ರಾಜ್ಯದ ರೈತರಿಗೆ ₹105 ಕೋಟಿ ಬರ ಪರಿಹಾರ ಬಿಡುಗಡೆಗೊಳಿಸಿದ ಸರ್ಕಾರ

Date:

ಕೇಂದ್ರ ಸರ್ಕಾರವು ಎನ್‌ಡಿಆರ್‌ಎಫ್‌(NDRF)ನ ಅಡಿಯಲ್ಲಿ ಈವರೆಗೂ ಬರಪರಿಹಾರ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಸದ್ಯಕ್ಕೆ ಬೆಳೆಹಾನಿ ಪರಿಹಾರದ ರೂಪದಲ್ಲಿ ಮೊದಲನೇ ಕಂತಾಗಿ ರಾಜ್ಯ ಸರ್ಕಾರವು ಇಂದು(ಜ.5) ₹105 ಕೋಟಿ ಬರ ಪರಿಹಾರ ಬಿಡುಗಡೆಗೊಳಿಸಿದೆ.

ಅರ್ಹ ರೈತರಿಗೆ ಗರಿಷ್ಠ 2000 ರೂ.ವರೆಗೆ ಪಾವತಿಸಲು 2023-24ನೇ ಸಾಲಿನಲ್ಲಿ 105 ಕೋಟಿ ರೂ. ಅನುದಾನವನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ (ಎಸ್‌ಡಿಆರ್‌ಎಫ್‌) ರಾಜ್ಯ ಸರ್ಕಾರ ಮಂಜೂರು ಮಾಡಿದೆ.

ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್‌ ಅನುದಾನ ಬಿಡುಗಡೆ ಆದ ನಂತರ ಎಸ್‌ಡಿಆರ್‌ಎಫ್‌ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆ ಇರುವ ರೈತರಿಗೆ ಹೆಚ್ಚುವರಿ ಬೆಳೆಹಾನಿ ಪರಿಹಾರ ಬಿಡುಗಡೆಗೊಳಿಸಲಾಗುವುದು ಎಂದು ಸರ್ಕಾರವು ಆದೇಶದಲ್ಲಿ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರ್ಗಸೂಚಿಯ ಪ್ರಕಾರ ಶೇ.33ಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಬೆಳೆಹಾನಿಯಾಗಿರುವ ಮಳೆಯಾಶ್ರಿತ ಬೆಳೆಗಳಿಗೆ ಕನಿಷ್ಠ ₹1000 ಮತ್ತು ನೀರಾವರಿ ಬೆಳೆಗಳಿಗೆ ₹2000 ಹಾಗೂ ಬಹುವಾರ್ಷಿಕ ಬೆಳೆಗಳಿಗೆ ₹2,500 ಮತ್ತು ಪ್ರತಿ ರೈತರಿಗೆ ಗರಿಷ್ಠ ಎರಡು ಹೆಕ್ಟೆರ್‌ಗೆ ಸೀಮಿತಗೊಳಿಸಿ, ಮಳೆಯಾಶ್ರಿತ ಬೆಳೆಗಳಿಗೆ ಗರಿಷ್ಠ ₹17,000 ಮತ್ತು ನೀರಾವರಿ ಬೆಳೆಗಳಿಗೆ ಗರಿಷ್ಠ ₹34,000 ಹಾಗೂ ಬಹುವಾರ್ಷಿಕ ಬೆಳೆಗಳಿಗೆ ಗರಿಷ್ಠ ₹45,000ದಂತೆ ಅರ್ಹ ರೈತರಿಗೆ ಪ್ರಮುಖ ಷರತ್ತುಗಳೊಂದಿಗೆ ಬೆಳೆಹಾನಿ ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...