ವಂಚನೆ ಪ್ರಕರಣ | ಚೈತ್ರಾ ಸೇರಿ ಏಳು ಮಂದಿ ಆರೋಪಿಗಳು ಅ.6ರವರೆಗೆ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ

Date:

  • ಸಿಸಿಬಿ ವಶಕ್ಕೆ ನೀಡಲಾಗಿದ್ದ ಹತ್ತು ದಿನಗಳ ಕಾಲಾವಕಾಶ ಇಂದು(ಸೆ.23) ಪೂರ್ಣ
  • ಅ.6ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬೆಂಗಳೂರಿನ 3ನೇ ಎಸಿಎಂಎಂ ನ್ಯಾಯಾಲಯ

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ನಂಬಿಸಿ ಕೋಟ್ಯಂತರ ರೂ. ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಸೇರಿ ಏಳು ಮಂದಿ ಆರೋಪಿಗಳನ್ನು ಅಕ್ಟೋಬರ್‌ 6ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ.

ಆರೋಪಿಗಳ ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ವಶಕ್ಕೆ ನೀಡಲಾಗಿದ್ದ 10 ದಿನಗಳ ಕಾಲಾವಕಾಶ ಇಂದು(ಸೆ.23) ಪೂರ್ಣಗೊಂಡಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.

ಗಗನ್, ರಮೇಶ್ ಹಾಗೂ ಶ್ರೀಕಾಂತ್‌ನನ್ನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು, ತಪಾಸಣೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಸಿಸಿಬಿ ತನಿಖಾಧಿಕಾರಿಯವರು ಚೈತ್ರಾ ಮತ್ತು ಇತರೆ ಆರೋಪಿಗಳನ್ನು ವಿಚಾರಣೆ ನಡೆಸಿ ಎಲ್ಲ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
abhina swamiji 1

ಪ್ರಕರಣದ ಎ3 ಆರೋಪಿ ಅಭಿನವ ಹಾಲಶ್ರೀ

ನ್ಯಾಯಾಲಯದಲ್ಲಿ ಸಿಸಿಬಿ ಪೊಲೀಸರು ಕಸ್ಟಡಿಗೆ ನೀಡಲು ಮನವಿ ಮಾಡಿದ ಕಾರಣ ನ್ಯಾಯಾಲಯವು ಚೈತ್ರಾ ಕುಂದಾಪುರ ಮತ್ತು ಇತರೆ ಆರು ಮಂದಿ ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ, ಆದೇಶ ನೀಡಿದೆ.

ನ್ಯಾಯಾಂಗ ಬಂಧನದ ಹಿನ್ನೆಲೆಯಲ್ಲಿ ಏಳು ಮಂದಿ ಆರೋಪಿಗಳಾದ ಚೈತ್ರಾ ಕುಂದಾಪುರ, ಚಿಕ್ಕಮಗಳೂರು ಬಿಜೆಪಿ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಗಗನ್ ಕಡೂರು, ರಮೇಶ್, ಪ್ರಜ್ವಲ್, ಧನರಾಜ್, ಶ್ರೀಕಾಂತ್, ಚನ್ನಾನಾಯ್ಕ್ ಎಂಬುವವರನ್ನು ಬೆಂಗಳೂರಿನಲ್ಲಿರುವ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಈ ನಡುವೆ ಸೆ.29ರವರೆಗೆ ಸಿಸಿಬಿ ಕಸ್ಟಡಿಯಲ್ಲಿರುವ ಪ್ರಕರಣದ ಎ3 ಆರೋಪಿ ಅಭಿನವ ಹಾಲಶ್ರೀ ಅವರ ವಿಚಾರಣೆಯನ್ನು ಪೊಲೀಸರು ಮುಂದುವರಿಸಿದ್ದು, ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಚೈತ್ರಾ ಹಾಗೂ ಅಭಿನವ ಹಾಲಶ್ರೀ ಆಪ್ತರಿಗೆ ನೋಟಿಸ್ ಜಾರಿ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...