ಮಹಾರಾಷ್ಟ್ರ | ಗೌರಿ ಲಂಕೇಶ್ ಹತ್ಯೆ ಪ್ರಮುಖ ಆರೋಪಿ ಕಣದಲ್ಲಿ; ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ!

Date:

2017ರಲ್ಲಿ ನಡೆದ ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಜನವರಿ 15ರಂದು ನಡೆಯಲಿರುವ ಮಹಾರಾಷ್ಟ್ರದ ಜಲ್ನಾ ಪುರಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಬಿಜೆಪಿ ಮತ್ತು ಇತರ ಹಲವು ವಿಪಕ್ಷಗಳ ಎದುರು ಗೌರಿ ಲಂಕೇಶ್ ಕೊಲೆ ಆರೋಪಿ ಕಣದಲ್ಲಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

2024ರ ನವೆಂಬರ್‌ನಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುನ್ನ, ಪಂಗಾರ್ಕರ್ ಶಿವಸೇನೆಗೆ ಸೇರಿದ್ದು, ಆದರೆ ಕೊಲೆ ಆರೋಪಿಯನ್ನು ಪಕ್ಷಕ್ಕೆ ಸೇರಿಸಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅದಾದ ಬಳಿಕ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ನೇತೃತ್ವದ ಪಕ್ಷ ಪಂಗಾರ್ಕರ್ ಅನ್ನು ಪಕ್ಷಕ್ಕೆ ಸೇರಿಸಿರಲಿಲ್ಲ. ಆದರೆ ಈ ಸ್ಥಳೀಯ ಚುನಾವಣೆಯಲ್ಲಿ ಶಿಂದೆ ನೇತೃತ್ವದ ಶಿವಸೇನೆ ಮಾತ್ರ ಈ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಈ ಮೂಲಕ ಪಂಗಾರ್ಕರ್‌ಗೆ ಬೆಂಬಲ ನೀಡುತ್ತಿದೆಯೇ ಎಂಬ ಚರ್ಚೆಯೂ ಇದೆ.

shrikant pangarkar
ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್

ಇದನ್ನು ಓದಿದ್ದೀರಾ? ಗೌರಿ ಲಂಕೇಶ್ ಪ್ರಕರಣ: ನ್ಯಾಯದ ವಿಳಂಬದಲ್ಲಿ ಸರ್ಕಾರ – ನ್ಯಾಯಾಂಗ ನಿಷ್ಕ್ರಿಯತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ 2001ರಿಂದ 2006ರವರೆಗೆ ಅವಿಭಜಿತ ಶಿವಸೇನೆಯ ಜಲ್ನಾ ಪುರಸಭೆಯ ಸದಸ್ಯರಾಗಿದ್ದರು. 2011ರಲ್ಲಿ ಟಿಕೆಟ್ ನಿರಾಕರಿಸಿದ ನಂತರ, ಬಲಪಂಥೀಯ ಹಿಂದೂ ಜನಜಾಗೃತಿ ಸಮಿತಿಗೆ ಸೇರಿದ್ದರು. 2018ರ ಆಗಸ್ಟ್‌ನಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಕಚ್ಚಾ ಬಾಂಬ್‌ಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಸಂದರ್ಭದಲ್ಲಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ATS) ಪಂಗಾರ್ಕರ್ ಬಂಧನ ಮಾಡಿತ್ತು.

ಸ್ಫೋಟಕ ಕಾಯ್ದೆ, ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದಾರೆ.

ಗೌರಿ ಲಂಕೇಶ್ ಹತ್ಯೆಯ ಸಂಚಿನಲ್ಲಿ ಭಾಗಿಯಾದ, ಹಂತಕರಿಗೆ ಶಸ್ತ್ರಾಸ್ತ್ರ ಒದಗಿಸಿದ ಹಾಗೂ ತರಬೇತಿ ನೀಡಿದ ಆರೋಪವೂ ಪಂಗಾರ್ಕರ್‌ ಮೇಲಿದೆ. ಗೌರಿ ಹತ್ಯೆ ಆರೋಪಿ ಪಂಗಾರ್ಕರ್‌ಗೆ 2024ರ ಸೆಪ್ಟೆಂಬರ್‌ನಲ್ಲಿ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ಪ್ರಸ್ತುತ ಪ್ರಕರಣದ ವಿಚಾರಣೆ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಸುಮಾರು 193 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದ್ದು, ಇನ್ನೂ ಹಲವು ಸಾಕ್ಷಿಗಳ ವಿಚಾರಣೆ ಬಾಕಿ ಇದೆ. ಆರೋಪಿಗಳೆಲ್ಲರೂ ಹಿಂದೂ ಜನಜಾಗೃತಿ ಸಮಿತಿಯಂತಹ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದರು ಎಂಬುದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...