ಬಿಜೆಪಿ ಸರ್ಕಾರದ ರೀತಿ ರೈತರಿಗೆ ಪರಿಹಾರ ಕೊಡಿ, ಇಲ್ಲ ಕುರ್ಚಿ ಬಿಡಿ: ಆರ್‌.ಅಶೋಕ ಒತ್ತಾಯ

Date:

ಬರ ಮತ್ತು ನೆರೆ ಸಂದರ್ಭದಲ್ಲಿ ಹಿಂದಿನ ಬಿಜೆಪಿ ಸರ್ಕಾರ ರೈತರಿಗೆ ಮೂರು, ನಾಲ್ಕು ಪಟ್ಟು ಅಧಿಕ ಪರಿಹಾರ ನೀಡಿತ್ತು. ಅದೇ ಮಾನದಂಡದಲ್ಲಿ ಸಿದ್ದರಾಮಯ್ಯ ಸರ್ಕಾರ ಪರಿಹಾರ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದ್ದಾರೆ.

ಕೋಲಾರದಲ್ಲಿ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೊದಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

“ಬರಗಾಲ ಬಂದು ಏಳು ತಿಂಗಳಾದರೂ ರೈತರಿಗೆ ಪರಿಹಾರ ನೀಡಿಲ್ಲ. ಬೆಳಗಾವಿ ಅಧಿವೇಶನ ಕಳೆದು ತಿಂಗಳಾದರೂ ಪರಿಹಾರ ಕೊಟ್ಟಿಲ್ಲ. ರೈತರು ಚಾತಕ ಪಕ್ಷಿಗಳಂತೆ ಪರಿಹಾರಕ್ಕೆ ಕಾಯುತ್ತಿದ್ದಾರೆ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಮೇವಿನ ಸಮಸ್ಯೆ ಇದೆ. ಆದರೂ ಒಂದೇ ಒಂದು ಗೋಶಾಲೆ ತೆರೆದಿಲ್ಲ. ಅಲ್ಪಸಂಖ್ಯಾತ ಇಲಾಖೆ ಸಚಿವರು ಮನವಿ ಕೊಟ್ಟ ಮೂರು ದಿನಗಳಲ್ಲಿ ಮುಸ್ಲಿಮರಿಗೆ 1 ಸಾವಿರ ಕೋಟಿ ರೂ. ಅನುದಾನವನ್ನು ಕಾಲನಿ ಅಭಿವೃದ್ಧಿಗೆ ಬಿಡುಗಡೆ ಮಾಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರವಾಹ ಬಂದಾಗ ಎನ್ ಡಿ ಆರ್ ಎಫ್ ಮಾನದಂಡಕ್ಕಿಂತ ದುಪ್ಪಟ್ಟು ಪರಿಹಾರ ನೀಡಲಾಗಿತ್ತು. ಮೂರು ಸಾವಿರ ಕೋಟಿ ರೂ. ಗೂ ಅಧಿಕ ಪರಿಹಾರವನ್ನು ಒಂದೇ ತಿಂಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ ಮಾಡಿದ್ದೆವು. ಕೇಂದ್ರ ಸರ್ಕಾರ ಆಗಲೂ ತಡವಾಗಿ ನಮ್ಮ ಪಾಲಿನ ಹಣ ನೀಡಿತ್ತು. ಕೇಂದ್ರ ಸರ್ಕಾರ ಯಾವಾಗಲೂ ದೇಶವ್ಯಾಪಿ ಪರಿಹಾರ ನೀಡುತ್ತದೆ. ಅದು ನಿಗದಿತ ಪ್ರಕ್ರಿಯೆ ಪ್ರಕಾರವೇ ನಡೆಯುತ್ತದೆ. ಹೀಗಾಗಿ ಯಾವುದೇ ಪಕ್ಷವಿದ್ದರೂ ಸಹಜವಾಗಿಯೇ ತಡವಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

“ಲೋಕಸಭಾ ಚುನಾವಣೆ ಬಳಿಕ ಎಲ್ಲ ಗ್ಯಾರಂಟಿಗಳು ಗೋವಿಂದ ಆಗಲಿದೆ. ಮೂಗಿಗೆ ತುಪ್ಪ ಸವರಲು ತಿರುಗಿಬಿದ್ದ ಕಾಂಗ್ರೆಸ್‌ ಶಾಸಕರಿಗೆ ಅನುಕೂಲ ಮಾಡಲಾಗುತ್ತಿದೆ. ಕೆಲವು ಶಾಸಕರು ಬಿಟ್ಟು ಹೋಗುತ್ತಾರೆ ಎಂದು ತಿಳಿದು ಬಂದಿರುವುದರಿಂದ ಹೈಕಮಾಂಡ್‌ ಈ ರೀತಿ ನಾಟವಾಡುತ್ತಿದೆ” ಎಂದು ಕಿಡಿಕಾರಿದರು.

ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ಹಾರಿಸಲು ಪಂಚಾಯಿತಿಯಿಂದ ಅನುಮತಿ ಪಡೆಯಲಾಗಿದೆ. ರಾಮ ಸೇವಾ ಸಮಿತಿಯವರು ಹಣ ಸಂಗ್ರಹಿಸಿ ಸ್ತಂಭ ಅಳವಡಿಸಿದ್ದಾರೆ. ಇದನ್ನು ಸರ್ಕಾರ ಮಾಡಿಕೊಟ್ಟಿಲ್ಲ. ಅದನ್ನು ಆಂಜನೇಯನ ದೇವಸ್ಥಾನದ ಮುಂಭಾಗ ಅಳವಡಿಸಲಾಗಿದೆ. ಹಿಂದೆಯೂ ಹನುಮನ ಧ್ವಜ ಹಾರಿಸಲಾಗಿದೆ” ಎಂದು ಹರಿಹಾಯ್ದರು.

ಬೊಮ್ಮಾಯಿ ಕಿಡಿ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, “ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜ ವರದಿ ಸ್ವೀಕಾರ ಮಾಡುವುದು ಕೇವಲ ಲೋಕಸಭೆ ಚುನಾವಣೆಯ ಸ್ಟಂಟ್ ಆಗಿದ್ದು, ಹಿಂದುಳಿದವರಲ್ಲಿ ಬಲಾಢ್ಯರು ಮಾತ್ರ ಮೀಸಲಾತಿ ಲಾಭ ಪಡೆಯುತ್ತಿದ್ದಾರೆ. ಅತಿ ಹಿಂದುಳಿದವರಿಗೆ ನ್ಯಾಯಕೊಡಿಸಬೇಕಿದೆ” ಎಂದರು.

“ಹಿಂದುಳಿದ ವರ್ಗದಲ್ಲಿ ಎ.ಬಿ.ಸಿ ಎಂದು ವರ್ಗೀಕರಣ ಮಾಡಲಾಗಿದೆ. ಪ್ರವರ್ಗ 1 ರಲ್ಲಿ ಇರುವವರು ಅತ್ಯಂತ ಹಿಂದುಳಿದಿದ್ದಾರೆ. ಅವರಿಗೆ ನಿರಂತರ ಅನ್ಯಾಯವಾಗಿದೆ. ಅವರಿಗೆ ಏನೂ ಸಿಕ್ಕಿಲ್ಲ. ಬಲಿಷ್ಠ ಸಮುದಾಯದವರೇ ಹೆಚ್ಚಿನ ಲಾಭ ಪಡೆದುಕೊಳ್ಳುತ್ತಿದ್ದಾರೆ. ಅವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...