ಹಂಪಿಯಲ್ಲಿ ಜಿ20 ಶೃಂಗಸಭೆ; ರಾಜ್ಯದ ಬೊಕ್ಕಸಕ್ಕೆ 47 ಕೋಟಿ ರೂ. ಹೊರೆ

Date:

ವಿಜಯನಗರ ಜಿಲ್ಲೆಯ ಐತಿಹಾಸಿಕ ತಾಣ ಹಂಪಿಯಲ್ಲಿ ಜುಲೈ 9 ರಿಂದ 16ರವರೆಗೆ ಜಿ20 ಶೃಂಗಸಭೆ (ಸಾಂಸ್ಕೃತಿಕ ಕಾರ್ಯಕಾರಿ ಸಮಿತಿ ಮತ್ತು ಶೆರ್ಪಾ ಸಭೆ) ನಡೆಯಲಿದೆ. ಶೃಂಗಸಭೆಗಾಗಿ ರಾಜ್ಯ ಸರ್ಕಾರವು 47 ಕೋಟಿ ರೂಪಾಯಿಗಳನ್ನು ಖರ್ಚು ಮಾಡುವ ಸಾಧ್ಯತೆ ಇದೆ.

ಶುಕ್ರವಾರ ಬೆಂಗಳೂರಿನಲ್ಲಿ ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್ ಅವರು ಸಭೆಯ ಸಿದ್ಧತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಒಟ್ಟಾಗಿ ಸುಮಾರು 46.7 ಕೋಟಿ ರೂ. ಖರ್ಚು ಮಾಡಲಿದ್ದು, ರಸ್ತೆಗಳ ದುರಸ್ತಿ, ಇಂಟರ್ನೆಟ್ ಸಂಪರ್ಕ, ಚರಂಡಿ ವ್ಯವಸ್ಥೆ, ಪೊಲೀಸ್‌ ಔಟ್‌ಪೋಸ್ಟ್‌, ವಾಹನ ವ್ಯವಸ್ಥೆಗೆ ಹೆಚ್ಚು ಖರ್ಚಾಗುತ್ತದೆ ಎಂದು ಹೇಳಲಾಗಿದೆ.

ಇದಲ್ಲದೇ, ಹಂಪಿಯಲ್ಲಿ ಮುಂದಿನ ಎಂಟು ತಿಂಗಳವರೆಗೆ ಮಾಸಿಕ 2 ಕೋಟಿ ರೂಪಾಯಿ ವೆಚ್ಚದಲ್ಲಿ ಕಣ್ಗಾವಲು ಕ್ಯಾಮೆರಾಗಳು ಮತ್ತು ಇತರ ರಸ್ತೆ ಸುರಕ್ಷತಾ ಸಾಧನಗಳನ್ನು ಅಳವಡಿಸಲು ಗೃಹ ಇಲಾಖೆ ಮುಂದಾಗಿದೆ. ಆದರೆ, ಇಲಾಖೆಯ ಸಂಪೂರ್ಣ ಪ್ರಸ್ತಾವನೆಯನ್ನು ಅಂಗೀಕರಿಸಲಾಗುವುದಿಲ್ಲ ಎಂದು ಹಿರಿಯ ಸರ್ಕಾರಿ ಅಧಿಕಾರಿಗಳು ಹೇಳಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

47 ಕೋಟಿ ರೂ. ವೆಚ್ಚವು ಜಿ20 ಶೃಂಗಸಭೆಗಾಗಿ ಮಾತ್ರವಲ್ಲ, ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ವ್ಯಯಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏತನ್ಮಧ್ಯೆ, ಸಭೆಗಳಲ್ಲಿ ಭಾಗವಹಿಸುವ ಪ್ರತಿನಿಧಿಗಳಿಗೆ ‘ಹಂಪಿ ವೀಕ್ಷಣೆ’ ಕಾರ್ಯಕ್ರಮವನ್ನು ರಾಜ್ಯ ಪ್ರಸ್ತಾಪಿಸಿದೆ. ಇವುಗಳಲ್ಲಿ ಎರಡು ದಿನಗಳ ಕಾಲ ಸ್ಮಾರಕಗಳ ವೀಕ್ಷಣೆ, ಯೋಗ ಕಾರ್ಯಕ್ರಮ, ತುಂಗಭದ್ರಾ ನದಿ ದಡದಲ್ಲಿ ಚಾರಣ ನಡೆಯಲು ಸರ್ಕಾರ ಯೋಜಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...