ಕಾಂಗ್ರೆಸ್‌ ಒಳಜಗಳದಿಂದ ದೀಪಾವಳಿ ಒಳಗೆ ಸರ್ಕಾರ ಪತನ: ಸಿ ಟಿ ರವಿ

Date:

ದೀಪಾವಳಿ ಹಬ್ಬದ ಒಳಗೆ ಕಾಂಗ್ರೆಸ್‌ ಸರ್ಕಾರ ಬೀಳಲಿದೆ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳ ಪಟ್ಟಿ ದಿನೇ ದಿನೆ ಹೆಚ್ಚುತ್ತಿದೆ. ಒಳಜಗಳದಿಂದನೇ ಸರ್ಕಾರ ಪತನವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಹೇಳಿದರು.

ಹುಬ್ಬಳ್ಳಿ ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿ, “ಏನೇ ಮುಚ್ವಿಟ್ಟರೂ ಇದು ಭ್ರಷ್ಟಾಚಾರದ ಸರ್ಕಾರ. ಸಿದ್ದರಾಮಯ್ಯರ ವಿರುದ್ಧ ಇರುವ ಮುಡಾ ಹಗರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಅಲ್ಲಿ ಸತ್ಯ ಹೊರಗೆ ಬರಲಿದೆ. ಸರ್ಕಾರ ಏನೇ ಮಾಡಿದರೂ ಕಳ್ಳನ ಹೆಂಡತಿ ಡ್ಯಾಶ್ ಡ್ಯಾಶ್..” ಎಂದು ವ್ಯಂಗ್ಯವಾಡಿದರು.

“ಕಾಂಗ್ರೆಸ್ ಶಾಸಕರು, ಸಚಿವರು ಹಾಗೂ ಮುಖಂಡರು ಸಿದ್ದರಾಮಯ್ಯ ಅವರ ರಾಜೀನಾಮೆ ಎದುರು ನೋಡುತ್ತಿದ್ದಾರೆ. ಹೀಗಾಗಿಯೇ ಕೆಲವು ಸಚಿವರು ತಾವು ಸಹ ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿದ್ದಾರೆ. ನ್ಯಾಯಾಲಯದಲ್ಲಿ ತೀರ್ಪು ಹೊರಬರುವ ಮುನ್ನವೇ ಸಿಎಂ ರಾಜೀನಾಮೆ ನೀಡುವುದು ಒಳಿತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ‌ ಪ್ರತಿಷ್ಠಾಪಿಸಲು ಕರಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ನಮ್ಮ ಹೋರಾಟದ ಫಲವಾಗಿ ಮೂರು ವರ್ಷದಿಂದ ಇದೇ ಮೈದಾನದಲ್ಲಿ ಗಣೇಶೋತ್ಸವ ಯಶಸ್ವಿಯಾಗಿ ಆಚರಿಸುತ್ತ ಬಂದಿದ್ದೇವೆ. ರಾಷ್ಟ್ರಧ್ವಜದ ಜೊತೆಗೆ ಭಗವಾಧ್ವಜವನ್ನು ಸಹ ಇಲ್ಲಿ ಹಾರಿಸುತ್ತಿದ್ದೇವೆ. ಹುಬ್ಬಳ್ಳಿಯ ಮಣ್ಣಿನಲ್ಲಿ ಹೋರಾಟದ ಕಿಚ್ಚು ಇನ್ನೂ ಜೀವಂತವಾಗಿದೆ” ಎಂದು ಹೇಳಿದರು.

“ಭಾರತ ಬಿಟ್ಟು ಹಿಂದುತ್ವ ಇಲ್ಲ, ಹಿಂದುತ್ವ ಬಿಟ್ಟು ಭಾರತ ಇಲ್ಲ. ಆದರೆ, ಕೆಲವರು ಹಿ‌ದುತ್ವವನ್ನು ದುರ್ಬಲಗೊಳಿಸುವ ಷಡ್ಯಂತ್ರ ನಡೆಸುತ್ತಿದ್ದಾರೆ. ನಮ್ಮದು ಉದಾತ್ ಸಂಸ್ಕೃತಿಯಾಗಿದ್ದು, ಹಿಂದುಗಳೆಲ್ಲ ಸಂಘಟಿತರಾಗಬೇಕಿದೆ”‘ ಎಂದರು.

ಕೋವಿಡ್‌ ಭ್ರಷ್ಟಾಚಾರ ಆರೋಪ ವಿಚಾರವಾಗಿ ಮಾತನಾಡಿ, “ತಮ್ಮ ತಪ್ಪನ್ನು ಮರೆಮಾಚಿ ಜನರ ದಿಕ್ಕು ತಪ್ಪಿಸಲು, ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ವಾಲ್ಮೀಕಿ ಹಗರಣ, ಮುಡಾ ಹಗರಣ, ಅರ್ಕಾವತಿ ಡಿ ನೋಟಿಫಿಕೇಷನ್ ಹೀಗೆ ಸಾಲು ಸಾಲು ಹಗರಣಗಳು ಸಿದ್ದರಾಮಯ್ಯರ ಅಧಿಕಾರದ ಅವಧಿಯಲ್ಲಿ ನಡೆದಿದೆ. ನೈತಿಕತೆಯಿಲ್ಲದ ಸರ್ಕಾರ ಇದು” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...