ರಾಗಿ-ಭತ್ತದ ತಳಿಗೆ ಜಿ ಮಾದೇಗೌಡರ ಹೆಸರಿಡಿ: ಕೃಷಿ ವಿವಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

Date:

  • ಜಿ. ಮಾದೇಗೌಡರ ಹೆಸರಿಡುವಂತೆ ಮನವಿ ಮಾಡಿದ್ದ ಶಾಸಕ ದಿನೇಶ್‌ ಗೂಳಿಗೌಡ
  • ಶಾಸಕರ ಮನವಿಗೆ ಸ್ಪಂದಿಸಿದ ಕೃಷಿ ಸಚಿವ ಚಲುವರಾಯಸ್ವಾಮಿ

ರಾಗಿ ಅಥವಾ ಭತ್ತದ ತಳಿಗೆ ರಾಜ್ಯದ ಹಿರಿಯ ಮುತ್ಸದ್ದಿ, ರೈತ ಹೋರಾಟಗಾರ ದಿ. ಜಿ ಮಾದೇಗೌಡರ ಹೆಸರಿಡಲು ಕ್ರಮ ವಹಿಸಿ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪ ಕುಲಪತಿ ಮತ್ತು ಕೃಷಿ ಇಲಾಖೆ ಕಾರ್ಯದರ್ಶಿಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.

ಜುಲೈ 12ರ ಸೋಮವಾರ ನಡೆದಿದ್ದ ಡಾ. ಜಿ ಮಾದೇಗೌಡ ಪ್ರತಿಷ್ಠಾನದ 23ನೇ ವರ್ಷದ ರಾಜ್ಯ ಮಟ್ಟದ ಜಿ. ಮಾದೇಗೌಡ ಸಮಾಜಸೇವಾ ಮತ್ತು ಸಾವಯವ ಕೃಷಿ ಪ್ರಶಸ್ತಿ ಸಮಾರಂಭದಲ್ಲಿ ಶಾಸಕ ದಿನೇಶ್‌ ಗೂಳಿಗೌಡ ಅವರು ಈ ವಿಷಯದ ಬಗ್ಗೆ ಕೃಷಿ ಸಚಿವರ ಗಮನ ಸೆಳೆದಿದ್ದರು. ಶಾಸಕ ದಿನೇಶ್‌ ಗೂಳಿಗೌಡ ಅವರ ಮನವಿಗೆ ಸಚಿವರು ಸ್ಪಂದಿಸಿದ್ದಾರೆ.

G Madegowda

“ಜಿ ಮಾದೇಗೌಡರು ಕಳೆದ 60 ವರ್ಷಗಳ ಕಾಲ ಶೈಕ್ಷಣಿಕವಾಗಿ, ರಾಜಕೀಯವಾಗಿ ಹತ್ತು ಹಲವು ಕೊಡುಗೆಗಳನ್ನು ನೀಡುತ್ತಾ ಬಂದಿದ್ದಾರೆ. ಅವರ ಹೆಸರು ಮುಂದಿನ ಪೀಳಿಗೆಗೆ ಚಿರಸ್ಥಾಯಿಯಾಗಿ ಉಳಿಯಲು ಭತ್ತ ಅಥವಾ ರಾಗಿ ತಳಿಗೆ ಅವರ ಹೆಸರನ್ನು ನಾಮಕರಣ ಮಾಡಬೇಕು. ಈ ಮೂಲಕ ಅವರಿಗೆ ಗೌರವವನ್ನು ಸಮರ್ಪಣೆ ಮಾಡಬೇಕು” ಎಂದು ವೇದಿಕೆಯಲ್ಲಿದ್ದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರಿಗೆ ಮನವಿ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 60 ದಿನವಾದರೂ ವಿಪಕ್ಷ ನಾಯಕನ ಆಯ್ಕೆ ಇಲ್ಲ: ಬಸವಳಿದ ರಾಜ್ಯ ಬಿಜೆಪಿ; ಆಸ್ಥೆ ತೋರದ ಮೋದಿ-ಶಾ

ಈ ಮನವಿಗೆ ಅದೇ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದರು. ತುರ್ತಾಗಿ ಈ ಬಗ್ಗೆ ಕ್ರಮ ವಹಿಸುವುದಾಗಿಯೂ ಹೇಳಿದ್ದರು. ಈಗ ಈ ಸಂಬಂಧ ಕ್ರಮ ವಹಿಸುವಂತೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪ ಕುಲಪತಿಗಳಿಗೆ ಮತ್ತು ಕೃಷಿ ಇಲಾಖೆ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ದಿನೇಶ್‌ ಗೂಳಿಗೌಡ, ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತುರ್ತಾಗಿ ಸ್ಪಂದಿಸಿರುವುದು ನಿಜಕ್ಕೂ ಅಭಿನಂದನೀಯ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...