ವಂಚನೆ ಪ್ರಕರಣ | ಅಭಿನವ ಹಾಲಶ್ರೀಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು

Date:

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ ಉದ್ಯಮಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಮೂಲದ ಚೈತ್ರಾ ಸೇರಿದಂತೆ 9 ಮಂದಿ ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿರುವ ನಡುವೆಯೇ, ಪ್ರಕರಣದ ಎ3 ಆರೋಪಿಯಾಗಿರುವ ಅಭಿನವ ಹಾಲಶ್ರೀಗೆ ಹೈಕೋರ್ಟ್ ಇಂದು (ನ.8) ಜಾಮೀನು ಮಂಜೂರು ಮಾಡಿದೆ.

ಆ ಮೂಲಕ ಈ ಪ್ರಕರಣದಲ್ಲಿ ಅಭಿನವ ಹಾಲಶ್ರೀ ಜಾಮೀನು ಪಡೆದ ಮೊದಲ ಆರೋಪಿಯಾಗಿದ್ದಾರೆ. ಹೈಕೋರ್ಟ್ ಏಕಸದಸ್ಯ ಪೀಠವು ಬುಧವಾರ ಜಾಮೀನು ಮಂಜೂರು ಮಾಡಲಾಗಿದೆ.

ವಂಚನೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬರುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಹಾಲಶ್ರೀ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅ. 16 ರಂದು ಚೈತ್ರಾ ಮತ್ತು ತಂಡದಿಂದ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಮೂರನೇ ಆರೋಪಿಯಾದ ಅಭಿನವ ಹಾಲಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಲಾಶ್ರೀಗೆ ಜಾಮೀನು ನೀಡದಂತೆ ಈ ಹಿಂದೆ ಸಿಸಿಬಿ ಆಕ್ಷೇಪಣೆ ಸಲ್ಲಿಸಿತ್ತು. ಬಳಿಕ ಹಾಲಶ್ರೀ ಪರ ವಕೀಲರಾದ ಅರುಣ್ ಶ್ಯಾಮ್, ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ, ಚೈತ್ರಾ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಈ ಕುರಿತು ಸುದಿರ್ಘ ವಿಚಾರಣೆ ನಡೆಸಿದ್ದ ನ್ಯಾಯಾಲಯವು, ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸಿಸಿಬಿಗೆ ಸೂಚಿಸಿತ್ತು.

ಇದನ್ನು ಓದಿದ್ದೀರಾ? ವಂಚನೆ ಪ್ರಕರಣ | ಚೈತ್ರಾ ಸೇರಿದಂತೆ 9 ಆರೋಪಿಗಳ ವಿರುದ್ಧ 800 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಈ ನಡುವೆ ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ವಂಚನೆಗೆ ಒಳಗಾದ ಉದ್ಯಮಿ ಗೋವಿಂದಬಾಬು ಪೂಜಾರಿ ಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ಜಾಮೀನು ಪಡೆದ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿರುವ ಹಾಲಶ್ರೀ ಪರ ಹಿರಿಯ ವಕೀಲ ಅರುಣ್ ಶ್ಯಾಮ್, ‘ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಇವರ ಮೇಲಿರುವ ಆರೋಪ ಮ್ಯಾಜಿಸ್ಟ್ರೇಟ್ ಹಂತದಲ್ಲಿ ತನಿಖೆ ನಡೆಸಬಹುದು. ಅಲ್ಲದೇ, ಈಗಾಗಲೇ ತನಿಖೆ ನಡೆಸುತ್ತಿರುವ ಪೊಲೀಸರು ಒಂದೂವರೆ ಕೋಟಿ ಹಣವನ್ನು ಪತ್ತೆ ಹಚ್ಚಿ, ವಶಕ್ಕೆ ಪಡೆದುಕೊಂಡಿದ್ದಾರೆ. ಹಾಗಾಗಿ, ಆರೋಪಿಯನ್ನು ಕಸ್ಟಡಿಯಲ್ಲಿಟ್ಟುಕೊಳ್ಳುವ ಅವಶ್ಯಕತೆ ಎಲ್ಲ ಎಂದು ಪರಿಗಣಿಸಿ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ’ ಎಂದು ತಿಳಿಸಿದ್ದಾರೆ.

ವಂಚನೆ ಪ್ರಕರಣದಲ್ಲಿ ಎ3 ಆರೋಪಿಯಾಗಿದ್ದ ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನವರಾದ ಹಾಲಶ್ರೀ, ಪ್ರಕರಣ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದರು. ಬಳಿಕ ಅವರನ್ನು ಒಡಿಶಾ ರಾಜ್ಯದ ಕಟಕ್‌ನಲ್ಲಿ ಬೆಂಗಳೂರು ಸಿಸಿಬಿ ಪೊಲೀಸರ ತಂಡ ಬಂಧಿಸಿತ್ತು. ಸದ್ಯ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...