ಸುಪ್ರೀಂ ಕೋರ್ಟ್ ತೀರ್ಪಿನಂತೆ ಒಳ ಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

Date:

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ. ಬುಧವಾರ ನ್ಯಾಯಮೂರ್ತಿ ನಾಗಮೋಹನದಾಸ್ ಅವರೊಂದಿಗೆ ಚರ್ಚಿಸಲಾಗಿದೆ. ಅವರು ಒದಗಿಸಿದ ಎಲ್ಲ ಮಾಹಿತಿಗಳನ್ನು ಕಲೆಹಾಕಿ, ಶೀಘ್ರವೇ ದಲಿತ ಶಾಸಕರು, ಸಚಿವರು ಮತ್ತು ದಲಿತ ಮುಖಂಡರೊಂದಿಗೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ‘ಮಾದಿಗ ಸಮುದಾಯಗಳ ಸ್ವಾಭಿಮಾನ ಒಕ್ಕೂಟ’ ನಡೆಸಿದ ಬೃಹತ್ ಪ್ರತಿಭಟನಾ ಸಮಾವೇಶಕ್ಕೆ ಭೇಟಿ ನೀಡಿದ ಅಬಕಾರಿ ಸಚಿವ ಆರ್‌.ಬಿ ತಿಮ್ಮಾಪುರ್ ಪ್ರತಿಭಟನಾಕಾರರಿಂದ ಹಕ್ಕೊತ್ತಾಯ ಪತ್ರ ಸ್ವೀಕರಿಸಿದರು. ಬಳಿಕ, ಮುಖ್ಯಮಂತ್ರಿಗಳ ಭೇಟಿಗಾಗಿ ಒಕ್ಕೂಟದ ಮುಖಂಡರನ್ನು ವಿಧಾನಸೌಧಕ್ಕೆ ಕರೆದೊಯ್ದಿದ್ದರು.

ಭೇಟಿಯ ವೇಳೆ, ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಎಚ್.ಸಿ ಮಹದೇವಪ್ಪ ಕೂಡ ಇದ್ದರು. ಹೋರಾಟಗಾರರ ನಿಯೋಗದೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಒಳ ಮೀಸಲಾತಿ ಜಾರಿಗೆ ತಾವು ಬದ್ಧ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಳಮೀಸಲಾತಿ ಜಾರಿಯಾಗುವ ತನಕ ಹೊಸ ನೇಮಕಾತಿಯನ್ನಾಗಲೀ ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬುವುದಾಗಲೀ ಮಾಡುವುದಿಲ್ಲ” ಎಂದು ಸಚಿವ ಮಹೇದೇವಪ್ಪ ಭರವಸೆ ನೀಡಿದ್ದಾರೆ.

ಪ್ರತಿಭಟನಾಕಾರರ ನಿಯೋಗದಲ್ಲಿ ಆಲ್ ಇಂಡಿಯ ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕ ಎಂ ಗೋಪಿನಾಥ್, ರಾಜ್ಯ ಸಂಯೋಜಕ ಆರ್ ಮುನಿಯಪ್ಪ, ಆರ್‌ಪಿಐ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎನ್ ಮೂರ್ತಿ, ಡಿಎಸ್ಎಸ್ ರಾಜ್ಯ ಸಂಚಾಲಕ ಶಿವಮೊಗ್ಗ ಗುರುಮೂರ್ತಿ, ಎಂಆರ್‌ಎಚ್‌ಎಸ್‌ನ ರಾಜ್ಯಾಧ್ಯಕ್ಷ ಶಿವರಾಯ ಅಕ್ಕರಕಿ, ಕಾರ್ಯಾಧ್ಯಕ್ಷ ಕೇಶವಮೂರ್ತಿ, ಸಮಗಾರ ಹರಳಯ್ಯ ಸಮಾಜದ ರಾಜ್ಯ ಸಂಚಾಲಕ ವೈ.ಸಿ ಕಾಂಬಳೆ, ಡೋಹರ ಸಮಾಜದ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಚಕ್ರವರ್ತಿ, ಅಲೆಮಾರಿ ಒಕ್ಕೂಟದ ಅಧ್ಯಕ್ಷ ಹನುಮಂತಪ್ಪ, ಮಾದಿಗ ದಂಡೋರಾದ ಶ್ರೀನಿವಾಸ್ ಮತ್ತು ಕೆ.ವಿ ರಾಜು, ದಕ್ಕಲಿಗ ಸಂಘಟನೆ ಶಾಂತರಾಜು, ಅಹಿಂದ ಸಂಘದ ರಾಜ್ಯಾಧ್ಯಕ್ಷ ಮುತ್ತುರಾಜು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...