ಗೋಪಾಲ ಜೋಶಿ ವಂಚನೆ ಪ್ರಕರಣ | ದಾಖಲೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

Date:

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಆಮಿಷವೊಡ್ಡಿ 2 ಕೋಟಿ ರೂ. ಸುಲಿಗೆ ಮಾಡಿದ್ದಾರೆಂಬ ಆರೋಪದಡಿ ಬಂಧನದಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಅಣ್ಣ ಗೋಪಾಲ ಜೋಶಿ ಮತ್ತಿತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ರಾಜ್ಯ ಪ್ರಾಸಿಕ್ಯೂಷನ್‌ಗೆ ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ ವಿಜಯಪುರ ಜಿಲ್ಲೆಯ ನಾಗಠಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೇವಾನಂದ್ ಫೂಲ್ ಸಿಂಗ್ ಚವ್ಹಾಣ್ ಅವರಿಂದ ₹2 ಕೋಟಿ ಸುಲಿಗೆ ಮಾಡಿದ್ದಾರೆ ಎಂಬ ಆರೋಪವನ್ನು ಗೋಪಾಲ ಜೋಶಿ ಎದುರಿಸುತ್ತಿದ್ದಾರೆ.

ಪ್ರಕರಣ ರದ್ದು ಕೋರಿ ಗೋಪಾಲ ಜೋಶಿ ಪರ ಹೈಕೋರ್ಟ್‌ನ ಹಿರಿಯ ವಕೀಲ ಡಿ.ಆರ್‌.ರವಿಶಂಕರ್‌, ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ಗುರುವಾರ ಮೆಮೊ ಸಲ್ಲಿಸಿದ್ದರು. ಮೆಮೊ ಪರಿಶೀಲಿಸಿದ ನ್ಯಾಯಮೂರ್ತಿಗಳು ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಈ ಪ್ರಕರಣ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದ್ದಾಗಿದೆ. ಕಳೆದ ಮಾರ್ಚ್, ಏಪ್ರಿಲ್‌, ಮೇ ಹಾಗೂ ಆಗಸ್ಟ್‌ನಲ್ಲಿ ಘಟನಾವಳಿ ನಡೆದಿವೆ ಎಂದು ಆಪಾದಿಸಲಾಗಿದೆ. ಆದರೆ, ಇದೇ 17ರಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಗೋಪಾಲ ಜೋಶಿ ಸೇರಿ ನಾಲ್ವರನ್ನು ಬಂಧಿಸಲಾಗಿದ್ದು, ಇಬ್ಬರನ್ನು ಪೊಲೀಸ್‌ ಕಸ್ಟಡಿಗೆ, ಇನ್ನಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ” ಎಂದು ರವಿಶಂಕರ್‌ ನ್ಯಾಯಾಧೀಶರಿಗೆ ಮಾಹಿತಿ ನೀಡಿದರು.

ಹೆಚ್ಚುವರಿ ರಾಜ್ಯ ಪ್ರಾಸಿಕ್ಯೂಟರ್‌ ಬಿ.ಎನ್‌.ಜಗದೀಶ್‌, ”ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಹೇಳಲಾದ ಈ ವಿಚಾರವು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕಚೇರಿಯಲ್ಲಿ ನಡೆದಿದೆ. ಈ ಕುರಿತು ತನಿಖೆ ನಡೆಯುತ್ತಿದೆ” ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, ”ಇದೇ 28ರಂದು ಪ್ರಕರಣದ ವಿಚಾರಣೆ ನಡೆಸಲಾಗುವುದು. ಅಂದು ಪ್ರಕರಣದ ದಾಖಲೆಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಿ” ಎಂದು ಪ್ರಾಸಿಕ್ಯೂಷನ್‌ಗೆ ತಾಕೀತು ಮಾಡಿದರು.

ಗೋಪಾಲ ಜೋಶಿ ಮತ್ತು ಅವರ ಪುತ್ರ ಅಜಯ್‌ ಜೋಶಿ ಅವರನ್ನು ನ್ಯಾಯಾಲಯ 10 ದಿನಗಳ ಪೊಲೀಸ್‌ ಕಸ್ಟಡಿಗೆ ನೀಡಿದೆ. ಅಥಣಿಯ ಎಂಜಿನಿಯರ್‌ ಸೋಮಶೇಖರ್‌ ನಾಯಕ್‌ ಹಾಗೂ ಬಸವೇಶ್ವರ ನಗರದ ವಿಜಯಕುಮಾರಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುನೀತಾ ಚವ್ಹಾಣ್‌ ನೀಡಿರುವ ದೂರಿನ ಅನ್ವಯ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...