ಮುಂಬೈ | ಉದ್ಧವ್ ಠಾಕ್ರೆ ಭೇಟಿ ಬಳಿಕ ‘ಆಟ ಆರಂಭ’ ಎಂದ ಮಮತಾ ಬ್ಯಾನರ್ಜಿ

Date:

ಮುಂಬೈನಲ್ಲಿ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಅವರನ್ನು ಶುಕ್ರವಾರ ಭೇಟಿಯಾದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ‘ಆಟ ಆರಂಭವಾಗಿದೆ, ಅದು ಮುಂದುವರಿಯುತ್ತದೆ” ಎಂದು ಹೇಳಿದ್ದಾರೆ.

ಇಂಡಿಯಾ ಒಕ್ಕೂಟದ ಇಬ್ಬರು ಪ್ರಮುಖ ನಾಯಕರುಗಳನ್ನು ಭೇಟಿಯಾದ ಬಳಿಕ ಠಾಕ್ರೆ ಜೊತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, “ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಸ್ಥಿರವಾಗಿಲ್ಲ ಮತ್ತು ಅದರ ಅವಧಿಯನ್ನು ಪೂರ್ಣಗೊಳಿಸದಿರಬಹುದು” ಎಂದು ಅಭಿಪ್ರಾಯಿಸಿದರು.

“ಈ ಸರ್ಕಾರ ಮುಂದುವರೆಯದಿರಬಹುದು. ಇದು ಸ್ಥಿರ ಸರ್ಕಾರವಲ್ಲ. ನಮ್ಮ ಆಟ ಆರಂಭವಾಗಿದೆ. ಅದು ಮುಂದುವರಿಯಲಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂಡಿಯಾ ಒಕ್ಕೂಟವು ತುಂಬಾ ಪ್ರಬಲವಾಗಿದೆ. ವಿವಿಧತೆಯಲ್ಲಿ ಏಕತೆ ಎಂಬ ನಮ್ಮ ನಿಲುವು ಬಹಳ ಸ್ಪಷ್ಟವಾಗಿದೆ” ಎಂದ ಬ್ಯಾನರ್ಜಿ, “ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ. ಕಡಿಮೆ ಅಂತರದಲ್ಲಿ ಹಲವಾರು ಸ್ಥಾನಗಳನ್ನು ಗೆದ್ದಿದೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ?  ವಿಶ್ವಾಸಾರ್ಹತೆಯನ್ನು ಕಳೆದುಕೊಂಡ ಮೋದಿ ರಾಜೀನಾಮೆ ನೀಡಬೇಕು: ಮಮತಾ ಬ್ಯಾನರ್ಜಿ

“ಮುಂಬೈನಲ್ಲಿಯೂ ಬಿಜೆಪಿ ಅಧಿಕಾರವನ್ನು ದುರುಪಯೋಗ ಮಾಡಿದೆ. ಬಿಜೆಪಿಯ ಮೈತ್ರಿ ಅಭ್ಯರ್ಥಿ ಬರೀ 48 ಮತಗಳ ಅಂತರದಲ್ಲಿ ಗೆದ್ದಿದ್ದಾರೆ” ಎಂದು ಅನುಮಾನ ವ್ಯಕ್ತಪಡಿಸಿದರು.

1975ರಲ್ಲಿ ತುರ್ತು ಪರಿಸ್ಥಿತಿಯನ್ನು ವಿಧಿಸಿದ ದಿನವಾದ ಜೂನ್ 25 ಅನ್ನು ‘ಸಂವಿಧಾನ ಹತ್ಯೆ ದಿವಸ’ವಾಗಿ ಆಚರಿಸಲು ಕೇಂದ್ರ ಘೋಷಣೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಮತಾ, “ತುರ್ತು ಪರಿಸ್ಥಿತಿಯ ಸಂದರ್ಭಗಳು ಪ್ರಧಾನಿ ನರೇಂದ್ರ ಮೋದಿಯವರ ಅಧಿಕಾರಾವಧಿಯಲ್ಲಿ ಹೆಚ್ಚಾಗಿ ಕಂಡುಬಂದಿದೆ” ಎಂದು ಹೇಳಿದರು.

“ನಾವು ತುರ್ತು ಪರಿಸ್ಥಿತಿಯನ್ನು ಬೆಂಬಲಿಸುವುದಿಲ್ಲ. ಅವರು (ಇಂದಿರಾ ಗಾಂಧಿ) ಕನಿಷ್ಠ ಅದನ್ನು ಘೋಷಿಸಿದರು. ಆದರೆ ಮೋದಿ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಇನ್ನು ಅಂತಹ ಯಾವುದೇ ನಿರ್ಧಾರ ಕೈಗೊಳ್ಳುವಾಗ ಆಡಳಿತ ಪಕ್ಷವು ವಿಪಕ್ಷಗಳನ್ನು ಸಂಪರ್ಕಿಸಬೇಕು. ಆದರೆ ಬಿಜೆಪಿ ಏಕಪಕ್ಷೀಯ ನಿರ್ಧಾರವನ್ನು ತೆಗೆದುಕೊಳ್ಳುತ್ತಿದೆ” ಎಂದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...