ಆಪರೇಷನ್ ಸಿಂಧೂರ, ಪಹಲ್ಗಾಮ್ ದಾಳಿ ಬಗ್ಗೆ ಲೋಕಸಭೆಯಲ್ಲಿ 16 ಗಂಟೆಗಳ ಚರ್ಚೆಗೆ ಕೊನೆಗೂ ಸರ್ಕಾರ ಅಸ್ತು

Date:

ಆಪರೇಷನ್ ಸಿಂಧೂರ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿ ಕುರಿತು ಲೋಕಸಭೆಯಲ್ಲಿ 16 ಗಂಟೆಗಳ ಚರ್ಚೆ ನಡೆಸಲು ಕೊನೆಗೂ ಸರ್ಕಾರ ಅಸ್ತು ಎಂದಿದೆ. ಮುಂದಿನ ವಾರ ಈ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.

ಆದರೆ ಈ ವಿಚಾರದಲ್ಲಿ ಚರ್ಚೆ ಈ ವಾರದಲ್ಲೇ ನಡೆಯಬೇಕು, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿವೆ. ಆದರೆ ಪ್ರಧಾನಿ ಮೋದಿ ಈ ವಾರ ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಹಾಗಾಗಿ ಮುಂದಿನ ವಾರ ಮಾತ್ರ ಚರ್ಚೆ ಸಾಧ್ಯ ಎಂದು ಸರ್ಕಾರ ತಿಳಿಸಿರುವಾಗಿ ವರದಿಯಾಗಿದೆ.

ಇದನ್ನು ಓದಿದ್ದೀರಾ? ಮುಂಗಾರು ಅಧಿವೇಶನದ ವೇಳೆಯೇ ಮೋದಿ ವಿದೇಶ ಪ್ರವಾಸ: ವಿಪಕ್ಷಗಳ ಎದುರಿಸಲಾಗದೆ ಪಲಾಯನವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಅದಕ್ಕೆ ಪ್ರತೀಕಾರವಾಗಿ ನಡೆದ ಆಪರೇಷನ್ ಸಿಂಧೂರ ಬಗ್ಗೆ ಚರ್ಚೆ ನಡೆಸಲು ವಿಶೇಷ ಅಧಿವೇಶನ ಕರೆಯಬೇಕು ಎಂದು ಈ ಹಿಂದೆ ಹಲವು ಬಾರಿ ವಿಪಕ್ಷಗಳು ಆಗ್ರಹಿಸಿವೆ. ಆದರೆ ಕೇಂದ್ರ ಸರ್ಕಾರ ಅದಕ್ಕೆ ಒಪ್ಪಿಲ್ಲ.

ಮುಂಗಾರು ಅಧಿವೇಶನದ ಬಗ್ಗೆ ಈ ವಾರ ಸರ್ಕಾರದ ಕಾರ್ಯಸೂಚಿಯಲ್ಲಿ ಈ ವಿಷಯದ ಕುರಿತು ಚರ್ಚೆ ಪ್ರಸ್ತಾಪವಿಲ್ಲ ಎಂದು ವಿರೋಧ ಪಕ್ಷದ ಸದಸ್ಯರು ಪ್ರತಿಭಟಿಸಿದ್ದರು. ಹಾಗೆಯೇ ಚರ್ಚೆ ವೇಳೆ ಗೃಹ ಸಚಿವರು ಮತ್ತು ರಕ್ಷಣಾ ಸಚಿವರು ಸಹ ಹಾಜರಿರಬೇಕು ಎಂದು ಆಗ್ರಹಿಸಿದ್ದರು. ಇದೀಗ ಕೊನೆಗೂ ಕೇಂದ್ರ ಚರ್ಚೆಗೆ ಅಸ್ತು ಎಂದಿದೆ.

ಸಂಸತ್ತಿನ ಮುಂಗಾರು ಅಧಿವೇಶನವು ಸೋಮವಾರ ಆರಂಭವಾಗಿದ್ದು, ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಮಣಿಪುರದ ಪರಿಸ್ಥಿತಿಯ ಕುರಿತು ಚರ್ಚೆಗೆ ಕೆಲವು ವಿರೋಧ ಪಕ್ಷದ ಸಂಸದರು ಆಗ್ರಹಿಸಿದ್ದಾರೆ.

ಜಮ್ಮು ಕಾಶ್ಮೀರದ ಪಹಲ್ಗಾಮ್‌ಗೆ ಪಾಕಿಸ್ತಾನ ಮೂಲದ ಭಯೋತ್ಪಾದಕರು ನುಗ್ಗಿ 26 ಪ್ರವಾಸಿಗರನ್ನು ಕೊಂದಿದ್ದರು. ಇದಕ್ಕೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ವಾಯು ದಾಳಿ ನಡೆಸಿದ್ದು ಸುಮಾರು 100 ಉಗ್ರರು ಸಾವನ್ನಪ್ಪಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...