ಬಿಹಾರ ಚುನಾವಣೆ | SIR ಮೂಲಕ ಆಡಿದ ‘ಆಟ’ ಮತ್ತೆ ಆಡಲು ಬಿಡಲ್ಲ: ಅಖಿಲೇಶ್ ಯಾದವ್

Date:

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ನಡೆಸಲಾದ ‘ಆಟ’ ಇನ್ನು ಮುಂದೆ ಇತರ ರಾಜ್ಯಗಳಲ್ಲಿ ಆಡಲು ಸಾಧ್ಯವಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರ ಆರೋಪಿಸಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಬಿಹಾರದಲ್ಲಿ ಮುನ್ನಡೆ ಸಾಧಿಸುತ್ತಿರುವ ನಡುವೆ ಯಾದವ್ ಈ ಹೇಳಿಕೆಯನ್ನು ನೀಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಬಿಹಾರದಲ್ಲಿ ಎಸ್‌ಐಆರ್ ಮೂಲಕ ನಡೆಸಲಾದ ಆಟ ಈಗ ಬಹಿರಂಗಗೊಂಡಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಉತ್ತರ ಪ್ರದೇಶ ಅಥವಾ ಬೇರೆಲ್ಲಿಯೂ ಅಂತಹ ‘ಚುನಾವಣಾ ಪಿತೂರಿಗಳು’ ಸಾಧ್ಯವಿಲ್ಲ. ನಾವು ಇನ್ನು ಮುಂದೆ ಅವರಿಗೆ ಈ ರೀತಿ ಆಟವಾಡಲು ಬಿಡಲ್ಲ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಬಿಹಾರ ಚುನಾವಣೆ | ಬಿಜೆಪಿ 9, ಜೆಡಿಯು 6, ಆರ್‌ಜೆಡಿ 3 ಕ್ಷೇತ್ರಗಳಲ್ಲಿ ಗೆಲುವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿಸಿಟಿವಿಯಂತೆ, ನಮ್ಮ ‘ಪಿಪಿಟಿವಿ’ ಅಥವಾ ‘ಪಿಡಿಎ (ಹಿಂದುಳಿದ, ದಲಿತ, ಅಲ್ಪಸಂಖ್ಯಾತ) ಪ್ರಹರಿ (ಕಾವಲುಗಾರ)’ ಜಾಗರೂಕರಾಗಿ ಬಿಜೆಪಿಯ ಯೋಜನೆಗಳನ್ನು ವಿಫಲಗೊಳಿಸುತ್ತದೆ” ಎಂದೂ ತಿಳಿಸಿದ್ದಾರೆ.

ಬಿಹಾರದಲ್ಲಿ ಚುನಾವಣೆಗೆ ಕೆಲವೇ ತಿಂಗಳುಗಳು ಇರುವಾಗ ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗಿದ್ದು, ಚುನಾವಣಾ ಆಯೋಗವು ಸೆಪ್ಟೆಂಬರ್ 30ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಈ ಪರಿಷ್ಕರಣೆ ಬಳಿಕ ಸುಮಾರು 47 ಲಕ್ಷಕ್ಕೂ ಅಧಿಕ ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ಇದರಲ್ಲಿ ಬಹುತೇಕರು ಬಡ, ಮಧ್ಯಮ ವರ್ಗದವರು. ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ತರಾತುರಿಯಲ್ಲಿ ನಡೆಸಲಾಗುವ ಈ ಎಸ್‌ಐಆರ್ ಪ್ರಕ್ರಿಯೆಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಸಾಮಾನ್ಯವಾಗಿ ಆಧಾರ್, ರೇಷನ್ ಕಾರ್ಡ್ ಅಥವಾ ಸಾಮಾನ್ಯ ವೋಟರ್ ಐಡಿಗಳನ್ನು (EPIC) ನಮ್ಮ ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ. ಆದರೆ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಈ ಮೂರು ದಾಖಲೆಗಳನ್ನು ಪುರಾವೆಯಾಗಿ ಬಳಸಲು ಅವಕಾಶ ನೀಡದೆ ಇರುವುದು ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಆದರೆ ಈ ಮೂರು ದಾಖಲೆಗಳನ್ನು ಪುರಾವೆಯಾಗಿ ಬಳಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...