ರೈತರ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ: ಪ್ರಧಾನಿ ಮೋದಿ

Date:

ರೈತರ ಕಲ್ಯಾಣಕ್ಕಾಗಿ ತನ್ನ ಭರವಸೆಯನ್ನು ಈಡೇರಿಸುವಲ್ಲಿ ಸರ್ಕಾರ ಬದ್ಧವಾಗಿದೆ. ಕಬ್ಬಿನ ಬೆಲೆಯಲ್ಲಿ ‘ಐತಿಹಾಸಿಕ’ ಹೆಚ್ಚಳವು ಅಂತಹ ಪ್ರಯತ್ನಗಳ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬುಧವಾರ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಅಕ್ಟೋಬರ್‌ನಿಂದ ಪ್ರಾರಂಭವಾಗುವ 2024-25ರ ಕೃಷಿ ಹಂಗಾಮಿಗೆ ಕಬ್ಬು ಬೆಳೆಗಾರರಿಗೆ ಪಾವತಿಸುವ ‘ನ್ಯಾಯೋಚಿತ ಮತ್ತು ಲಾಭದಾಯಕ ಬೆಲೆ’ (ಎಫ್‌ಆರ್‌ಪಿ)ಯನ್ನು 25 ರೂ.ನಿಂದ 340 ರೂ.ವರೆಗೆ ಹೆಚ್ಚಿಸಿದೆ.

ಈ ಬಗ್ಗೆ ‘ಎಕ್ಸ್‌’ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಕಬ್ಬು ಬೆಲೆ ಏರಿಕೆಯಿಂದ ಕೋಟ್ಯಂತರ ಕಬ್ಬು ರೈತರಿಗೆ ಅನುಕೂಲವಾಗಲಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರ್ಧಾರದ ನಂತರ ಅಧಿಕೃತ ಹೇಳಿಕೆಯು, “ಕಬ್ಬುಬೆಳೆಯುವ ರೈತರ ಏಳಿಗೆಯನ್ನು ಹೊಸ ಎಫ್‌ಆರ್‌ಪಿ ಖಚಿತಪಡಿಸುತ್ತದೆ. ಭಾರತವು ಈಗಾಗಲೇ ವಿಶ್ವದಲ್ಲಿಯೇ ಕಬ್ಬಿಗೆ ಅತ್ಯಧಿಕ ಬೆಲೆಯನ್ನು ಪಾವತಿಸುತ್ತಿದೆ ಎಂಬುದು ಗಮನಾರ್ಹ. ಅದರ ಹೊರತಾಗಿಯೂ ಸರ್ಕಾರವು ದೇಶೀಯ ಗ್ರಾಹಕರಿಗೆ ಅಗ್ಗದ ಬೆಲೆಗೆ ಸಕ್ಕರೆ ದೊರೆಯುವಂತೆ ಮಾಡಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ?: ‘ರೈತರ ಹತ್ಯೆ’ಗೆ ಇತಿಹಾಸ ಬಿಜೆಪಿಯಿಂದ ಉತ್ತರ ಕೇಳುತ್ತದೆ; ರೈತನ ಸಾವಿಗೆ ರಾಹುಲ್ ಗಾಂಧಿ ಸಂತಾಪ

ಅಂದಹಾಗೆ, ಕೇಂದ್ರ ಸರ್ಕಾರ ಲಿಖಿತವಾಗಿ ಭರವಸೆ ನೀಡಿದ್ದ ಎಂಎಸ್‌ಪಿ, ರೈತ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ‘ದೆಹಲಿ ಚಲೋ’ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್‌ನಿಂದ ದೆಹಲಿಗೆ ಬರುತ್ತಿದ್ದ ರೈತರನ್ನು ಹರಿಯಾಣ ಗಡಿಯಲ್ಲಿ ತಡೆಯಾಗಿದೆ. ರೈತರ ಹಾದಿಗೆ ಬ್ಯಾರಿಕೇಡ್‌ಗಳು, ಸಿಮೆಂಟ್‌ ಬ್ಲಾಕ್‌ಗಳು, ಮುಳ್ಳಿನ ತಂತಿಗಳು, ಕಬ್ಬಿಣದ ಮೊಳೆಗಳನ್ನು ಹಾಕಲಾಗಿದೆ. ಅದನ್ನೂ ಮೀರಿ ದೆಹಲಿಯತ್ತ ಹೊರಟಿದ್ದ ರೈತರ ಮೇಲೆ ಪೊಲೀಸರು ಟಿಯರ್ ಗ್ಯಾಸ್, ರಬ್ಬರ್ ಗುಂಡಿನ ದಾಳಿ ಮಾಡಿದ್ದಾರೆ. ಬುಧವಾರ ನಡೆದ ರಬ್ಬರ್ ಗುಂಡಿನ ದಾಳಿಯಲ್ಲಿ ರೈತರೊಬ್ಬರು ಸಾವನ್ನಪ್ಪಿದ್ದಾರೆ.

ರೈತರು ಪ್ರತಿಭಟನೆ ನಡೆಸುತ್ತಿರುವ ವೇಳೆ, ಅವರನ್ನು ದೆಹಲಿಗೂ ಬರಲು ಬಿಡದೆ, ದೌರ್ಜನ್ಯ ಎಸಗುತ್ತಿರುವ ಕೇಂದ್ರ ಸರ್ಕಾರ, ಕಬ್ಬು ಬೆಳಗಾರರಿಗೆ ನೀಡುವ ದರದ ಬೆಲೆ ಹೆಚ್ಚಿಸಿ, ತಾವು ರೈತರ ಪರವಾಗಿದ್ದೇವೆ. ರೈತರ ಹಿತಾಸಕ್ತಿಗೆ ಬದ್ದರಾಗಿದ್ದೇವೆ ಎಂದು ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...