ಸಣ್ಣ ನೇಕಾರರಿಗೆ ’10 ಹೆಚ್‌ಪಿ’ವರೆಗೆ ಉಚಿತ ವಿದ್ಯುತ್: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಸಣ್ಣ ನೇಕಾರರಿಗೆ ಬೆಂಬಲ ನೀಡುವ ಉದ್ದೇಶದಿಂದ ’10 ಹೆಚ್‌ಪಿ’ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ ’10 ಹೆಚ್‌ಪಿ’ವರೆಗಿನ ಉಚಿತ ವಿದ್ಯುತ್ ನೀಡುವ ಯೋಜನೆ ರೂಪಿಸುವ ಕುರಿತು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಧಿಕಾರಿಗಳು ಹಾಗೂ ನೇಕಾರರ ನಿಯೋಗದೊಂದಿಗೆ ಅವರು ಸಭೆ ನಡೆಸಿದರು. ಬಳಿಕ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಈ ಮಹತ್ವದ ತೀರ್ಮಾನ ಪ್ರಕಟಿಸಿದ್ದಾರೆ.

ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಗೌರವ್ ಗುಪ್ತಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಂ, ಜವಳಿ ಇಲಾಖೆ ಕಾರ್ಯದರ್ಶಿ ಪಿ.ಎಸ್.ಎನ್.ಕುಮಾರ್ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...