ಬಿಜೆಪಿ ಜೊತೆ ಸೇರಿ ಒಳಸಂಚು ಮಾಡುವವರನ್ನು ತೆಗೆದುಹಾಕಿ: ಗುಜರಾತ್ ಕಾಂಗ್ರೆಸ್‌ ಸಮಿತಿಗೆ ರಾಹುಲ್ ಗಾಂಧಿ ಕರೆ

Date:

ಬಿಜೆಪಿಯೊಂದಿಗೆ ಸೇರಿಕೊಂಡು ಒಳಸಂಚು ನಡೆಸುವವರನ್ನು ಪಕ್ಷದಿಂದ ತೆಗೆದುಹಾಕಿ, ಅವರ ಬಗ್ಗೆ ಎಚ್ಚರಿಕೆ ಹೊಂದಿರಿ ಎಂದು ಗುಜರಾತ್‌ ಕಾಂಗ್ರೆಸ್‌ ಸಮಿತಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ಹಾಗೆಯೇ ಇಂತಹ ನಾಯಕರನ್ನು ದೂರ ಮಾಡಿದರೆ ಮಾತ್ರ ಕಾಂಗ್ರೆಸ್ ರಾಜ್ಯದಲ್ಲಿ ಬೆಳೆಯಲು ಸಾಧ್ಯ ಎಂದು ಹೇಳಿದರು.

ಅಹಮದಾಬಾದ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಗುಜರಾತ್‌ನ ಜನರಿಗೆ ನಿಜವಾದ ಪರ್ಯಾಯ ಬೇಕಿದೆಯೇ ಹೊರತು ಬಿಜೆಪಿಯ ಬಿ ಟೀಮ್ ಬೇಕಾಗಿಲ್ಲ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಆರ್ಥಿಕ ಸೋಲು, ನಿರುದ್ಯೋಗ, ಹಣದುಬ್ಬರವನ್ನು ಮಾತ್ರ ಮೋದಿ ಸರ್ಕಾರ ‘ಭಾರೀ ಪ್ರಮಾಣದಲ್ಲಿ’ ಸೃಷ್ಟಿಸಿದೆ: ರಾಹುಲ್ ಗಾಂಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗುಜರಾತ್‌ನಲ್ಲಿ ಜಿಲ್ಲಾ ಮಟ್ಟದಲ್ಲಿಯೇ ನಾಯಕತ್ವದಲ್ಲಿ ಒಡಕಿದೆ. ಗುಜರಾತ್‌ನಲ್ಲಿ ಎರಡು ರೀತಿಯ ನಾಯಕರಿದ್ದಾರೆ. ಈ ಪೈಕಿ ಒಂದು ವಿಭಾಗದ ನಾಯಕರು ಜನರಿಗಾಗಿ ನಿಲ್ಲುತ್ತಾರೆ. ಅವರ ಹೃದಯದಲ್ಲಿ ಕಾಂಗ್ರೆಸ್ ಸಿದ್ಧಾಂತವಿದೆ. ಇನ್ನೊಂದು ವಿಭಾಗದ ನಾಯಕರು ಜನರಿಂದ ದೂರ ಇರುತ್ತಾರೆ. ಜನರಿಗೆ ಗೌರವವೂ ನೀಡುವುದಿಲ್ಲ. ಈ ಪೈಕಿ ಅರ್ಧದಷ್ಟು ಜನರು ಬಿಜೆಪಿಯೊಂದಿಗೆ ನಂಟು ಹೊಂದಿದ್ದಾರೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ಬಿಜೆಪಿಯೊಂದಿಗೆ ನಂಟು ಹೊಂದಿರುವ ಜನರನ್ನು ನಮ್ಮಿಂದ ದೂರ ಮಾಡುವವರೆಗೂ ನಮ್ಮನ್ನು ಜನರು ನಂಬುವುದಿಲ್ಲ. ಗುಜರಾತ್‌ನ ಜನರಿಗೆ, ಉದ್ಯಮಿಗಳಿಗೆ, ಸಣ್ಣ ಮತ್ತು ಮಧ್ಯಮ ವರ್ಗದ ವ್ಯಾಪಾರಿಗಳಿಗೆ, ರೈತರಿಗೆ, ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ ವಿರೋಧ ಪಕ್ಷ ಬೇಕಾಗಿದೆ. ಜನರಿಗೆ ಪರ್ಯಾಯ ಬೇಕಿದೆ, ಬಿಜೆಪಿಯ ಬಿ ಟೀಮ್ ಬೇಕಾಗಿಲ್ಲ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಗುಜರಾತ್ | ಎರಡು ವರ್ಷದಲ್ಲಿ 286 ಸಿಂಹಗಳು, 456 ಚಿರತೆಗಳು ಸಾವು

“ನಾವು ಜನರಿಗೆ ಗೌರವ ಕೊಡುವ ಮತ್ತು ಬಿಜೆಪಿಯೊಂದಿಗೆ ನಂಟು ಹೊಂದಿರುವ ಕಾಂಗ್ರೆಸ್ ಕಾರ್ಯಕರ್ತರನ್ನು ಪ್ರತ್ಯೇಕ ಮಾಡಬೇಕು. ನಾವು ಕಠಿಣ ಕ್ರಮ ತೆಗೆದುಕೊಳ್ಳುವ ಅಗತ್ಯ ಬಂದರೆ ನಾವು ಕನಿಷ್ಠ 30-34 ಜನರನ್ನು ಪಕ್ಷದಿಂದ ತೆಗೆದುಹಾಕಬೇಕಾಗುತ್ತದೆ. ಕಾಂಗ್ರೆಸ್‌ನಲ್ಲಿದ್ದು ಬಿಜೆಪಿಗಾಗಿ ಕೆಲಸ ಮಾಡುವುದಾದರೆ ಅವರನ್ನು ಪಕ್ಷದಿಂದ ತೆಗೆಯಿರಿ, ಹೊರಗಿದ್ದು ಬಿಜೆಪಿಗಾಗಿ ಕೆಲಸ ಮಾಡಲಿ. ಬಿಜೆಪಿ ಅವರನ್ನು ಒಮ್ಮೆ ಪಕ್ಷಕ್ಕೆ ಸೇರಿಸಿ ಬಳಿಕ ಹೇಗೆ ಕಿತ್ತೆಸಿಯುತ್ತದೆ ಎಂಬುದನ್ನು ನಾವು ನೋಡೋಣ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...