ಸೆ. 30ರೊಳಗೆ ಎಸ್‌ಐಆರ್‌ ಆರಂಭಕ್ಕೆ ಸಿದ್ಧರಾಗಿ: ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ

Date:

ಸೆಪ್ಟೆಂಬರ್ 30ರೊಳಗೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ(SIR) ಸಿದ್ದರಾಗಿ ಎಂದು ಚುನಾವಣಾ ಆಯೋಗವು ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿದೆ. ಅಕ್ಟೋಬರ್-ನವೆಂಬರ್ ಆರಂಭದಲ್ಲಿಯೇ ಮತದಾರರ ಪಟ್ಟಿ ಪರಿಷ್ಟಕರಣೆ ಕಾರ್ಯ ಆರಂಭವಾಗಬಹುದು. ದೆಹಲಿಯಲ್ಲಿ ಈ ತಿಂಗಳ ಆರಂಭದಲ್ಲಿ ನಡೆದ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ (ಸಿಇಒ) ಸಮ್ಮೇಳನದಲ್ಲಿ ಈ ಸೂಚನೆ ನೀಡಲಾಗಿದೆ, ಆದರೆ ಸೆಪ್ಟೆಂಬರ್ 30ರವರೆಗೆ ಗಡುವು ನಿಗದಿಪಡಿಸಲಾಗಿದೆ ಎಂದು ಹೇಳಲಾಗಿದೆ.

ಹಾಗೆಯೇ ಕೊನೆಯ ಎಸ್‌ಐಆರ್ ನಂತರ ಪ್ರಕಟವಾದ ತಮ್ಮ ರಾಜ್ಯಗಳ ಮತದಾರರ ಪಟ್ಟಿಗಳನ್ನು ಸಿದ್ಧವಾಗಿಡಲು ಸಿಇಒಗಳಿಗೆ ತಿಳಿಸಲಾಗಿದೆ. ಇನ್ನು ಹಲವು ರಾಜ್ಯದ ಸಿಇಒಗಳು ಈಗಾಗಲೇ ಪಟ್ಟಿಗಳನ್ನು ಸಿದ್ದಪಡಿಸಿದ್ದಾರೆ, ವೆಬ್‌ಸೈಟ್‌ಗಳಲ್ಲಿದೆ. ದೆಹಲಿ ಸಿಇಒ ವೆಬ್‌ಸೈಟ್‌ನಲ್ಲಿ 2008ರ ಮತದಾರರ ಪಟ್ಟಿ ಇದೆ ಎಂದು ವರದಿಯಾಗಿದೆ. ಇನ್ನು ಬಹುತೇಕ ರಾಜ್ಯಗಳಲ್ಲಿ 2002 ಮತ್ತು 2004ರಲ್ಲಿ ಕೊನೆಯ ಬಾರಿಗೆ ಎಸ್‌ಐಆರ್ ಪ್ರಕ್ರಿಯೆ ನಡೆದಿದೆ.

ಇದನ್ನು ಓದಿದ್ದೀರಾ? ಎಸ್‌ಐಆರ್‌ ವಿರೋಧಿಸಿ ಸೋನಿಯಾ ನೇತೃತ್ವದಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಸಂಸದರಿಂದ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರಾಖಂಡದಲ್ಲಿ ಕೊನೆಯ ಬಾರಿಗೆ 2006ರಲ್ಲಿ ಎಸ್‌ಐಆರ್ ನಡೆದಿದ್ದು, ಆ ವರ್ಷದ ಮತದಾರರ ಪಟ್ಟಿ ಈಗ ರಾಜ್ಯ ಚುನಾವಣಾ ಆಯೋಗ ವೆಬ್‌ಸೈಟ್‌ನಲ್ಲಿದೆ. ಈಗಾಗಲೇ ಬಿಹಾರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆದಿದ್ದು, ಲಕ್ಷಾಂತರ ಮತದಾರರ ಹೆಸರುಗಳನ್ನು ಅಳಿಸಿ ಹಾಕಲಾಗಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಬಿಹಾರ ಚುನಾವಣೆಗೆ ಕೆಲವೇ ತಿಂಗಳು ಇರುವಾಗ ತರಾತುರಿಯಲ್ಲಿ ನಡೆಸಲಾದ ಈ ಪ್ರಕ್ರಿಯೆಯ ಬಗ್ಗೆ ವಿಪಕ್ಷಗಳು ಪ್ರಶ್ನೆ ಎತ್ತಿವೆ. ಹಾಗೆಯೇ ಸಾಮಾನ್ಯವಾಗಿ ಬಡ, ಮಧ್ಯಮ ವರ್ಗದ ಜನರಲ್ಲಿ ಇಲ್ಲದ ದಾಖಲೆಗಳನ್ನೇ ಪುರಾವೆಯಾಗಿ ಪರಿಗಣಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಚುನಾವಣಾ ಆಯೋಗ ಎಸ್‌ಐಆರ್ ಪ್ರಕ್ರಿಯೆಯನ್ನು ಇತರೆ ರಾಜ್ಯಗಳ್ಲಲಿಯೂ ನಡೆಸಲು ಮುಂದಾಗಿದೆ.

2026ರಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...