ಗುಡ್‌ ಫ್ರೈಡೆ | ಏಪ್ರಿಲ್ 18ಕ್ಕೆ ನಿಗದಿಯಾಗಿದ್ದ ‘ಸಿಇಟಿ’ ವೇಳಾಪಟ್ಟಿ ಬದಲಾವಣೆ

Date:

ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯಲು ನಡೆಸಲಾಗುವ ‘ಸಾಮಾನ್ಯ ಪ್ರವೇಶ ಪರೀಕ್ಷೆ’ಯ (ಸಿಇಟಿ) ಕನ್ನಡ ಭಾಷಾ ಪರೀಕ್ಷೆಯನ್ನು ಏಪ್ರಿಲ್ 18ಕ್ಕೆ ನಿಗದಿ ಮಾಡಲಾಗಿತ್ತು. ಅಂದು ಗುಡ್ ಫ್ರೈಡೆ ಆಗಿರುವ ಹಿನ್ನೆಲೆಯಲ್ಲಿ ಪರೀಕ್ಷೆಯ ದಿನಾಂಕವನ್ನು ಬದಲಿಸಲಾಗಿದೆ. ಅಂದು ನಡೆಯಬೇಕಿದ್ದ ಪರೀಕ್ಷೆಯನ್ನು ಏಪ್ರಿಲ್ 15ರಂದು ನಡೆಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್‌ ತಿಳಿಸಿದ್ದಾರೆ.

ವಿಧಾನ ಪರಿಷತ್‌ ಕಲಾಪದಲ್ಲಿ ಎಂಎಲ್‌ಸಿ ಐವನ್ ಡಿಸೋಜ ಅವರು ಶೂನ್ಯ ವೇಳೆಯಲ್ಲಿ ಎತ್ತಿರುವ ಪ್ರಶ್ನೆಗೆ ಸುಧಾಕರ್ ಉತ್ತರಿಸಿದ್ದಾರೆ. “ರಾಜ್ಯದಲ್ಲಿ ಏಪ್ರಿಲ್ 16, 17 ಮತ್ತು 18 ರಂದು ಸಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಏಪ್ರಿಲ್ 18ರಂದು ಗುಡ್‌ ಫ್ರೈಡೆ ಇರುವುದರಿಂದ, ಅಂದು ಬರೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಏಪ್ರಿಲ್ 15ರಂದೇ ನಡೆಸಲಾಗುತ್ತದೆ” ಎಂದು ಹೇಳಿದ್ದಾರೆ.

ಆದಾಗ್ಯೂ, ಸರ್ಕಾರದ ಗಮನ ಸೆಳೆದ ಡಿಸೋಜ, “ಗುಡ್‌ ಫ್ರೈಡೆ ಇರುವ ವಾರವು ಕ್ರೈಸ್ತ ಸಮುದಾಯಕ್ಕೆ ಅತ್ಯಂತ ಪ್ರಮುಖ ವಾರವಾಗಿದೆ. ಆ ವಾರವನ್ನು ‘ಹೋಲಿ ವೀಕ್’ ಎಂದು ಕರೆಯಲಾಗುತ್ತದೆ. ಸೋಮವಾರದಿಂದ ಭಾನುವಾರದವರೆಗೆ ಕ್ರೈಸ್ತರು ಉಪವಾಸ ಮಾಡುತ್ತಾರೆ ಮತ್ತು ಚರ್ಚ್‌ಗಳಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ. ಈ ಹಿಂದೆ ಎಲ್ಲ ಸಿಇಟಿ ಪರೀಕ್ಷೆಗಳನ್ನು ಶನಿವಾರ ಮತ್ತು ಭಾನುವಾರ ಮಾತ್ರವೇ ನಡೆಸಲಾಗುತ್ತಿತ್ತು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಭಾಷಾ ಪರೀಕ್ಷೆ ಬರೆಯಲು ರಾಜ್ಯಾದ್ಯಂತ 2,537 ಮಂದಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಎಲ್ಲ ಅಭ್ಯರ್ಥಿಗಳು ಏಪ್ರಿಲ್ 15ರಂದೇ ಪರೀಕ್ಷೆ ಬರೆಯಬೇಕಿದೆ. ಏಪ್ರಿಲ್ 16ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ, ಏಪ್ರಿಲ್ 17ರಂದು ಗಣಿತಶಾಸ್ತ್ರ ಮತ್ತು ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...