date:

ಬ್ಯಾಂಕ್‌ಗೆ ವಂಚಿಸಿದ್ದ ಪ್ರಕರಣದಲ್ಲಿ ಬಿಜೆಪಿ ನಾಯಕ, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಅವರಿಗೆ ಜೈಲು ಶಿಕ್ಷೆ ವಿಧಿಸಿದೆ.

ಮಾಲೂಕು ಕ್ಷೇತ್ರದ ಬಿಜೆಪಿ ಶಾಸಕರೂ ಆಗಿದ್ದ, ಬಾಲಾಜಿಕೃಪಾ ಎಂಟರ್‌ಪ್ರೈಸಸ್‌ನ ಮಾಲೀಕ ಕೃಷ್ಣಯ್ಯ ಶೆಟ್ಟಿ 1993ರಲ್ಲಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ, ಹಲವು ನೌಕರರ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ 7.17 ಕೋಟಿ ರೂ. ಬ್ಯಾಂಕ್ ಸಾಲ ಪಡೆದಿದ್ದರು. ಇದರಲ್ಲಿ 3.53 ಕೋಟಿ ಸಾಲ ತೀರಿಸಿಲ್ಲ ಎಂದು ಆರೋಪಿಸಲಾಗಿತ್ತು. ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ, ಚಾರ್ಜ್‌ಶೀಟ್‌ ಸಲ್ಲಿಸಿತ್ತು.

ಪ್ರಕರಣದಲ್ಲಿ ಕೃಷ್ಣಯ್ಯ ಶೆಟ್ಟಿ ಅವರೊಂದಿಗೆ ಕೆ.ವಿ.ಹನುಮಪ್ಪ ರೆಡ್ಡಿ, ಜಿ.ಎಂ.ರಮೇಶ್, ಶೀನಿವಾಸ್ ಹಾಗೂ ಮುನಿರಾಜು ಎಂಬವರು ಭಾಗಿಯಾಗಿದ್ದಾರೆ. ಅಲ್ಲದೆ, ಬೆಂಗಳೂರು ಗ್ರಾಮಾಂತರ ನಗರ ಶಾಖೆಯ ಎಸ್‌ಬಿಎಂ ವ್ಯವಸ್ಥಾಪಕ ಎಂ.ಟಿ.ವಿ ರೆಡ್ಡಿ ಕೂಡ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 120ಬಿ, 409, 419, 420, 467, 471 ಹಾಗೂ ಸಿಆರ್‌ಪಿಸಿ ಸೆಕ್ಷನ್ 13(1)ಡಿ, 13(2) ಅಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ನ್ಯಾಯಾಲಯವು, ಇದೀಗ, ಕೃಷ್ಣಯ್ಯ ಸೆಟ್ಟಿ ಸೇರಿದಂತೆ ಎಲ್ಲ ಆರೋಪಿಗಳನ್ನು ಅಪರಾಧಿಗಳು ಘೋಷಿಸಿದೆ. ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಯ ಪ್ರಮಾಣ ಇನ್ನೂ ಘೋಷಿಸಲಾಗಿಲ್ಲ. ಶುಕ್ರವಾರ ಘೋಷಿಸುವ ಸಾಧ್ಯತೆಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...