‘ಬೆಂಗಳೂರು ಹಬ್ಬ’ಕ್ಕೆ ಸರ್ಕಾರದ ಸಹಕಾರ: ಸಿಎಂ ಸಿದ್ದರಾಮಯ್ಯ ಭರವಸೆ

Date:

  • ‘ನಗರದ ಇತಿಹಾಸ, ಪರಂಪರೆ ಉಳಿಸಿ ಬೆಳೆಸಬೇಕು’
  • ‘ನಗರದ ಜನರೆಲ್ಲ ಸಂಭ್ರಮದಿಂದ ಭಾಗವಹಿಸಬೇಕು’

‘ಬೆಂಗಳೂರು ಹಬ್ಬ’ದಂತಹ ಹಬ್ಬಗಳ ಮೂಲಕ ಬೆಂಗಳೂರಿನ ಇತಿಹಾಸ, ಕಲೆ, ಸಂಸ್ಕೃತಿ, ಪರಂಪರೆಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗೃಹಕಚೇರಿ ಕೃಷ್ಣಾದಲ್ಲಿ ಪ್ರಶಾಂತ್ ಪ್ರಕಾಶ್ ಹಾಗೂ ಮಾಲಿನಿ ಗೋಯಲ್ ಅವರು ಬರೆದಿರುವ ‘Unboxing Bengaluru, The City of New Beginnings’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.

ಬೆಂಗಳೂರು ಹಬ್ಬಕ್ಕೆ ಎಲ್ಲ ಸಹಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“Unboxing Bengaluru, The City of New Beginnings’ ಪುಸ್ತಕವನ್ನು ಇಂಗ್ಲಿಷ್ ಜೊತೆಗೆ ಕನ್ನಡದಲ್ಲಿಯೂ ಹೊರತಂದಿದ್ದರೆ ಇನ್ನೂ ಉತ್ತಮವಾಗಿರುತ್ತಿತ್ತು. ಪ್ರಶಾಂತ್ ಪ್ರಕಾಶ್ ಹಾಗೂ ಮಾಲಿನಿ ಗೋಯಲ್ ಅವರು ಬೆಂಗಳೂರು ಹಬ್ಬ ಆಯೋಜಿಸುತ್ತಿರುವುದು ಸಂತೋಷದ ವಿಚಾರ. ಬೆಂಗಳೂರು ಹಬ್ಬಕ್ಕೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಎಸಿಗೆ ಅದಾನಿ ಆಪ್ತನ ನೇಮಕ; ಪ್ರಧಾನಿ ಮೋದಿ ಯಾರ ಪ್ರಧಾನ ಸೇವಕ?

ಎಲ್ಲರೂ ಕನ್ನಡಿಗರಾಗಿ ಬಾಳಬೇಕು

“ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರ. ಐತಿಹಾಸಿಕ ಮಹತ್ವವಿರುವ ಬೆಂಗಳೂರು ನಗರವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಯೋಜನಾಬದ್ಧವಾಗಿ ಬೆಳೆಸಬೇಕಾಗಿತ್ತು. ನಗರದಲ್ಲಿ ಸುಮಾರು ಒಂದೂವರೆ ಕೋಟಿ ಜನರಿದ್ದಾರೆ. ಬೆಂಗಳೂರು ನಗರದಲ್ಲಿ, ಇಲ್ಲಿನ ಸಂಸ್ಕೃತಿ, ಕಲೆ, ಜನಜೀವನ, ನಾಗರಿಕತೆಗಳನ್ನು ಉಳಿಸಿಕೊಂಡು ಬರಲಾಗಿದೆ. ದೇಶ ವಿದೇಶಗಳಿಂದ ಉದ್ಯೋಗವರಿಸಿ ಜನ ನಗರದಲ್ಲಿ ನೆಲೆಸಿದ್ದರೂ ಕೂಡ ಎಲ್ಲರೂ ಕನ್ನಡಿಗರಾಗಿ ಬಾಳಬೇಕು. ನಾವೆಲ್ಲಾ ಕನ್ನಡಿಗರಾಗಿ, ಪರಸ್ಪರ ಪ್ರೀತಿ ವಿಶ್ವಾಸಗಳೊಂದಿಗೆ ಸೌಹಾರ್ದತೆಯಿಂದ ಬಾಳಬೇಕು” ಎಂದು ಕರೆ ನೀಡಿದರು.

ಜನರು ಸಂಭ್ರಮದಿಂದ ಭಾಗವಹಿಸಲಿ 

“ಬೆಂಗಳೂರು ನಗರದಲ್ಲಿ ಬಹಳ ಹಿಂದಿನಿಂದಲೂ ಕಡ್ಲೆಕಾಯಿ ಪರಿಷೆಯಂತಹ ಸಾಂಪ್ರಾದಾಯಿಕ ಆಚರಣೆಗಳನ್ನು ಮಾಡಿಕೊಂಡು ಬರಲಾಗುತ್ತಿದೆ. ಈ ಜಾತ್ರೆಯಲ್ಲಿ ಬೆಂಗಳೂರಿಗರು ಬಹಳ ಸಂಭ್ರಮದಿಂದ ಭಾಗವಹಿಸುತ್ತಾರೆ. ಅಂತೆಯೇ ತಾವು ಆಯೋಜಿಸುವ ಬೆಂಗಳೂರು ಹಬ್ಬದಲ್ಲಿ, ನಗರದ ಜನರೆಲ್ಲ ಸಂಭ್ರಮದಿಂದ ಭಾಗವಹಿಸಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...