ಜಾರ್ಖಂಡ್ನಲ್ಲಿ ಕಾಂಗ್ರೆಸ್ ಸಂಸದರ ಮನೆಗೆ ಐಟಿ ದಾಳಿಯ ವೇಳೆಯಲ್ಲಿ ಸುಮಾರು 200 ಕೋಟಿ ನಗದು ಪತ್ತೆ ವಿಚಾರ ಈಗ ದೇಶಾದ್ಯಂತ ಸುದ್ದಿಯಾಗುತ್ತಿದೆ. ಈ ಬೆಳವಣಿಗೆಯ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, “ಐಟಿ ಇಲಾಖೆ ಪತ್ತೆ ಹಚ್ಚುವ ಮುನ್ನ ಲೂಟಿ ಹೊಡೆದ ಸಂಪತ್ತನ್ನು ನೀವೇ ಕೊಟ್ಟುಬಿಡಿ” ಎಂದು ಕಾಂಗ್ರೆಸ್ಗೆ ಸಲಹೆ ನೀಡಿದ್ದಾರೆ.
ತಮ್ಮ ಸುದೀರ್ಘ ಟ್ವೀಟ್ನಲ್ಲಿ, “ಈ ದೇಶದ ಸಂಪತ್ತು ಸಮಾನವಾಗಿ ಹಂಚಿಕೆಯಾಗುತ್ತಿಲ್ಲ, ಅದರಲ್ಲಿ ಮುಸ್ಲಿಮರಿಗೆ ಪಾಲು ಸಿಗುತ್ತಿಲ್ಲ ಎಂದು ಮೊನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸ್ಲಿಂ ಓಲೈಕೆ ಭಾಷಣ ಮಾಡಿದ್ದರು. ಈ ದೇಶದ ಜನರ ಸಂಪತ್ತು ಯಾರ ಬಳಿ ಇದೆ? ಲೂಟಿ ಹೊಡೆದವರಾರು? ಎಂಬ ನಿಮ್ಮ ಆವೇಶಭರಿತ ಪ್ರಶ್ನೆಗಳಿಗೆ ಐಟಿ ಅಧಿಕಾರಿಗಳು ಇದೀಗ ಉತ್ತರ ದೊರಕಿಸಿಕೊಟ್ಟಿದ್ದಾರೆ” ಎಂದು ವಿಜಯೇಂದ್ರ ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ.
ಈ ದೇಶದ ಸಂಪತ್ತು ಸಮಾನವಾಗಿ ಹಂಚಿಕೆಯಾಗುತ್ತಿಲ್ಲ, ಅದರಲ್ಲಿ ಮುಸ್ಲಿಂಮರಿಗೆ ಪಾಲು ಸಿಗುತ್ತಿಲ್ಲ ಎಂದು ಮೊನ್ನೆಯಷ್ಟೇ ಮುಸ್ಲಿಂ ಓಲೈಕೆ ಭಾಷಣ ಮಾಡಿದ್ದ ಮುಖ್ಯಮಂತ್ರಿ @siddaramaiah ನವರೇ, ಈ ದೇಶದ ಜನರ ಸಂಪತ್ತು ಯಾರ ಬಳಿ ಇದೆ ? ಲೂಟಿಹೊಡೆದವರಾರು? ಎಂಬ ನಿಮ್ಮ ಆವೇಶಭರಿತ ಪ್ರಶ್ನೆಗಳಿಗೆ
ಐಟಿ ಅಧಿಕಾರಿಗಳು ಇದೀಗ ಉತ್ತರ… pic.twitter.com/RkPHayYOXf— Vijayendra Yediyurappa (@BYVijayendra) December 9, 2023
“ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಏಜೆಂಟರ ಮೇಲೆ ಐಟಿ ದಾಳಿ ನಡೆದಷ್ಟೂ, ಜನರಿಂದ ಲೂಟಿ ಹೊಡೆದ ಅಕ್ರಮ ಕಪ್ಪು ಹಣ ಪತ್ತೆಯಾಗುತ್ತಲೇ ಇದೆ. ಸದ್ಯ ನಡೆದಿರುವ ಐಟಿ ದಾಳಿಯಲ್ಲಿ ಜಾರ್ಖಂಡ್ ಕಾಂಗ್ರೆಸ್ ಸಂಸದ ಧೀರಜ್ ಸಾಹು ಬಳಿ ಸರಿ ಸುಮಾರು 156 ಚೀಲಗಳಲ್ಲಿ ಬರೋಬ್ಬರಿ 225 ಕೋಟಿ ನಗದು ಪತ್ತೆ ಪ್ರಕರಣ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದ ಕರಾಳ ಮುಖ ದರ್ಶನ ಮಾಡಿಸಿದೆ” ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಇದನ್ನು ಓದಿದ್ದೀರಾ? ಮೂರು ರಾಜ್ಯಗಳಲ್ಲಿ ಮುಂದುವರೆದ ಐಟಿ ದಾಳಿ: ಪತ್ತೆಯಾಯ್ತು ಬರೋಬ್ಬರಿ ₹290 ಕೋಟಿ
“ಸುದೀರ್ಘ ಕಾಲ ಕಾಂಗ್ರೆಸ್ ಲೂಟಿ ಹೊಡೆದಿರುವ ಈ ದೇಶದ ಸಂಪತ್ತು ಎಲ್ಲೆಲ್ಲಿವೇ ಎಂಬುದನ್ನು ಐಟಿ ಇಲಾಖೆ ಪತ್ತೆ ಹಚ್ಚುವ ಮುನ್ನ ನೀವೇ ಹೊರತಂದು ಸಕ್ರಮ ಮಾರ್ಗದಲ್ಲಿ ಜನರಿಗೆ ಹಂಚಿಬಿಡಿ. ಈ ದೇಶದ ಸಂಪತ್ತು ಶತಮಾನಗಳಿಂದಲೂ ಲೂಟಿಯಾಗುತ್ತಲೇ ಇದೆ ಎಂಬುದಕ್ಕೆ ಇತಿಹಾಸವೇ ಇದೆ. ಮೊದಲಿಗೆ ಮೊಘಲರು,
ನಂತರ ಬ್ರಿಟೀಷರು, ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ಸಿಗರು ಎಂಬುದು ಅಸಲಿ ಸತ್ಯ ಎಂಬುದಕ್ಕೆ ಇಂದಿಗೂ ಪುರಾವೆಗಳು ಸಿಗುತ್ತಲೇ ಇವೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಾಂಗ್ರೆಸ್ ಕಾಲೆಳೆದಿದ್ದಾರೆ.

ಇದೇ ವಿಚಾರವಾಗಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸಹ ತಮ್ಮ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, “ದೇಶದ ಜನರ ಸಂಪತ್ತೆಲ್ಲಾ ಕಾಂಗ್ರೆಸ್ ನಾಯಕರ ಬಳಿಯೇ ಇದೆ. ಐಟಿ ಅಧಿಕಾರಿಗಳು ಈಗ ಅದನ್ನೆಲ್ಲ ಹೊರತೆಗೆಯುವ ಕಾರ್ಯ ಮಾಡುತ್ತಿದ್ದಾರೆ. ಜಾರ್ಖಂಡ್ ಕಾಂಗ್ರೆಸ್ ಸಂಸದನ ಬಳಿ ಪತ್ತೆಯಾಗಿರುವ ಕೋಟ್ಯಂತರ ಹಣ, ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರ ಮಾಡಿ ಬಚ್ಚಿಟ್ಟಿರುವ ಸಣ್ಣ ಸ್ಯಾಂಪಲ್” ಎಂದು ತಿಳಿಸಿದ್ದಾರೆ.





