ವಂಚನೆ ಪ್ರಕರಣ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಮನೆ ಮೇಲೆ ಪೊಲೀಸರ ದಾಳಿ

Date:

2024ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ, 2 ಕೋಟಿ ರೂ. ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಗೋಪಾಲ್ ಜೋಶಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ, ಅವರ ಮನೆಯ ಮೇಲೆ ಎಸಿಪಿ ಚಂದನ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರನಾಗಿರುವ ಗೋಪಾಲ್ ಜೋಶಿ ಅವರು ಪ್ರಲ್ಹಾದ್ ಜೋಶಿ ಮತ್ತು ಅಮಿತ್ ಶಾ ಹೆಸರು ಬಳಸಿಕೊಂಡು ವಂಚನೆ ಎಸಗಿದ್ದಾರೆ ಎಂದು ಮಾಜಿ ಶಾಸಕ ದೇವಾನಂದ ಸಿಂಗ್ ಔಹಾಣ್ ಅವರ ಪತ್ನಿ ಸುನಿತಾ ಆರೋಪಿಸಿದ್ದಾರೆ. ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಬೆನ್ನಲ್ಲೇ ಗೋಪಾಲ್ ಜೋಶಿ ತಲೆಮರೆಸಿಕೊಂಡಿದ್ದರು. ಶನಿವಾರ ಬೆಳಗ್ಗೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ, ಎಸಿಪಿ ಚಂದನ್ ನೇತೃತ್ವದಲ್ಲಿ ದಾಳಿ ನಡೆದಿದೆ. ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿರುವ ನಿವಾಸದ ಮೇಲೆ ದಾಳಿ ನಡೆದಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...